ಮೈಲೇಶ್ವರ ಗ್ರಾಮದ ಧರಣಿ ಸತ್ಯಾಗ್ರಹ 16ನೇ ದಿನಕ್ಕೆ, ಸ್ಥಳಕ್ಕೆ ಉಪವಿಭಾಗಧಿಕಾರಿ ಭೇಟಿ
The sit-in protest in Maileshwar village enters its 16th day, and the Deputy Divisional Officer visi
ತಾಳಿಕೋಟೆ 13 : ತಾಲ್ಲೂಕಿನ ಮೈಲೇಶ್ವರ ಗ್ರಾಮದ ಹತ್ತಿರ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕಾಗಿ ಗುರುತಿಸಲಾದ ಸ್ಥಳವನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಗುರುವಾರ 16ನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟಗಾರರು ತಮ್ಮ ಆಗ್ರಹವನ್ನು ಮುಂದುವರೆಸಿದ್ದಾರೆ. ಸ್ಥಳದ ಆಯ್ಕೆಯನ್ನು ರದ್ದುಪಡಿಸಿ ತಾಳಿಕೋಟೆ ಪಟ್ಟಣದಲ್ಲಿಯೇ ಪ್ರಜಾಸೌಧ ಕಟ್ಟಡ ನಿರ್ಮಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಸ್ಥಳೀಯರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ ಅವರು ಗುರುವಾರ ಧರಣಿ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಅವರನ್ನು ಮನವೊಲಿಸಲು ಪ್ರಯತ್ನಿಸಿದರು. ಆದರೆ ಮಾತುಕತೆ ಯಾವುದೇ ನಿರ್ಣಾಯಕ ಫಲಿತಾಂಶಕ್ಕೆ ತಲುಪದೇ ವಿಫಲವಾಯಿತು.ಧರಣಿ ನಿರತರು ಅಧಿಕಾರಿಗಳ ಮುಂದೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿ, ಈಗಾಗಲೇ ನಿಗದಿಪಡಿಸಿರುವ ಮೈಲೇಶ್ವರ ಬಳಿಯ ಪ್ರಜಾಸೌಧ ಸ್ಥಳ ನಿರ್ಜನ ಪ್ರದೇಶದಲ್ಲಿದ್ದು ಸಾರ್ವಜನಿಕರಿಗೆ ಸುಲಭವಾಗಿ ತಲುಪಲು ಸಾಧ್ಯವಿಲ್ಲ ಎಂದು ಹೇಳಿದರು. ಅಲ್ಲದೆ, ಆ ಪ್ರದೇಶ ಮಹಿಳೆಯರು ಹಾಗೂ ಸಾಮಾನ್ಯ ನಾಗರಿಕರ ಸುರಕ್ಷತೆ ದೃಷ್ಟಿಯಿಂದಲೂ ಅನುಕೂಲಕರವಾಗಿಲ್ಲ ಎಂದು ಅಭಿಪ್ರಾಯಪಟ್ಟರು.
ಸರ್ಕಾರಿ ಕಚೇರಿ ಕಟ್ಟಡಗಳು ಸಾಮಾನ್ಯ ಜನರಿಗೆ ಸುಲಭವಾಗಿ ತಲುಪುವಂತ ಸ್ಥಳದಲ್ಲಿರಬೇಕು ಎಂಬುದನ್ನು ಅವರು ಒತ್ತಿಹೇಳಿದರು.ಆದ್ದರಿಂದ ಮೈಲೇಶ್ವರ ಬಳಿಯ ಗುರುತಿಸಲಾದ ಸ್ಥಳವನ್ನು ತಕ್ಷಣವೇ ರದ್ದುಪಡಿಸಿ ತಾಳಿಕೋಟೆ ಪಟ್ಟಣದಲ್ಲಿಯೇ ಇರುವ ಸರ್ಕಾರಿ ಜಾಗಗಳಲ್ಲಿ ಪ್ರಜಾಸೌಧ ಕಟ್ಟಡವನ್ನು ನಿರ್ಮಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು. ನಮ್ಮ ಬೇಡಿಕೆ ಈಡೇರುವವರೆಗೆ ಧರಣಿ ಸತ್ಯಾಗ್ರಹವನ್ನು ಮುಂದುವರೆಸುತ್ತೇವೆ, ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವ ಮಾತೆ ಇಲ್ಲ ಎಂದು ಪ್ರತಿಭಟನಾಕಾರರು ಸ್ಪಷ್ಟಪಡಿಸಿದರು. ಮಾತುಕತೆ ವಿಫಲವಾದ ಬಳಿಕ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ ಅವರು ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು.
ಒಂದು ವೇಳೆ , ಸಮಸ್ಯೆಗೆ ಶೀಘ್ರದಲ್ಲಿ ಪರಿಹಾರ ದೊರೆಯದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೋರಾಟಗಾರರು ಎಚ್ಚರಿಕೆ ನೀಡಿದರು . ಅಗತ್ಯವಿದ್ದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಅವರು ತಿಳಿಸಿದ್ದಾರೆ.ಧರಣಿ ಸ್ಥಳದಲ್ಲಿ ಹೋರಾಟ ಸಮಿತಿ ಅಧ್ಯಕ್ಷ ದಶರಥಸಿಂಗ ಮನಗೂಳಿ ಮಾತನಾಡಿ, ಪ್ರಜಾಸೌಧ ಕಟ್ಟಡವು ಜನಸಾಮಾನ್ಯರಿಗೆ ಅನುಕೂಲವಾಗುವಂತಹ ಕೇಂದ್ರಿಯ ಸ್ಥಳದಲ್ಲಿರಬೇಕು. ನಿರ್ಜನ ಪ್ರದೇಶದಲ್ಲಿ ನಿರ್ಮಾಣ ಮಾಡಿದರೆ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹೋರಾಟ ಸಮಿತಿ ಪದಾಧಿಕಾರಿಗಳಾದ ಎಸ್.ಬಿ. ಕಟ್ಟಿಮನಿ, ಮುತ್ತಪ್ಪ ಚಮಲಾಪುರ, ಮಾಸೂಮಸಾ ಕೆಂಭಾವಿ, ಕಾಶಿನಾಥ ಮುರಾಳ, ವಿಜಯಸಿಂಗ ಹಜೇರಿ, ಪರಶುರಾಮ ತಂಗಡಗಿ, ಗಂಗಾಧರ ಕಸ್ತೂರಿ, ಮೈಬೂಬ ಚೋರಗಸ್ತಿ, ನಾಗೇಶ ಕಟ್ಟಿಮನಿ, ದೇವೇಂದ್ರ ಹಾದಿಮನಿ, ಪ್ರಕಾಶ ಹಜೇರಿ, ಸುರೇಶ ಹಜೇರಿ, ಮಹೇಶ ಚಲವಾದಿ, ರವಿ ಕಟ್ಟಿಮನಿ, ಅಮಿತಸಿಂಗ ಮನಗೂಳಿ, ರತನ ಹಜೇರಿ, ಸಿರಸಕುಮಾರ ಹಜೇರಿ ಸೇರಿದಂತೆ ಹಲವರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 