ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯ : ಇಂಗಳೆ
The service of ASHA workers is commendable: Ingale
ಲೋಕದರ್ಶನ ವರದಿ
ವಿಜಯಪುರ 24 : ಕರ್ನಾಟಕದ ಆರೋಗ್ಯ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ಸುರಕ್ಷೆತೆಗಾಗಿ ಆಶಾ ಕಾರ್ಯಕರ್ತೆಯರು ಮಾಡುವ ಕಾರ್ಯವು ಅತ್ಯಂತ ಕಷ್ಟದಾಯಕವಾಗಿರುವಂತಹದು. ಮುಖ್ಯವಾಗಿ ಗ್ರಾಮೀಣ ಪ್ರದೇಶದಲ್ಲಿ ಆಶಾ ಕಾರ್ಯಕರ್ತೆಯರು ಸಾರ್ವಜನಿಕರು ಹಾಗೂ ಆರೋಗ್ಯ ಇಲಾಖೆಯ ನಡುವೆ ಪ್ರಮುಖ ಕೊಂಡಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅಂತಹ ಆರೋಗ್ಯ ಸೇವಕಿಯರಾದ ಆಶಾ ಕಾರ್ಯಕರ್ತೆಯರ ಸೇವೆ ಶ್ಲಾಘನೀಯವಾದದ್ದು ಎಂದು ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದ ಕಾರ್ಯದರ್ಶಿ ಲಾಯಪ್ಪ ಇಂಗಳೆ ಹೇಳಿದರು.
ವಿಜಯಪುರ ನಗರದ ನಿವಾಸಿ ಗೀತಾ ಹೆಚ್ ಅವರು "ವಿಜಯಪುರ ಜಿಲ್ಲೆಯ ಆಶಾ ಕಾರ್ಯಕರ್ತೆಯರ ಕುರಿತು ಒಂದು ಅಧ್ಯಯನ" ಎಂಬ ವಿಷಯದಲ್ಲಿ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾನಿಲಯವು ಪಿಎಚ್‌ಡಿ ಪದವಿ ನೀಡಿದ ಹಿನ್ನೆಲೆಯಲ್ಲಿ ಶಿವಶರಣ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಸ್ಥೆ ಹಾಗೂ ಕನ್ನಡದ ಕಟ್ಟಾಳು ಗಂಗಾಧರ ಕೋರಳ್ಳಿ ಪ್ರತಿಷ್ಠಾನದಿಂದ ಸನ್ಮಾನಿಸಿ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಶಿವಶರಣ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ಹಾಗೂ ವಿವಿಧೋದ್ದೇಶಗಳ ಸಂಸ್ಥೆ ಅಧ್ಯಕ್ಷ ಕಲ್ಲಪ್ಪ ಶಿವಶರಣ ಮಾತನಾಡಿ, ಸಾರ್ವಜನಿಕ ಕ್ಷೇತ್ರದಲ್ಲಿ ಕೆಳಹಂತದಲ್ಲಿ ಕೆಲಸ ನಿರ್ವಹಿಸುವ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರು ದಿನಗೂಲಿ ಕಾರ್ಮಿಕರು ಸೇರಿದಂತೆ ತುಳಿತಕ್ಕೊಳಗಾದ ಸಮಾಜದ ಜನರ ಕುರಿತು ಹೆಚ್ಚು ಹೆಚ್ಚು ಅಧ್ಯಯನಗಳು ನಡೆದು ಅವರು ಸಲ್ಲಿಸುವ ಸೇವೆ, ಕಷ್ಟ ಕಾರ್ಪಣಯಗಳ ಕುರಿತು ಬೆಳಕು ಚೆಲ್ಲವ ಕಾರ್ಯ ಆಗಬೇಕು. ಆ ನಿಟ್ಟಿನಲ್ಲಿ ಗೀತಾ ಹೆಚ್ ಅವರು ಮಂಡಿಸಿದ ಪ್ರಬಂಧ ಮಾದರಿಯಾಗಿದೆ ಎಂದರು. ಈ ಸಂದರ್ಭದಲ್ಲಿ ಉಪನ್ಯಾಸಕಿ ಡಾ. ಗೀತಾ ಸಿ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 