ಮತದಾರರ ಪಟ್ಟಿ ಪರಿಷ್ಕರಣೆ ಮಾಡಿ ಶೀಘ್ರದಲ್ಲೇ ವರದಿ ಸಲ್ಲಿಸಬೇಕು

ಗದಗ: ಸೆಪ್ಟೆಂಬರ 25ರಿಂದ ಅಕ್ಟೋಬರ 15ರ ವರೆಗೆ ಮತದಾರರ ಪಟ್ಟಿ ಪರಿಶೀಲನಾ ಕಾರ್ಯ ಜರುಗಲಿದ್ದು ಈ ಅವಧಿಯಲ್ಲಿ 18 ವರ್ಷ ಪೂರ್ಣಗೊಳ್ಳುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ಅಗತ್ಯದ ಕ್ರಮ ಜರುಗಿಸಬೇಕೆಂದು  ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

   ಗದಗ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು  ಜರುಗಿದ ಮತದಾರರ ಪಟ್ಟಿ ಪರಿಶೀಲನೆ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ  ಜಿಲ್ಲೆಯನ್ನು ಅಗ್ರಸ್ಥಾನಕ್ಕೆ ತರಲು ಭಾರತ ಚುನಾವನಾ ಆಯೋಗವು ಪರಿಚಯಿಸಿದ ವೋಟರ ಹೆಲ್ಪ ಲೈನ್ ಮೋಬೈಲ ಉಪಯೋಗಿಸಿ ಜಿಲ್ಲೆಯನ್ನು ಅಗ್ರ ಸ್ಥಾನಕ್ಕೆ ತರಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಮತದಾರರ ಪಟ್ಟಿಯಲ್ಲಿರುವ ಮತದಾರರ ವಿವರಗಳನ್ನು ಪರಿಶೀಲಿಸಲು, ಹೆಸರನ್ನು ತೆಗೆದು ಹಾಕಲು, ಪರಿಶೀಲನೆ ಮತ್ತು ಧೃಢೀಕರಣ, ತಿದ್ದುಪಡಿಗಳಿಗಾಗಿ ಆಪ ಮೂಲಕ ಅಜರ್ಿ ಸಲ್ಲಿಸಬಹುದಾಗಿದೆ.  ಪಾಸಪೋರ್ಟ , ಚಾಲನಾ ಪರವಾನಿಗೆ, ಆಧಾರ ಪತ್ರ, ಪಡಿತರ ಚೀಟಿ, ಸರಕಾರಿ ಅರೆ ಸರಕಾರಿ ನೌಕರರು ಹೊಂದಿರುವ ಗುರುತಿನ ಚೀಟಿ, ಬ್ಯಾಂಕ್ ಪಾಸ್ಬುಕ್, ರೈತರ ಗುರುತಿನ ಚೀಟಿ, ಚುನಾವಣಾ ಆಯೋಗ ಅನುಮೋದಿಸಿರುವ ಯಾವುದೇ ದಾಖಲೆಗಳನ್ನು ಇವುಗಳಲ್ಲಿ ಒಂದನ್ನು ದಾಖಲೆ ರೂಪದಲ್ಲಿ  ಮೊಬೈಲ್ ಆಪ್ ಮೂಲಕ ಅಪಲೋಡ ಮಾಡಬಹುದಾಗಿದ್ದು ಈ ಕುರಿತು ಜಾಗೃತಿ ಮೂಡಿಸಲು   ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು. 

ಜಿ.ಪಂ ಕಾರ್ಯನಿವರ್ಾಹಣಾಧಿಕಾರಿ ಡಾ. ಆನಂದ ಕೆ. ಮಾತನಾಡಿ  ವೋಟರ ಹೆಲ್ಪ ಲೈನ್ ಮೋಬೈಲ್ ಆಪನ್ನು ಗೂಗಲೆ ಪ್ಲೇಸ್ಟೋರ ಮೂಲಕ ಪಡೆದುಕೊಂಡು ಈಗಾಗಲೇ ನೋಂದಾಣಿಯಾಗಿರುವ ಮತದಾರರು ತಮ್ಮ ಹಾಗೂ ಕುಟುಂಬ ಸದಸ್ಯರುಗಳ ಹೆಸರುಗಳ ಸರಿಯಾಗಿ ನೋಂದಣಿಯಾಗಿರುವ ಬಗ್ಗೆ ಪರಿಶೀಲಿಸಿಕೊಳ್ಳಬಹುದಾಗಿದೆ. ಆಯೋಗದ ವೆಬ್ಸೈಟ್ ಎನ್.ವಿ.ಎಸ್.ಪಿ ಪೋರ್ಟಲ್ ಅಥವಾ ಮತದಾರರ ಸಹಾಯವಾಣ 1950, ಅಥವಾ  ಸಾಮಾನ್ಯ ಸೇವಾ  ಕೇಂದ್ರ, ಮತದಾರ ನೋಂದಣಿ ಕಛೇರಿ, ಅಟಲ್ ಜನ ಸ್ನೇಹಿ ಕೇಂದ್ರ, ಗ್ರಾಮ ಪಂಚಾಯತಗಳಲ್ಲಿಯ ಬಾಪೂಜಿ ಸೇವಾ ಕೇಂದ್ರ  ಅಲ್ಲದೆ ಮತಗಟ್ಟೆ ಅಧಿಕಾರಿ ಬಳಿ ಇರುವ ಮತದಾರ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಲು ತಿಳಿಸಿದರು.

ಅಂಗನವಾಡಿ ಸಹಾಯಕಿರನ್ನು ಅಂಗನವಾಡಿ ಕಾರ್ಯಕರ್ತೆಯರನ್ನಾಗಿ ಬಡ್ತಿ ನೀಡುವ ಹಾಗೂ ಸೇವಾ ವೇತನ  ಕುರಿತು ಈ ಸಭೆಯಲ್ಲಿ ಚಚರ್ಿಸಲಾಯಿತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾರಿ ಉಪನಿರ್ದೇಶಕಿ  ಅಕ್ಕಮಹಾದೇವಿ, ಹಿರಿಯ ನಾಗರಿಕ ಮತ್ತು ವಿಕಲಚೇತನರ ಕಲ್ಯಾಣಾಧಿಕಾರಿ   ಆಶು ನಧಾಫ್, ತಾಲೂಕು ಶಿಶು ಆಭಿವೃದ್ಧಿ ಯೋಜನಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.