ಮರಿಶಾಂತವೀರ ಮಹಾಸ್ವಾಮೀಜಿಗಳ ಸೇವೆ ಸ್ಮರಣೀಯ: ಡಾ. ನಾಗರಾಜ ದಂಡೋತಿ
The service of Marishanthaveera Mahaswamiji is memorable: Dr. Nagaraja Dandothi
ಲೋಕದರ್ಶನ ವರದಿ
ಕೊಪ್ಪಳ 10: ಗವಿಮಠವು 18 ಪೀಠಾಧಿಪತಿಗಳ ಭವ್ಯ ಪರಂಪರೆಯನ್ನು ಹೊಂದಿದ್ದು, ವಾರಾಣಸಿಯಿಂದ ಆಗಮಿಸಿದ ರುದ್ರಮುನಿ ಶಿವಯೋಗಿಗಳಿಂದ ಮಠ ಸ್ಥಾಪನೆಯಾಯಿತು. ಪ್ರಸ್ತುತ ಶ್ರೀ ಮ.ನಿ.ಪ್ರ.ಸ್ವ. ಜಗದ್ಗುರು ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳು 18ನೇ ಪೀಠಾಧಿಪತಿಗಳಾಗಿ ಮಠವನ್ನು ಮುನ್ನಡೆಸುತ್ತಿದ್ದಾರೆ ಎಂದು ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ನಾಗರಾಜ ದಂಡೋತಿ ಹೇಳಿದರು.
ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಶುಕ್ರವಾರ ನಡೆದ 16ನೇ ಪೀಠಾಧಿಪತಿ ಲಿಂ. ಮರಿಶಾಂತವೀರ ಮಹಾಸ್ವಾಮೀಜಿಗಳ 59ನೇ ಪುಣ್ಯಸ್ಮರಣೆ ಹಾಗೂ ಶ್ರೀ ಗವಿಸಿದ್ಧೇಶ್ವರ ವಿದ್ಯಾವರ್ಧಕ ಟ್ರಸ್ಟ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.
16ನೇ ಪೀಠಾಧಿಪತಿಗಳಾದ ಮರಿಶಾಂತವೀರ ಮಹಾಸ್ವಾಮೀಜಿಗಳ ಮೂಲ ಹೆಸರು ಗುರುನಂಜಯ್ಯ. ಅವರು ಗದಗ ಜಿಲ್ಲೆಯ ರೋಣ ತಾಲೂಕಿನ ಸೂಡಿ ಗ್ರಾಮದ ಜುಕ್ತಿ ಹಿರೇಮಠ ಕುಟುಂಬದಲ್ಲಿ ಬಸವಲಿಂಗಯ್ಯ ಹಾಗೂ ಶಾಂತಮ್ಮ ದಂಪತಿಯ ಪುತ್ರರಾಗಿ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಸೂಡಿಯಲ್ಲಿ ಪೂರ್ಣಗೊಳಿಸಿದ ಅವರು, ಬಳಿಕ ಬಾಗಲಕೋಟೆ, ಸೊಲ್ಲಾಪುರ ಹಾಗೂ ಕಾಶಿಯಲ್ಲಿ ಉನ್ನತ ಶಿಕ್ಷಣ ಪಡೆದರು ಎಂದು ವಿವರಿಸಿದರು.
15ನೇ ಪೀಠಾಧಿಪತಿ ಶಿವಶಾಂತವೀರ ಮಹಾಸ್ವಾಮೀಜಿಗಳ ಆಶಯದಂತೆ 16ನೇ ಪೀಠಾಧಿಪತಿಯಾಗಿ ನೇಮಕಗೊಂಡ ಮರಿಶಾಂತವೀರ ಮಹಾಸ್ವಾಮೀಜಿಗಳು ಶಿಕ್ಷಣದ ಮಹತ್ವ ಅರಿತು ಅನೇಕ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಈ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿದರು. 1951ರಲ್ಲಿ ಕೊಪ್ಪಳದಲ್ಲಿ ಶಿಕ್ಷಣ ಸಂಸ್ಥೆ ಆರಂಭಿಸಿದ ಅವರು, 1963ರಲ್ಲಿ ಶ್ರೀ ಗವಿಸಿದ್ಧೇಶ್ವರ ವಿದ್ಯಾವರ್ಧಕ ಟ್ರಸ್ಟ್ ಸ್ಥಾಪಿಸಿ ಶಿಕ್ಷಣದ ಬೆಳಕು ಹರಡುವಲ್ಲಿ ಮಹತ್ವದ ಪಾತ್ರವಹಿಸಿದರು ಎಂದು ಹೇಳಿದರು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 