ಹಳೇ ವಿದ್ಯಾರ್ಥಿಗಳ ಸೇವೆ ಶ್ಲಾಘನೀಯ : ಹೇಮಾವತಿ ಪೂರ್ಣಚಂದ್ರ
The service of former students is commendable: Hemavati Poornachandra
ಕಂಪ್ಲಿ:ಆ.17. ಕಂಪ್ಲಿ ಸಕ್ಕರೆ ಕಾರ್ಖಾನೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಅಭಿವೃದ್ಧಿಯಲ್ಲಿ ಹಳೇ ವಿದ್ಯಾರ್ಥಿಗಳ ಸೇವೆ ಶ್ಲಾಘನೀಯ ಎಂದು ಪುರಸಭೆ ಸದಸ್ಯೆ ಹೇಮಾವತಿ ಪೂರ್ಣಚಂದ್ರ ಹೇಳಿದರು.
ಪಟ್ಟಣದ ಸಕ್ಕರೆ ಕಾರ್ಖಾನೆಯ 21ನೇ ವಾರ್ಡಿನ ಸ.ಹಿ.ಪ್ರಾ ಶಾಲೆಯಲ್ಲಿ ಹಳೇ ವಿದ್ಯಾರ್ಥಿ ಶ್ರೀನಿವಾಸ ಅವರ ಪುತ್ರಿ ಎಸ್.ಪ್ರಶಾಂತಿಕ ಸಿಫಾರಸ್ಸಿನ ಮೇರೆಗೆ ಯನೈಟೆಡ್ ಸ್ಟೇಟ್ಸ್ ಮೂಲದ ಬೆಂಗಳೂರಿನ ಎನ್ ವಿಡಿಯಾ ಕಂಪನಿಯಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸ್ಕೂಲ್ ಬ್ಯಾಗ್‌ಗಳನ್ನು ವಿತರಣೆ ಮಾತನಾಡಿ, ಹಳೇ ವಿದ್ಯಾರ್ಥಿಗಳು ಮಾಡುತ್ತಿದ್ದ ಸೇವೆಯಿಂದ ಆ ಮಕ್ಕಳಿಗೆ ತುಂಬಾ ಅನುಕೂಲವಾಗುತ್ತಿದ್ದು, ಸರ್ಕಾರಿ ಶಾಲೆಗಳನ್ನು ದಾನಿಗಳು ಕೈ ಹಿಡಿಯಬೇಕೆಂದು ಕೋರಿದರು.
ಇಲ್ಲಿನ ಒಟ್ಟು 80 ಬ್ಯಾಗುಗಳನ್ನು ಕೊಡುಗೆಯಾಗಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಪ್ರಭಾಕರ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಲಿಂಗ, ಉಪಾಧ್ಯಕ್ಷ ರಾಮಾಂಜನೇಯಲು, ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 