ಐತಿಹಾಸಿಕ ದಾಖಲೆಗಳ ಅಧ್ಯಯನದಿಂದ ಹೊಸ ಸತ್ಯಗಳ ಅನಾವರಣ ಸಾಧ್ಯ
The study of historical records makes it possible to unveil new truths
ಲೋಕದರ್ಶನ ವರದಿ
ಹುಲಕೋಟಿ: ಸೆ.15: ಇತಿಹಾಸ ಅಧ್ಯಯನವು ಕೇವಲ ಪಠ್ಯಪುಸ್ತಕಗಳಿಗೆ ಸೀಮಿತವಾಗದೆ, ಪುರಾತನ ಹಸ್ತಪ್ರತಿಗಳು, ಶಾಸನಗಳು, ನಾಣ್ಯಗಳು ಹಾಗೂ ಐತಿಹಾಸಿಕ ದಾಖಲೆಗಳ ಅಧ್ಯಯನದ ಮೂಲಕ ಹೊಸ ಸತ್ಯಗಳನ್ನು ಅನಾವರಣಗೊಳಿಸುವಂತಿರಬೇಕು ಎಂದು ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಚೀನ ಭಾರತ ಇತಿಹಾಸ ಮತ್ತು ಶಾಸನವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಹಿರಿಯ ಪ್ರಾಧ್ಯಾಪಕ ಡಾ. ಲೋಕೇಶ್ ಹೇಳಿದರು.
ಹುಲಕೋಟಿಯ ಶ್ರೀ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ ಆಯೋಜಿಸಿದ್ದ 2026-27ನೇ ಸಾಲಿನ ಇತಿಹಾಸ ವಿಭಾಗದ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಇತಿಹಾಸದ ಬಗ್ಗೆ ಆಸಕ್ತಿ ಹಾಗೂ ಸಂಶೋಧನಾ ಮನೋಭಾವ ಬೆಳೆಸಲು ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಸಿದ್ಧ ಇತಿಹಾಸಕಾರರು ಹಾಗೂ ವಿಷಯ ತಜ್ಞರನ್ನು ಆಹ್ವಾನಿಸಿ ವಿಶೇಷ ಉಪನ್ಯಾಸ, ಚರ್ಚಾಗೋಷ್ಠಿ, ವಿಚಾರ ಸಂಕಿರಣ ಹಾಗೂ ಪ್ರಬಂಧ ಮಂಡನೆ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಐತಿಹಾಸಿಕ ಸ್ಥಳಗಳು, ಕೋಟೆಗಳು, ಅರಮನೆಗಳು ಮತ್ತು ಯುದ್ಧಭೂಮಿಗಳಿಗೆ ಶೈಕ್ಷಣಿಕ ಪ್ರವಾಸಗಳನ್ನು ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ನೀಡಬೇಕು ಎಂದರು.
ಇತಿಹಾಸ ವಿಭಾಗದ ಮುಖ್ಯಸ್ಥೆ ರೋಹಿಣಿ ರಾಚಣ್ಣವರ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಪ್ರತ್ಯಕ್ಷ ಜ್ಞಾನ ನೀಡುವ ಉದ್ದೇಶದಿಂದ ಐತಿಹಾಸಿಕ ಸ್ಥಳಗಳಿಗೆ ಶೈಕ್ಷಣಿಕ ಪ್ರವಾಸ, ಪುರಾತತ್ವ ಇಲಾಖೆಯ ಸಹಯೋಗದಲ್ಲಿ ಉತ್ಖನನ ಕಾರ್ಯಗಳಲ್ಲಿ ಭಾಗವಹಿಸುವ ಅವಕಾಶ ಹಾಗೂ ಉತ್ಖನನ ಕಾರ್ಯ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಇತಿಹಾಸ ಉಪನ್ಯಾಸಕ ಡಾ. ಶಂಕರ್ಪ ಬಡಿಗೇರ ಮಾತನಾಡಿ, ಹುಲಕೋಟಿ ಸಮೀಪದ ವಸ್ತುಸಂಗ್ರಹಾಲಯಗಳು ಮತ್ತು ಪತ್ರಾಗಾರ ದಾಖಲೆ ಸಂಗ್ರಹಾಲಯಗಳಿಗೆ ವಿದ್ಯಾರ್ಥಿಗಳನ್ನು ಕರೆದೊಯ್ದು ಪ್ರಾಚೀನ ವಸ್ತುಗಳು ಹಾಗೂ ಐತಿಹಾಸಿಕ ದಾಖಲೆಗಳ ಸಂರಕ್ಷಣೆ ಕುರಿತು ಪ್ರಾಯೋಗಿಕ ಜ್ಞಾನ ನೀಡಲು ಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಅಪ್ಪಣ್ಣ ಎನ್. ಹಂಜೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಇತಿಹಾಸದ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಇತಿಹಾಸ ಕ್ಲಬ್ ಸ್ಥಾಪಿಸಿ ಭಾಷಣ, ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಎಂದರು. ರಾಷ್ಟ್ರೀಯ ಹಬ್ಬಗಳು, ಮಹಾಪುರುಷರ ಜಯಂತಿಗಳು ಹಾಗೂ ವಿಶ್ವ ಪರಂಪರೆ ದಿನಾಚರಣೆ ಸೇರಿದಂತೆ ಪ್ರಮುಖ ಐತಿಹಾಸಿಕ ಮತ್ತು ರಾಷ್ಟ್ರೀಯ ದಿನಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಹೇಳಿದರು.
ಹಳೆಯ ನಾಣ್ಯಗಳು, ಶಾಸನಗಳ ಪ್ರತಿಕೃತಿಗಳು ಹಾಗೂ ಐತಿಹಾಸಿಕ ಚಿತ್ರಗಳ ಪ್ರದರ್ಶನಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಇತಿಹಾಸದ ಬಗ್ಗೆ ಕುತೂಹಲ ಮತ್ತು ಅರಿವು ಹೆಚ್ಚಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಲಕ್ಷ್ಮಣ ಮುಳಗುಂದ ಗಣ್ಯರನ್ನು ಸ್ವಾಗತಿಸಿದರು. ಇಂಗ್ಲಿಷ್ ಸಹಾಯಕ ಪ್ರಾಧ್ಯಾಪಕಿ ಕುಮಾರಿ ಸಾವಿತ್ರಿ ಟಿ. ವಂದಿಸಿದರು. ಇತಿಹಾಸ ಉಪನ್ಯಾಸಕ ಬಸವಂತಪ್ಪ ದೊಡ್ಡಮನಿ ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಬೋಧಕರು ಹಾಗೂ ಇತಿಹಾಸ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 