ಕಾಯಕ ಶರಣರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ : - ಡಾ.ಓದ್ರಾಮ
The thoughts of Kayaka Sharan are ever relevant: - Dr. Odrama
ವಿಜಯಪುರ, ಫೆ.10 : ಶರಣರು ಕಾಯಕದ ಮೂಲಕ ಅಮೂಲ್ಯ ಸಂದೇಶವನ್ನು ತಮ್ಮ ವಚನಗಳ ಮೂಲಕ ಪ್ರತಿಪಾದಿಸಿ ಆ ಮೂಲಕ ಸಮಾಜದಲ್ಲಿ ಶ್ರಮಕ್ಕೆ ಗೌರವ ಮೂಡಿಸಿ, ಕಾಯಕ ಮಹತ್ವ ಸಾರಿದ ಕಾಯಕ ಶರಣರ ಚಿಂತನೆಗಳು ಎಂದೆಂದಿಗೂ ಪ್ರಸ್ತುತವಾಗಿವೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಓದ್ರಾಮ ಅವರು ಹೇಳಿದರು
ಮಂಗಳವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲ್ಲಿ ಆಯೋಜಿಸಿದ್ದ ಕಾಯಕ ಶರಣರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಯಕವೇ ಕೈಲಾಸ ಎಂಬ ತತ್ವವನ್ನು ಜೀವನದ ಮೂಲಮಂತ್ರವನ್ನಾಗಿ ಮಾಡಿಕೊಂಡ ಕಾಯಕ ಶರಣರು ತಮ್ಮ ಜೀವನವಿಡಿ ಕಾಯಕದೊಂದಿಗೆ ವಚನಗಳ ಮೂಲಕ ಸಮಾಜ ಸುಧಾರಣೆಗೆ ಶ್ರಮಿಸಿದರು ಹೇಳಿದರು.
12ನೇ ಶತಮಾನದ ಬಸವಾದಿ ಶರಣರು ವಚನ ಚಳವಳಿ ಮೂಲಕ ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಂಧಕಾರ ಹಾಗೂ ಅಸಮಾನತೆಯನ್ನು ತೊಡೆದು ಹಾಕಲು ಕಾಯಕ ಮತ್ತು ದಾಸೋಹದ ಮೂಲಕ ಸಮಾನತೆಯ ಮಹತ್ವವನ್ನು ತಿಳಿಸಿಕೊಟ್ಟರು. ಮಾದರ ಚನ್ನಯ್ಯ,ಮಾದರ ಧೂಳಯ್ಯ,ಡೋಹರ ಕಕ್ಕಯ್ಯ,ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರು ಶ್ರಮದ ಮಹತ್ವವನ್ನು ಸಮಾಜಕ್ಕೆ ಸಾರಿದ ಮಹಾನ್ ಶರಣರು.
ಅವರು ವಿನಮ್ರತೆ, ಸರಳತೆ ಹಾಗೂ ಸೇವಾ ಮನೋಭಾವದ ಮೂಲಕ ಮಹತ್ತರ ತತ್ವಾದರ್ಶಗಳನ್ನು ನಮಗೆ ನೀಡಿದ್ದಾರೆ. ಡಾ.ಸುಜಾತ ಚಲವಾದಿ ಅವರು, ಮಾದರ ಚನ್ನಯ್ಯ, ಮಾದರ ಧೂಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರ ಕುರಿತಾಗಿ ಉಪನ್ಯಾಸ ನೀಡಿದ ಅವರು, ಮಾಡುವ ಕೆಲಸದಲ್ಲಿ ಪ್ರಾಮಾಣಿಕತೆಯನ್ನು ಕಂಡುಕೊಂಡು ಸ್ವಾವಲಂಬನೆ ಜೀವನ ನಡೆಸಿ ಕಾಯಕವೇ ಕೈಲಾಸ ಎಂಬ ತತ್ವವನ್ನು ಪಾಲಿಸಬೇಕು ಎಂದು ಶರಣರ ಕುರಿತು ವಿಸ್ತೃತವಾಗಿ ಮಾತನಾಡಿದರು.
ಹೇಮಂತ ಭೂತನಾಳ ಅವರು ಡೋಹರ ಕಕ್ಕಯ್ಯ ಹಾಗೂ ಸಮಗಾರ ಹರಳಯ್ಯ ಅವರ ಕುರಿತಾಗಿ ಉಪನ್ಯಾಸ ನೀಡಿದ ಅವರು, ಕಾಯಕವು ಭೇದವ ಅಳಿಸಿ ಸಮ ಸಮಾಜ ನಿರ್ಮಣಕ್ಕೆ ಕಾಯಕ ಶ್ರದ್ಧೆಯನ್ನು ಮೈಗೂಡಿಸಿಕೊಳ್ಳಬೆಕು. ಇಂದಿನ ಯುವಪೀಳಿಗೆ ಕಾಯಕ ಶರಣರು ತೋರಿದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಸಂತೋಷ್ ಭೋವಿ, ಶ್ರೀನಿವಾಸ್ ರಾಜಗೋಪಾಲ ಶಹಪುರ, ಕೆ.ಕೆ.ಕಳಸದವರ, ಯುವರಾಜ ಕೋಳಿ, ಅಭಿಷೇಕ ಚಕ್ರವರ್ತಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಮಾಜದ ಮುಂಖಡರು ಉಪಸ್ಥಿತರಿದ್ದರು.
ನಗರದ ಸಿದ್ದೆಶ್ವರ ದೇವಸ್ಥಾನದಿಂದ ಕಾಯಕ ಶರಣರ ಭಾವಚಿತ್ರದ ಭವ್ಯ ಮೆರವಣಿಗೆಯು ನಗರದ ಪ್ರಮುಖ ವೃತ್ತಗಳ ಮೂಲಕ ಸಾಗಿ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಮಾವೆಶಗೊಂಡಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 