ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆ ಮುಗಿಸಿ ಆಸ್ಪತ್ರೆಗೆ ಅವಶ್ಯವಿರುವ ಎಲ್ಲ ಸೌಲಭ್ಯ ಒದಗಿಸಲಾಗುವುದು : ದಿನೇಶ ಗುಂಡೂರಾವ್
The tender process will be completed soon and all necessary facilities will be provided to the hospi
ಶಿಗ್ಗಾವಿ 28 : ನೂತನವಾಗಿ ನಿರ್ಮಾಣಗೊಂಡ 250 ಬೆಡ್ಡಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ಉಪಕರಣಗಳಿಗೆ ಸರ್ಕಾರದಿಂದ, ಕರ್ನಾಟಕ ಮೆಡಿಕಲ್ ಸಪ್ಲಾಯ್ ಕಾರ್ೊರೇಷನ್ ಗೆ ಈಗಾಗಲೇ 14 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆಯನ್ನು ಮುಗಿಸಿ ಶೀಘ್ರದಲ್ಲಿ ಈ ಆಸ್ಪತ್ರೆಗೆ ಅವಶ್ಯವಿರುವ ಎಲ್ಲ ವೈದ್ಯಕೀಯ ಸಲಕರಣೆಗಳನ್ನು ಒದಗಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡ 250 ಬೆಡ್ಡಿನ ತಾಲೂಕು ಆಸ್ಪತ್ರೆಯನ್ನು ಉದ್ಘಾಟಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹಿಂದಿನ ಸರ್ಕಾರದ ಆಡಳಿತಾವಧಿಯಲ್ಲಿ ಬಸವರಾಜ ಬೊಮ್ಮಾಯಿ ಅವರು 100 ಬೆಡ್ಡಿನ ತಾಲೂಕ ಆಸ್ಪತ್ರೆಯನ್ನು 250 ಬೆಡ್ಡಿಗೆ ಮೇಲ್ದರ್ಜೆಗೆ ಏರಿಸಿ ಅನುಮೋದನೆ ನೀಡಿದ್ದರು. ಆಸ್ಪತ್ರೆಯ ಕಾಮಗಾರಿ 95 ರಷ್ಟು ಪೂರ್ಣಗೊಂಡಿದ್ದು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಶಾಸಕ ಯಾಸೀರಖಾನ್ ಪಠಾಣ ಜೊತೆಗೆ ಆಸ್ಪತ್ರೆಯನ್ನು ಉದ್ಘಾಟನೆಗೊಳಿಸಲಾಗಿದೆ.ಹಳೆಯ ಆಸ್ಪತ್ರೆಯಲ್ಲಿರುವ ಎಲ್ಲಾ ಉಪಕರಣಗಳು ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡು, ವೈದ್ಯರು ಮತ್ತು ಸಿಬ್ಬಂದಿಯ ಜೊತೆಗೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಿ ವೈದ್ಯಕೀಯ ಸೇವೆಯನ್ನು ನೀಡಲಾಗುವುದು.
ಹಿಂದೆ ಬಸವರಾಜ ಬೊಮ್ಮಾಯಿ ಅವರು ಈ ತಾಲೂಕನ್ನು ಅಭಿವೃದ್ಧಿ ಮಾಡಿದಂತೆ ಈಗಿನ ಶಾಸಕ ಯಾಸೀರಖಾನ್ ಪಠಾಣ ಅವರು ಅಭಿವೃದ್ಧಿಯನ್ನು ಮಾಡಲಿದ್ದಾರೆ. ಅಭಿವೃದ್ಧಿಯಲ್ಲಿ ಯಾವುದೇ ಪಕ್ಷಪಾತ ಮಾಡದೆ ಜನರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ ಎಂದರು. ನಕಲಿ ವೈದ್ಯರಿಗೆ ಕಡಿವಾಣ:ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿರುವ ಕುರಿತು ಈಗಾಗಲೇ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ವಹಿಸಲು ಸೂಚಿಸಲಾಗಿದೆ. ಕೆಲವು ಕಡೆಗಳಲ್ಲಿ ಪಾರಂಪರಿಕವಾಗಿ ಆಯುರ್ವೇದಿಕ್ ವೈದ್ಯಕೀಯ ಸೇವೆಯನ್ನು ನೀಡುತ್ತಿದ್ದಾರೆ. ಕೆಲವರು ಆಯುರ್ವೇದಿಕ್ ಹೆಸರಿನಲ್ಲಿ ವೈದ್ಯಕೀಯ ಸೇವೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಅಂತಹವರ ವಿರುದ್ಧ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 