72,186 ಹುದ್ದೆಗಳ ಭರ್ತಿಗೆ ಮುಂದಾಗಿರುವ ರಾಜ್ಯಸರ್ಕಾರದ ನಿರ್ಧಾರ
The state government's decision to fill 72,186 posts
ಹುಬ್ಬಳ್ಳಿ 26 : ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ರಾಜ್ಯ ಸರ್ಕಾರ 72,186 ಹುದ್ದೆಗಳ ಭರ್ತಿಗೆ ಮುಂದಾಗಿದ್ದು, 6 ತಿಂಗಳ ನಿಗದಿತ ಕಾಲಮಿತಿಯೊಳಗೆ ನೇಮಕಾತಿಗಳನ್ನು ಪೂರ್ಣಗೊಳಿಸಲು ಹಾಗೂ ಇದರ ಉಸ್ತುವಾರಿಗೆ ರಾಜ್ಯಮಟ್ಟದ ಅಧಿಕಾರಿಗಳನ್ನು ನೇಮಿಸಿರುವುದನ್ನು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಸ್ವಾಗತಿಸಿದರು. ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ನೇತೃತ್ವದಲ್ಲಿ ಕಳೆದ ಸೆಪ್ಟೆಂಬರ್ ತಿಂಗಳಿನಿಂದ ಧಾರವಾಡದಿಂದ ಆರಂಭವಾದ ಹೋರಾಟ ರಾಜ್ಯವ್ಯಾಪಿ ವಿಸ್ತರಿಸಿ ಬಲಿಷ್ಠವಾಗಿ ರೂಪುಗೊಂಡ ಪ್ರತಿಫಲವಾಗಿ ಸರ್ಕಾರ ಹುದ್ದೆಗಳ ಭರ್ತಿಗೆ ಮುಂದಾಗಿದೆ. ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯ ಸಲಹೆಗಾರರಾದ ಮಾಜಿ ಲೋಕಾಯುಕ್ತರಾದ ಜಸ್ಟಿಸ್ ಸಂತೋಷ್ ಹೆಗ್ಡೆ, ಹಿರಿಯ ಸಾಮಾಜಿಕ ಹೋರಾಟಗಾರರಾದ ಎಸ್. ಆರ್. ಹಿರೇಮಠ್, ರಾಮಾಂಜನಪ್ಪ ಆಲ್ದಳ್ಳಿ, ಡಾ. ಜಿ. ಶಶಿಕುಮಾರ್ ಅವರ ಮಾರ್ಗದರ್ಶನದಲ್ಲಿ ಈ ಹೋರಾಟ ಗಟ್ಟಿ ವೈಚಾರಿಕ ತಳಹದಿಯ ಮೇಲೆ ರೂಪುಗೊಂಡಿತ್ತು.
ಈ ಹೋರಾಟದ ಸಂದರ್ಭದಲ್ಲಿ ಸರ್ಕಾರ ಪೊಲೀಸರ ಮೂಲಕ ಹೋರಾಟಗಳನ್ನು ಹತ್ತಿಕ್ಕಲು ಪ್ರಯತ್ನಿಸಿದಾಗಲೂ ಉದ್ಯೋಗಾಕಾಂಕ್ಷಿಗಳು ಹೋರಾಟ ಸಮಿತಿಯ ನೇತೃತ್ವದಲ್ಲಿ ಸಮರಶೀಲ ಹೋರಾಟಗಳನ್ನು ನಡೆಸಿದ್ದರು. ಪೊಲೀಸರು ಹೋರಾಟ ಸಮಿತಿಯ ನಾಯಕರನ್ನು ಹಲವು ಸಲ ಬಂಧಿಸಿದ್ದರು, ಪ್ರಕರಣಗಳನ್ನೂ ದಾಖಲಿಸಿದ್ದರು. ವಿಜಯಪುರ, ಬೆಳಗಾವಿ, ಕಲಬುರ್ಗಿ, ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯನಗರ, ಬಳ್ಳಾರಿ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ನಿರಂತರವಾಗಿ ನಡೆದ ಹೋರಾಟಗಳು ಸರ್ಕಾರದ ಮೇಲೆ ತೀವ್ರ ಒತ್ತಡವನ್ನು ಸೃಷ್ಟಿ ಮಾಡಿವೆ.ಈಗ ರಾಜ್ಯಸರ್ಕಾರ ಮತ್ತೆ ಯಾವುದೇ ಕುಂಟು ನೆಪಗಳನ್ನು ನೀಡದೇ ಕೂಡಲೇ ಈ ಎಲ್ಲಾ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಬೇಕು, ಎಲ್ಲಾ ರೀತಿಯ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಿ, ಪಾರದರ್ಶಕ ನೇಮಕಾತಿಗಾಗಿ ಕೆಪಿಎಸ್ಸಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಪಿ.ಸಿ. ಹೋಟಾ ಸಮಿತಿಯ ವರದಿಯನ್ನು ತಕ್ಷಣವೇ ಜಾರಿಗೊಳಿಸಬೇಕು.
ಈಗ ಅರ್ಜಿ ಕರೆದಿರುವ ಪೊಲೀಸ್ ನೇಮಕಾತಿ ಸೇರಿದಂತೆ ಎಲ್ಲಾ ನೇಮಕಾತಿಗಳ ದುಬಾರಿ ಅರ್ಜಿ ಶುಲ್ಕವನ್ನು ಕೈಬಿಡಬೇಕು ಹಾಗೂ ನೇಮಕಾತಿ ಪರೀಕ್ಷೆ ಸಂದರ್ಭದಲ್ಲಿ ಅಭ್ಯರ್ಥಿಗಳಿಗೆ ಉಚಿತ ಸಾರಿಗೆ ಒದಗಿಸಬೇಕು ಎಂದು ಈ ಮೂಲಕ ಆಗ್ರಹಿಸಿದರು. ಅದೇ ರೀತಿ ಸರ್ಕಾರವು ಅನುಮೋದನೆ ನೀಡಿದ ಎಲ್ಲಾ ಹುದ್ದೆಗಳಿಗೂ ಅಧಿಸೂಚನೆ ಹೊರಡಿಸುವವರೆಗೂ ಉದ್ಯೋಗಾಕಾಂಕ್ಷಿಗಳು ಎಚ್ಚರದಿಂದಿರಬೇಕು ಹಾಗೂ ರಾಜ್ಯಸರ್ಕಾರ ನುಡಿದಂತೆ ನಡೆದುಕೊಳ್ಳದಿದ್ದರೆ ಉದ್ಯೋಗಾಕಾಂಕ್ಷಿಗಳು ಮತ್ತೆ ಸಂಘಟಿತ ಹೋರಾಟಕ್ಕೆ ಸಜ್ಜಾಗಬೇಕು ಎಂದು ಈ ಮೂಲಕ ಕರೆ ನೀಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 