ಲೋಕದರ್ಶನ ವರದಿ
ಕೊಪ್ಪಳ: ಪ್ರತಿಭೆ ಎನ್ನುವುದು ಸಾಧಕ ಸ್ವತ್ತು ಹೊರೆತು ಸೋಮಾರಿಗಳ ಸ್ವತ್ತಲ್ಲ ಎಂದು ಕ್ಷೇತ್ರ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
ಅವರು ನಗರದ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ. ಪ್ರತಿಯೊಂದು ಮಗುವಿನಲ್ಲಿ ಒಂದಲ್ಲ ಒಂದು ರೀತಿಯ ಪ್ರತಿಭೆಯು ಅಡಗಿರುತ್ತದೆ. ಅವನಲ್ಲಿ ಇರುವ ಪ್ರತಿಭೆಗಳನ್ನು ಗುರುತಿಸು ಕಾರ್ಯಕ್ಕೆ ಪ್ರತಿಭಾ ಕಾರಂಜಿ ಸಹಾಯಕವಾಗಿದೆ. ಪ್ರತಿಭೆಯು ಸಾಧನೆ ಮಾಡಬೇಕು ಎಂಬ ಹಂಬಲ ಇರುವವರ ಸ್ವತ್ತು ಹೊರೆತು ಸೋಮಾರಿಗಳ ಸ್ವತ್ತಾಗಿರಲ್ಲ. ಪ್ರಾಥಮಿಕ ಹಂತದಲ್ಲಿ ನೀಡುವ ಶಿಕ್ಷಣ ಬಹಳ ಮಹತ್ವವನ್ನು ಪಡೆದಿದೆ. ಗುಣಾತ್ಮಕ ಶಿಕ್ಷಣವನ್ನು ನೀಡಲು ಪ್ರತಿಯೊಬ್ಬ ಶಿಕ್ಷಕರು ಶ್ರಮಿಸಬೇಕು.ನಮ್ಮ ಭಾಗವು ಹಿಂದುಳಿದ ಭಾಗವಾಗಿದೆ ಎಂಬ ಉದ್ದೇಶದಿಂದ 371ಜೇ ಕಲಂ ಜಾರಿಗೆ ತರಲಾಗಿದೆ, ಮಿಸಲಾತಿಯಲ್ಲಿ ನಿಗದಿಪಡಿಸಿದ ಹುದ್ದೆಗಳನ್ನ ಪಡೆಯಲು ಶಿಕ್ಷಣ ಬಹಳ ಮುಖ್ಯವಾಗಿದೆ. 10ನೇ ತರಗತಿಯ ಪಲಿತಾಂಶದಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನವನ್ನು ಪಡೆಯುವ ನಿಟ್ಟಿನಲ್ಲಿ ಶಿಕ್ಷಕರು ಹೆಚ್ಚು ಆಸಕ್ತಿಯನ್ನುವಹಿಸಿ ಕಾರ್ಯ ನಿರ್ವಹಿಸಬೇಕು. ಕ್ಷೇತ್ರದ ಶಾಲೆಗಳಲ್ಲಿ ಸ್ಮಾಟ್ ಕ್ಲಾಸ್ ತರಗತಿ ಪ್ರಾರಂಭನ್ನು ಮಾಡಲಾಗುತ್ತದೆ.ಗುಣಮಟ್ಟದ ಶಿಕ್ಷಣದ ಕಡೆಗೆ ಹೆಚ್ಚು ಗಮನವನ್ನು ಹರಿಸಬೇಕು. ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಗುರುತಿಸುವ ಸಲುವಾಗಿ ಜಾರಿಗೆ ತಂದಿರುವ ಪ್ರತಿಭಾ ಕಾರಂಜಿ ಕಾರ್ಯಕ್ರಮ ಮಾದರಿಯ ಕಾರ್ಯಕ್ರಮವಾಗಿದೆ. ಸರಕಾರಿ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಅನೇಕ ಉಚಿತ ಸೌಲಭ್ಯಗಳನ್ನು ನೀಡುತ್ತಿದ್ದು,ಅವಗಳನ್ನು ಸರಿಯಾದ ರೀತಿಯಲ್ಲಿ ಬಳಿಸಿಕೊಳ್ಳಬೇಕು ಎಂದು ಹೇಳಿದರು.
ಮಕ್ಕಳಲ್ಲಿನ ಅನೇಕ ವಿಶೇಷತೆಗಳನ್ನು ಗುರುತಿಸುವ ನಿಟ್ಟಿನಲ್ಲಿ 2002ರಿಂದ ಇಂತಹ ವಿನೂತ ಕಾರ್ಯಕ್ರಮವನ್ನು ಪ್ರಾರಂಭ ಮಾಡಲಾಗಿದೆ. ನಿರ್ಣಯಕರು ಮಕ್ಕಳಲ್ಲಿ ತಾರತಮ್ಯವನ್ನು ಮಾಡದೇ ಸೂಕ್ತವಾದ ಪ್ರತಿಭೆಯನ್ನು ಗುರುತಿಸಿ ಆಯ್ಕೆ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಸೊನ್ನದ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕರ ಪದವಿ ಪೂರ್ವ ಕಾಲೇಜಿನ ಉಪ ಪ್ರಾಚಾರ್ಯರಾದ ಪ್ರಾಣೇಶವಹಿಸಿದ್ದರು.ಜಿಲ್ಲಾ ಪಂಚಾಯತ ಸದಸ್ಯರಾದ ಗುಳಪ್ಪ ಹಲಗೇರಿ, ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ, ಸರಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದಶರ್ಿ ಶಂಕರಗೌಡ ಮಾಲಿಪಾಟೀಲ, ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದಶರ್ಿ ಎಸ್.ಬಿ.ಕುರಿ, ತಾಲೂಕ ಅಧ್ಯಕ್ಷರಾದ ಮಾರ್ಥಂಡರಾವ ದೇಸಾಯಿ, ಕಾರ್ಯಕ್ರಮದ ನೋಡಲ್ ಅರವಿಂದ, ಶಿಕ್ಷಣ ಸಂಯೋಜಕರಾದ ಚಂದ್ರಶೇಖರ ಹತ್ತಿಕಟ್ಟಿಗಿ, ಶಿಕ್ಷಕರಾದ ಶಂಕ್ರಪ್ಪ, ಕೃಷ್ಣಮೂತರ್ಿ, ಸುಮತಿ. ಸಾವಿತ್ರಿ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಸಿ.ಆರ್.ಪಿ.ಹುಲುಗಪ್ಪ ಕಟ್ಟಮನಿ ನಿರೂಪಿಸದರು. ಸಿ.ಆರ್.ಪಿ.ಹನುಮಂತಪ್ಪ ಕುರಿ ಸ್ವಾಗತಿಸಿ, ಬಿ.ಆರ್.ಪಿ.ಚಂದ್ರ ಹೇಳವರ ವಂದಿಸಿದರು.