ದೇಶದ ರಕ್ಷಣೆಯಲ್ಲಿ ಪೊಲೀಸರ ಸೇವೆ ಅವಿಸ್ಮರಣೀಯ: ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ
The service of the police in protecting the country is unforgettable: Deputy Commissioner Kavita S.
ದೇಶದ ರಕ್ಷಣೆಯಲ್ಲಿ ಪೊಲೀಸರ ಸೇವೆ ಅವಿಸ್ಮರಣೀಯ: ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ
ವಿಜಯನಗರ(ಹೊಸಪೇಟೆ), 23 : ನಮ್ಮ ದೇಶದ ರಕ್ಷಣೆಯಲ್ಲಿ ಸೈನಿಕರ ಮತ್ತು ಪೊಲೀಸರ ಸೇವೆ ಅವಿಸ್ಮರಣೀಯವಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಅವರು ಹೇಳಿದರು.
ಜಿಲ್ಲಾ ಪೊಲೀಸ್ ಕಾರ್ಯಾಲಯದ ಆವರಣದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಪೊಲೀಸರು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಪ್ರತಿಯೊಬ್ಬ ನಾಗರಿಕರನ್ನು ರಕ್ಷಸಿಸಲು ಅಪಾರ ಕೊಡುಗೆಯನ್ನು ನೀಡಿದ್ದಾರೆ. ಸೈನಿಕರು ದೇಶದ ಗಡಿಯಲ್ಲಿ ಸೇವೆ ಸಲ್ಲಿಸಿ ದೇಶವನ್ನು ರಕ್ಷಣೆ ಮಾಡಿದರೆ, ಪೊಲೀಸರು ಜನರ ಮದ್ಯೆ ಇದ್ದುಕೊಂಡೇ ಎಲ್ಲರಿಗೂ ರಕ್ಷಣೆ ನೀಡುತ್ತಾರೆ. ದೇಶದಲ್ಲಿ ಶಾಂತಿ ಮತ್ತು ಸುರಕ್ಷತೆ ಕಾಪಾಡಲು ತಮ್ಮ ವೈಯಕ್ತಿಕ ಜೀವನವನ್ನು ತ್ಯಾಗ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅವರ ಧೈರ್ಯ,ಶೌರ್ಯ ಮತ್ತು ಸಮರೆ್ಣ ಮನೋಭಾವಕ್ಕೆ ಸದಾ ಋಣಿಯಾಗಿರಬೇಕು. ಪ್ರವಾಹ, ಭಯೋತ್ಪಾದನೆಯಂತಹ ಹಲವಾರು ಆಪತ್ತು ವೇಳೆಯಲ್ಲಿ ನಮ್ಮನ್ನು ರಕ್ಷಿಸಲು ತಮ್ಮ ಜೀವದ ಹಂಗನ್ನು ತೊರೆದು ಕಾರ್ಯನಿರ್ವಹಿಸುವ ಪೊಲೀಸರ ಸೇವೆ ಮಹತ್ವದ್ದಾಗಿದೆ. ಕಾನೂನು ಪಾಲನೆ ಮತ್ತು ಇಲಾಖೆಯನ್ನು ಬಲಪಡಿಸಲು ಮತ್ತು ಪೊಲೀಸ್ ಅಧಿಕಾರಿ ಕಲ್ಯಾಣಕ್ಕಾಗಿ ಹೆಚ್ಚಿನ ಶ್ರಮ ವಹಿಸಬೇಕಾಗಿರುತ್ತದೆ. ಪೊಲೀಸರು ಮಾಡುವ ಸಮಾಜದ ರಕ್ಷಣೆಯ ಕಾರ್ಯಕ್ಕೆ ಪ್ರತಿಯೊಬ್ಬರು ಸಹ ಬೆಂಬಲಿಸಬೇಕು. ಜಿಲ್ಲೆಯಲ್ಲಿ ಇತ್ತೀಚೆಗೆ ಹುತಾತ್ಮರಾದ ಪೊಲೀಸ್ರ ಕುಟುಂಬಗಳಿಗೆ ನಾವೆಲ್ಲರೂ ಆತ್ಮಸ್ಥೈರ್ಯ ತುಂಬಬೇಕಾಗಿದೆ. ಹುತಾತ್ಮರ ತ್ಯಾಗವನ್ನು ಸ್ಮರಿಸುವುದು ಅಷ್ಟೇ ಅಲ್ಲ, ಅವರ ಕುಟುಂಬಗಳಿಗೆ ಬೆಂಬಲವಾಗಿ ನಿಲ್ಲುವುದು ನಮ್ಮ ಕರ್ತವ್ಯವಾಗಿರುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಅವರು ಮಾತನಾಡಿ, ರಾಷ್ಟ್ರದಾದ್ಯಂತ ಇಂದು ಪೊಲೀಸ್ ಹುತಾತ್ಮರ ದಿನ ಆಚರಿಸುತ್ತಿದ್ದು, ಈ ಮೂಲಕ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ಸಲ್ಲಿಸಲಾಗುತ್ತದೆ. ಅಕ್ಟೋಬರ್ 21, 1959ರಲ್ಲಿ ಸಿಆರ್ಿಎಫ್ ಪಡೆಯ ನೇತೃತ್ವ ವಹಿಸಿದ್ದ ಕರಣ್ಸಿಂಗ್ ಅವರು ಭಾರತದಲ್ಲಿ ಅತಿಕ್ರಮಣ ಮಾಡಿದ ಚೀನಾ ದೇಶದ ಸೈನಿಕರು ಮತ್ತು ಭಾರತೀಯ ಸಿಆರ್ಿಎಫ್ ಪೊಲೀಸರ ಮಧ್ಯೆ ನಡೆದ ಘರ್ಷಣೆಯಲ್ಲಿ ಭಾರತೀಯ ಹತ್ತು ಪೊಲೀಸರು ಹುತಾತ್ಮರಾದರು. 9 ಮಂದಿಯನ್ನು ಚೈನಾ ದೇಶದ ಸೈನಿಕರು, ಸೆರೆ ಹಿಡಿದುಕೊಳ್ಳುತ್ತಾರೆ. ಅದರ ಸ್ಮರಣಾರ್ಥವಾಗಿ ಪೊಲೀಸ ಹುತಾತ್ಮರ ದಿನಾಚರಣೆಯನ್ನು ಆಚರಿಸುತ್ತಾ ಬರಲಾಗುತ್ತಿದೆ. ಕರ್ತವ್ಯ ಪಾಲನೆಯಲ್ಲಿ ಪೊಲೀಸ್ ಪಡೆಗಳು ತಮ್ಮ ಜೀವನವನ್ನು ಮುಡಿಪಾಗಿಟ್ಟು ಹೋರಾಡಿದ ಹುತಾತ್ಮರನ್ನು ನಾವು ಸ್ಮರಿಸಬೇಕಾಗಿದೆ. ಸಿಆರ್ಿಎಫ್ ಜವಾನರು ಧೈರ್ಯ ಮತ್ತು ಆತ್ಮ ಸಮರೆ್ಣಯನ್ನು ಭಾರತ ದೇಶದ ಎಲ್ಲಾ ಪ್ರಜೆಗಳು ಸ್ಮರಿಸುತ್ತಾರೆ. ವೀರ ಮರಣವನ್ನಪ್ಪಿದ ಜವಾನರ ಸವಿನೆನಪಿಗಾಗಿ ಒಂದು ಸ್ಮಾರಕವನ್ನು ನಿರ್ಮಿಸಲಾಗಿದೆ. ತಮ್ಮ ಕರ್ತವ್ಯ ಪಾಲನೆಯಲ್ಲಿ ಪ್ರತಿ ವರ್ಷ ದೇಶದಲ್ಲಿ ಅನೇಕ ಪೊಲೀಸ್ ಸಿಬ್ಬಂದಿಯವರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ಅಂತಹ ಸ್ಮರಣೆಗಾಗಿ ಪ್ರತಿ ವರ್ಷ ಅಕ್ಟೋಬರ್ 21 ರ ದಿನಾಂಕದಂದು ಪೊಲೀಸ್ ದಿನಾಚರಣೆಯನ್ನು ನಡೆಸಲಾಗುತ್ತಿದೆ. ಕಳೆದ ಒಂದು ವರ್ಷದಲ್ಲಿ ನಮ್ಮ ದೇಶದಲ್ಲಿ ಹುತಾತ್ಮರಾದ 191 ಪೊಲೀಸ್ ಅಧಿಕಾರಿ, ಸಿಬ್ಬಂದಿಯವರಲ್ಲಿ ಕರ್ನಾಟಕ ರಾಜ್ಯದ 08 ಪೊಲೀಸ್ ಅಧಿಕಾರಿ, ಸಿಬ್ಬಂದಿಯವರು ಸಹ ಕರ್ತವ್ಯಪಾಲನೆಯಲ್ಲಿ ಹುತಾತ್ಮರಾದ ಪೊಲೀಸ್ರನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಸೇರಿದಂತೆ ಡಿ.ವೈ.ಎಸ್.ಪಿ.ಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಪೊಲೀಸ್ ಹುತಾತ್ಮರಿಗೆ ಗೌರವ ಸಮರೆ್ಣ: ಕಾರ್ಯಕ್ರಮದ ಆರಂಭದಲ್ಲಿ ಪೊಲೀಸ್ ಸ್ಮಾರಕಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಇತರೆ ಅಧಿಕಾರಿಗಳು ಹಾಗೂ ಹಲವು ಗಣ್ಯರು ಪುಷ್ಪನಮನ ಸಲ್ಲಿಸಿದರು. ಇತ್ತೀಚೆಗೆ ಹುತಾತ್ಮರಿಗೆ ಗೌರವ ಸಮರೆ್ಣಗಾಗಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಹಾಗೂ ಮೌನಾಚಾರಣೆ ಆಚರಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 