ನಾಡಪ್ರಭು ಕೆಂಪೇಗೌಡ ಅವರು ಹಾಕಿಕೊಟ್ಟ ದೂರದೃಷ್ಟಿಯ ಯೋಜನೆಗಳು ಇಂದಿಗೂ ಪ್ರಸ್ತುತ: ಜಿಲ್ಲಾಧಿಕಾರಿ
The visionary plans laid down by Nadaprabhu Kempegowda are still relevant today: District Collector
ಲೋಕದರ್ಶನ ವರದಿ
ಧಾರವಾಡ 29: ಕರ್ನಾಟಕ ಇತಿಹಾಸದಲ್ಲಿ ಬಹಳಷ್ಟು ರಾಜ-ಮಹಾರಾಜರು ಆಗಿಹೋಗಿದ್ದಾರೆ. ಆದರೆ ಕೆಂಪೇಗೌಡರು ಬೆಂಗಳೂರು ನಗರ ನಿರ್ಮಾಣ ಮಾಡುವ ಮೂಲಕ ಇಂದು ವಿಶ್ವದ ಭೂಪಟದಲ್ಲಿ ಬೆಂಗಳೂರು ಎದ್ದು ಕಾಣುವಂತೆ ಮಾಡಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.
ಅವರು ಜೂನ್ 27, 2026 ರಂದು ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ನಾಡಪ್ರಭು ಶ್ರೀ ಕೆಂಪೇಗೌಡ ಅವರು 500 ವರ್ಷಗಳ ಹಿಂದೆ ಹಾಕಿಕೊಟ್ಟ ದೂರದೃಷ್ಟಿಯ ಯೋಜನೆಗಳು ಕರ್ನಾಟಕಕ್ಕೆ ಇಂದಿಗೂ ಪ್ರಸ್ತುತವಾಗಿವೆ. ಕೆಂಪೇಗೌಡರ ಸರ್ವಧರ್ಮ ಸಮನ್ವಯತೆ, ಯೋಜನಾಬದ್ಧ ನಗರ ನಿರ್ಮಾಣ ಕಾರ್ಯ, ಕೃಷಿ ಪರಿಸರ ಬೆಳವಣಿಗೆಗೆ ಜಾರಿಗೆ ತಂದ ನೀತಿಗಳು, ವ್ಯಾಪಾರ, ವಾಣಿಜ್ಯ, ಉದ್ಯೋಗಕ್ಕಾಗಿ ಅವರು ಅಂದು ಹಾಕಿಕೊಟ್ಟ ಯೋಜನೆಗಳೇ ಇಂದಿಗೂ ಮಾದರಿಯಾಗಿವೆ. ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲು ಕಾರಣ ಕೆಂಪೇಗೌಡರ ಕೊಡುಗೆಗಳು ಎಂದರು.
ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ವರದಶ್ರೀ ಪೌಂಡೇಶನ ಸಂಸ್ಥಾಪಕ ಮಲ್ಲಿಕಾರ್ಜುನ ರಡ್ಡೇರ, ಹಾಗೂ ಕಾರ್ಯದರ್ಶಿ ಸಿದ್ದು ಸಿರಸಂಗಿ ಅವರು ನಾಡಪ್ರಭು ಶ್ರೀ ಕೆಂಪೇಗೌಡರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿದರು. ಜಯಲಕ್ಷ್ಮೀ ಹೆಚ್. ಅವರು ಕಾರ್ಯಕ್ರಮ ನಿರೂಪಿಸಿದರು.
ವೇದಿಕೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ ಹಳಿಯಾಳ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಉಮೇಶ ಬೊಮ್ಮಕ್ಕನವರ, ಸಮಾಜದ ಮುಖಂಡರಾದ ಕೃಷ್ಣಗೌಡ, ರಾಘವೇಂದ್ರಗೌಡ, ಮಾಣಿಕ್ಯ ಚಿಲ್ಲೂರ, ಹನುಮಂತಪ್ಪ ನೇಗಿನಾಳ ಉಪಸ್ಥಿತರಿದ್ದರು. ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು, ಸಂಘ-ಸಮಾಜದ ಮುಖಂಡರು, ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 