ಹಾವೇರಿ04: ಆರೋಗ್ಯ ಭಾಗ್ಯಕ್ಕಾಗಿ ಸಿರಿಧಾನ್ಯಗಳ ಬಳಕೆ ಇಂದು ಅತ್ಯಗತ್ಯವಾಗಿದೆ. ರೈತರು ಅಧಿಕ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಬೆಳೆಯಲು ಮುಂದೆಬರಬೇಕು ಎಂದು ಆಹಾರ ಮತ್ತು ನಾಗರೀಕ ಸರಬರಾಜು, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಹಾಗೂ ಹಜ್ ಇಲಾಖೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ಖಾನ್ ಎಂದು ಹೇಳಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ, ಪ್ರಾಂತೀಯ ಸಾವಯವ ಕೃಷಿಕರ ಸಂಘಗಳ ಒಕ್ಕೂಟ ಧಾರವಾಡ, ಕೃಷಿ ವಿಶ್ವವಿದ್ಯಾಲಯ, ಹನುಮನಮಟ್ಟಿ ಐ.ಸಿ.ಎ.ಆರ್.ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಿರೇಕೆರೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಜರುಗಿದ ಸಾವಯವ ಮತ್ತು ಸಿರಿಧಾನ್ಯಗಳ ಕೃಷಿ ಮೇಳದ ಉದ್ಘಾಟನೆಯನ್ನು ನೇರವರಿಸಿದ್ದರು.
ಸಿರಿಧಾನ್ಯ ಬೆಳೆದ ರೈತರಿಗೆ ಲಾಭ ದೊರೆಯುತ್ತಿಲ್ಲ, ಮಧ್ಯವತರ್ಿಗಳ ಪಾಲಾಗುತ್ತಿದೆ. ಕಾರಣ ಅಧಿಕಾರಿಗಳು ರೈತರು ಆಥರ್ಿಕವಾಗಿ ಸದೃಢರಾಗಲು ಸರಿಯಾದ ಮಾರ್ಗದರ್ಶನ ನೀಡಬೇಕು. ಪಡಿತರ ಆಹಾರದಲ್ಲಿ ವಿತರಿಸಲಾಗುತ್ತಿರುವ ಏಳು ಕೆ.ಜಿ.ಅಕ್ಕಿಯಲ್ಲಿ ಐದು ಕೆ.ಜಿ. ಕೇಂದ್ರದಿಂದ ಹಾಗೂ ಎರಡು ಕೆ.ಜಿ. ರಾಜ್ಯದಿಂದ ವಿತರಿಸಲಾಗುತ್ತಿದೆ.
3 ಲಕ್ಷ ಟನ್ ಆಹಾರಧಾನ್ಯ ಬೇಕಾಗುತ್ತಿದೆ. ಸಿರಿಧಾನ್ಯಗಳನ್ನು ಪೂರೈಸುವುದಾದರೆ ಆಯಾ ಪ್ರದೇಶಕ್ಕೆ ತಕ್ಕಂತೆ ಸಿರಿಧಾನ್ಯಗಳನ್ನು ಖರೀದಿಸಿ ವಿತರಿಸಲಾಗುವುದು ಎಂದು ಹೇಳಿದರು.
ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಅವರು ವಸ್ತು ಪ್ರದರ್ಶನದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಸಂಸ್ಕರಣಾ ಘಟಕ ಹಾಗೂ ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ಸಿರಿಧಾನ್ಯಗಳನ್ನು ಬೆಳೆದ ರೈತರು ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿ ಸಂಸ್ಕರಣಾ ಘಟಕ ಸ್ಥಾಪನೆಗೆ ಸಕರ್ಾರ ಮುಂದಾಗಿದೆ. ಸಂಸ್ಕರಣಾ ಘಟಕ ಸ್ಥಾಪನೆಗೆ ಸಹಾಯಧನ ಸಹ ಒದಗಿಸಲಾಗುವುದು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶಾಸಕ ನೆಹರು ಓಲೇಕಾರ ಅವರು ಮಾತನಾಡಿ, ಸಾವಯವ ಪದ್ಧತಿ ನಮ್ಮ ಮೂಲ ಉದ್ಯೋಗವಾಗಿತ್ತು. ದ್ವಿದಳ ಧಾನ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆದು ರಫ್ತು ಮಾಡಲಾಗುತ್ತಿತ್ತು. ಆಧುನಿಕ ಆಹಾರ ಪದ್ಧತಿಯಿಂದ ಮಧುಮೇಹ ಹಾಗೂ ರಕ್ತದೊತ್ತಡ ಕಾಯಿಲೆಗಳು ಬರುತ್ತಿವೆ. ಸಿರಿಧಾನ್ಯಗಳಲ್ಲಿ ನಾರಿನಾಂಶ ಹೆಚ್ಚಿನ ಪ್ರಮಾಣದಲ್ಲಿರುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರಸ್ತುತ ಮೆಡಿಕಲ್ ಕಾಲೇಜು ಆರಂಭಕ್ಕೆ ಜಿಲ್ಲಾ ಉಸ್ತುವಾರಿ ರೂ.10 ಕೋಟಿ ಅನುದಾನ ಬಿಡುಗಡೆಗೊಳಿಸಬೇಕು ಹಾಗೂ ಜಿಲ್ಲೆಯ ರೈತರಿಗೆ ತಾಡಪಲ್ ವಿತರಣೆ ಹಾಗೂ ಕೃಷಿ ಉಪಕರಣಗಳ ಸಮಸ್ಯೆಯನ್ನು ಬಗೆಹರಿಸುವಂತೆ ಕೃಷಿ ಸಚಿವರಿಗೆ ಮನವಿ ಮಾಡಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ಶಾಸಕರಾದ ಬಿ.ಸಿ.ಪಾಟೀಲ ಅವರು ಮಾತನಾಡಿ, ಸಿರಿಧಾನ್ಯಗಳು ಶ್ರೀಮಂತ ಧಾನ್ಯಗಳು. ಈ ಧಾನ್ಯಗಳನ್ನು ಸೇವಿಸಿದವರು 80-90 ವರ್ಷಗಳ ಕಾಲ ಜೀವಿಸುತ್ತಿದ್ದರು. ಇಂದು ಮೂರು ತಿಂಗಳಿಗೆ ಬರುವ ಹೈಬ್ರೀಡ್ ಆಹಾರ ಸೇವಿಸಿ 50 ವರ್ಷಗಳಿಗೆ ಜೀವನ ಮುಗಿಸುತ್ತಾರೆ. ಸಿರಿಧಾನ್ಯಗಳ ಬಳಕೆ ಹಾಗೂ ತಿಳುವಳಿಕೆ ಮೂಡಿಸಲು ಇಂತಹ ಮೇಳಗಳು ಸಹಕಾರಿಯಾಗಿವೆ. ರೈತರು ಮಾರಾಟಕ್ಕೆ ಜೋಳ ಬೆಳೆಯಿರಿ ಆದರೆ ಮನೆ ಊಟಕ್ಕೆ ಸಿರಿಧಾನ್ಯಗಳನ್ನು ಬೆಳೆಯಿರಿ ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಮೆಡಿಕಲ್ ಕಾಲೇಜ್ ಆರಂಭಕ್ಕೆ ಹಾಗೂ ಜಿಲ್ಲೆಯ ಮೂಲಭೂತ ಸೌಕರ್ಯ ಒದಗಿಸಲು ಅಗತ್ಯ ಅನುದಾನ ಮಂಜೂರು ಮಾಡಬೇಕು. ಕೃಷಿ ಸಚಿವರು ಸಾಮಾನ್ಯ ವರ್ಗದ ರೈತರಿಗೂ ಸಹ ಹೆಚ್ಚಿನ ಸಬ್ಸಿಡಿ ನೀಡಬೇಕು. ಜಿಲ್ಲೆಯಲ್ಲಿ ಕೃಷಿ ಯಂತ್ರೋಪಕರಣ ಉಪಯೋಗಿಸುವ ರೈತರಿಗೆ ಸಬ್ಸಿಡಿ ದರದರಲ್ಲಿ ಡಿಸೈಲ್ ವಿತರಿಸಬೇಕು ಎಂದು ಮನವಿ ಮಾಡಿಕೊಂಡರು.
ಜಂಟಿ ಕೃಷಿ ನಿದರ್ೆಶಕ ಮಂಜುನಾಥ ಬಿ. ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿ.ಪಂ.ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ, ಹಿರೇಕೆರೂರು ತಾ.ಪಂ.ಅಧ್ಯಕ್ಷ ಹೇಮಣ್ಣ ಮುದಿರೆಡ್ಡಿ, ಜಿ.ಪಂ.ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ನೀಲವ್ವ ಚವ್ಹಾಣ, ಜಿ.ಪಂ.ಸದಸ್ಯರಾದ ಸುಮಿತ್ರಾ ಪಾಟೀಲ, ನೀಲಪ್ಪ ಈಟೇರ, ಪ್ರಕಾಶ ಬನ್ನಿಕೋಡ, ಮಹದೇವಕ್ಕ ಗೊಪಕ್ಕಳಿ, ತಾ.ಪಂ.ಉಪಾಧ್ಯಕ್ಷೆ ಕವಿತಾ ಬಿದರಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಂ.ಎಚ್.ಪಾಟೀಲ, ತಾಲೂಕಾ ಕೃಷಿಕ ಸಮಾಜದ ಅಧ್ಯಕ್ಷ ಜಿ.ಶಿವನಗೌಡ್ರ, ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿ.ಪಂ.ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಲೀಲಾವತಿ ಇತರರು ಉಪಸ್ಥಿತರಿದ್ದರು.