ಯಶಸ್ವಿಯಾಗಿ ಜರುಗಿದ ರಾಷ್ಟ್ರೀಯ ಲೋಕ ಅದಾಲತ್ ಜನತಾ ನ್ಯಾಯಾಲಯದ ಸದುಪಯೋಗ: ನ್ಯಾಯಾಧೀಶ ಹರೀಶ ಎ ಕರೆ
The successful National Lok Adalat is a good use of the Janata Adalat: Judge Harish A. Kare
ವಿಜಯಪುರ, ಡಿ.14 : ಕಕ್ಷಿದಾರರು ನ್ಯಾಯಾಲಯಗಳಿಗೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ಅನಾವಶ್ಯಕವಾಗಿ ವ್ಯರ್ಥವಾಗುವ ಹಣ ಹಾಗೂ ಸಮಯದ ಉಳಿತಾಯವಾಗುವುದರಿಂದ ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಹರೀಶ ಎ ಅವರು ಕರೆ ನೀಡಿದ್ದಾರೆ.
ಡಿ.13ರಂದು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಕಕ್ಷಿದಾರರಿಗೆ ತಿಳುವಳಿಕೆ ನೀಡಿದ ಅವರು, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗಿದ್ದ ಆಸ್ತಿ ವಿಭಾಗ ಕೋರಿದ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿದ ಪ್ರಕರಣಗಳು, ಜೀವನಾಂಶ ಕೋರಿ ಸಲ್ಲಿಸಿದ ಪ್ರಕರಣಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಅಮಲ್ಜಾರಿ ಪ್ರಕರಣಗಳು ಸೇರಿದಂತೆ ಒಟ್ಟು 21,263 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.
ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡು ಪರಸ್ಪರ ಸೌಹಾರ್ದತೆಯಿಂದ ಸಮಾಜದಲ್ಲಿ ಜೀವನ ಸಾಗಿಸುವಂತೆ ಸಲಹೆ ನೀಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್.ಹಾಗರಗಿ ಅವರು, ಜಿಲ್ಲೆಯಲ್ಲಿ ನಡೆದ ಲೋಕ ಅದಾಲತ್ ಕಾರ್ಯಕ್ರಮದಲ್ಲಿ 13 ಜೋಡಿಗಳನ್ನು ರಾಜಿ ಸಂಧಾನದ ಮೂಲಕ ವೈವಾಹಿಕ ಜೀವನ ನಡೆಸಲು ಒಪ್ಪಿಸಲಾಯಿತು. ಮಾನ್ಯ 2ನೇ ಹೆಚ್ಚುವರಿ ಜಿಲ್ಲಾ ಮತ್ತುಸತ್ರ ನ್ಯಾಯಾಲಯದಲ್ಲಿದ್ದ ರೂ.21 ಕೋಟಿ ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿದ್ದು ವಿಶೇಷವಾಗಿತ್ತು.ಜನತಾ ನ್ಯಾಯಾಲಯದ ಯಶಸ್ವಿಗೆ ಸಹಕರಿಸಿದ ವಕೀಲರು, ಕಕ್ಷಿದಾರರು, ಪೊಲೀಸ್ ಅಧಿಕಾರಿ-ಸಿಬ್ಬಂದಿ ಸೇರಿದಂತೆ ಸಾರ್ವಜನಿಕರ ಕಾರ್ಯಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾಯಾಧೀಶ ಹರೀಶ ಎ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 