ಸ್ವಾತಂತ್ರ್ಯೋತ್ಸವದ ಯುವ ಸಂಭ್ರಮ- ಸಾಂಸ್ಕೃತಿ ಕಾರ್ಯಕ್ರಮಗಳ ವಿಜೇತ ತಂಡಗಳಿಗೆ ಜಿಲ್ಲಾಡಳಿತದಿಂದ ಬಹುಮಾನ, ಪ್ರಮಾಣ ಪತ್ರ ವಿತರಿಸಲಾಗುವುದು: ಜಿಲ್ಲಾಧಿಕಾರಿ ದಿವ್ಯ ಪ್ರಭು.

ಸ್ವಾತಂತ್ರ್ಯೋತ್ಸವದ ಯುವ ಸಂಭ್ರಮ- ಸಾಂಸ್ಕೃತಿ ಕಾರ್ಯಕ್ರಮಗಳ        ವಿಜೇತ ತಂಡಗಳಿಗೆ ಜಿಲ್ಲಾಡಳಿತದಿಂದ ಬಹುಮಾನ, ಪ್ರಮಾಣ ಪತ್ರ ವಿತರಿಸಲಾಗುವುದು: ಜಿಲ್ಲಾಧಿಕಾರಿ ದಿವ್ಯ ಪ್ರಭು.  The winning teams of the Independence Day youth celebration and cultural programs will be awarded pr

ಸ್ವಾತಂತ್ರ್ಯೋತ್ಸವದ ಯುವ ಸಂಭ್ರಮ- ಸಾಂಸ್ಕೃತಿ ಕಾರ್ಯಕ್ರಮಗಳ  

    ವಿಜೇತ ತಂಡಗಳಿಗೆ ಜಿಲ್ಲಾಡಳಿತದಿಂದ ಬಹುಮಾನ, ಪ್ರಮಾಣ ಪತ್ರ ವಿತರಿಸಲಾಗುವುದು: ಜಿಲ್ಲಾಧಿಕಾರಿ ದಿವ್ಯ ಪ್ರಭು.  


ಧಾರವಾಡ  02: ಸ್ವಾತಂತ್ರ್ಯ ಹೋರಾಟದ ದಾರಿಯನ್ನು ಸಾಂಸ್ಕೃತಿ ಕಾರ್ಯಕ್ರಮಗಳ ಮೂಲಕ ಪರಿಚಯಿಸುವ ವಿಶೇಷವಾಗಿ ಯುವ ಸಮೂಹಕ್ಕಾಗಿ ಆಗಸ್ಟ್‌ 14 ರಂದು ಆಯೋಜಿಸಲಾಗುತ್ತಿರುವ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವು ಯಶಸ್ವಿಯಾಗಿ ಜರಗಲು ಎಲ್ಲ ಅನುಭವಿ ತಜ್ಞರು, ಕಲಾವಿದರು ಮತ್ತು ಕಲಾಸಂಘಟಕರು ಸಹಕಾರ ನೀಡಬೇಕು. ಕಾರ್ಯಕ್ರಮದಲ್ಲಿ  ಯಾವುದೇ ತೊಂದರೆ ಅಥವಾ ಅಡಚಣೆಯಾಗದಂತೆ ಅಗತ್ಯ ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಸಾಂಸ್ಕೃತಿಕ ಸಂಭ್ರಮಕ್ಕೆ ಕಾಲೇಜು ತಂಡಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.  

ಅವರು ಇಂದು (ಜು.02) ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಸ್ವಾತಂತ್ರ್ಯೋತ್ಸವದ ಯುವ ಸಂಭ್ರಮ-2025 ರ ಕುರಿತು ರಚಿಸಿರುವ ವಿವಿಧ ಸಮಿತಿಗಳ ಅಧ್ಯಕ್ಷರ ಹಾಗೂ ಸದಸ್ಯರ ಪೂರ್ವಸಿದ್ಧತೆ ಸಭೆ ಜರುಗಿಸಿ, ಮಾತನಾಡಿದರು.  

ಸ್ವಾತಂತ್ರ್ಯೋತ್ಸವ ಆಚರಣೆ ಬರೀ ಆಗಸ್ಟ್‌ 15 ಕ್ಕೆ ಮಾತ್ರ ಮೀಸಲಾಗಬಾರದು. ಮುಖ್ಯವಾಗಿ ಯುವಕ, ಯುವತಿಯರು ಸ್ವಾತಂತ್ರ್ಯದ ಸಾಕ್ಷಿ ಚಿತ್ರವನ್ನು ಅನುಭವಿಸಲು ಹಾಗೂ ಅಲ್ಲಿಯ ಆದರ್ಶಗಳನ್ನು ನೆನಪಿಸಿಕೊಂಡು ತಮ್ಮಲ್ಲಿ ಅಳವಡಿಸಿಕೊಳ್ಳಲು ಅನುವಾಗುವಂತೆ ಇಡೀ ರಾಜ್ಯಕ್ಕೆ ಮಾದರಿಯಾಗುವ ಸ್ವಾತಂತ್ರ್ಯೋತ್ಸವದ ಯುವ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್‌.ಲಾಡ್ ಅವರ ವಿಶೇಷ ಆಸಕ್ತಿ ಹಾಗೂ ಮಾರ್ಗದರ್ಶನದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.  ಈ ಕಾರ್ಯಕ್ರಮದಲ್ಲಿ ಯುವಸಮೂಹಕ್ಕೆ ಸ್ವಾತಂತ್ರ್ಯೋತ್ಸವದ ವಿಶೇಷ ಸಂದೇಶ ತಲುಪುವಂತೆ ಸಮಿತಿಗಳು ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.  

ಸಾಂಸ್ಕೃತಿಕ ಯುವ ಸಂಭ್ರಮ ಕಾರ್ಯಕ್ರಮದ ಮೂಲಕ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಹಾಗೂ ಅವರಲ್ಲಿನ ಸೂಪ್ತ ಪ್ರತಿಭೆಯನ್ನು ದೇಶದ ಪ್ರಗತಿಗೆ ಪೂರಕವಾಗಿ ಬಳಸಿಕೊಳ್ಳುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಎಲ್ಲಾ ಇಲಾಖೆಗಳು ಸಹಕರಿಸಬೇಕು ಮತ್ತು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಅವರು ಸೂಚಿಸಿದರು.  

ವೇದಿಕೆ ಸಿದ್ಧತೆ, ಧ್ವನಿ ಮತ್ತು ಬೆಳಕಿನ ವ್ಯವಸ್ಥೆ ಹಾಗೂ ಆವರಣದ ಅಲಂಕಾರ ಅಚ್ಚುಕಟ್ಟಾಗಿ ಮಾಡಬೇಕು. ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಮತ್ತು ಸ್ಥಳೀಯ ಕಲಾವಿದರಿಂದ ನೃತ್ಯ, ನಾಟಕ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಅವರಿಗೆ ಬೇಕಾದ ಕೊಠಡಿಗಳ ವ್ಯವಸ್ಥೆಯನ್ನು ಮಾಡಬೇಕೆಂದು ಅವರು ತಿಳಿಸಿದರು. 

ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಕಾರ್ಯಕ್ರಮದ ಸಂಪೂರ್ಣ ಭದ್ರತೆ ಹಾಗೂ ಶಿಸ್ತುಪಾಲನೆಯನ್ನು ಖಚಿತಪಡಿ, ಯಾವುದೇ ಅಡಚಣೆಗಳು ಆಗದ ಹಾಗೆ ನೋಡಿಕೊಳ್ಳಬೇಕು.   ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರು ಮತ್ತು ಆಸನ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು. 

  ರಂಗಾಯಣದ ನಿರ್ದೇಶಕ ರಾಜು ತಾಳಿಕೋಟಿ ಮಾತನಾಡಿ, ಸಾಂಸ್ಕೃತಿ ಕಾರ್ಯಕ್ರಮಗಳ ಆಯ್ಕೆ ಸಮಿತಿಯ ಸಭೆ ಜರುಗಿಸಿ, ಚರ್ಚಿಸಲಾಗಿದೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಆಷಯದಂತೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಯುವ ಸಾಂಸ್ಕೃತಿಕ ಸಂಭ್ರಮದಲ್ಲಿ ತಾವು ಸಹ ಪಾಲ್ಗೊಂಡು ವೇದಿಕೆಯಲ್ಲಿ ಕಾರ್ಯಕ್ರಮ ನೀಡುವುದಾಗಿ ಅವರು ತಿಳಿಸಿದರು.  

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರೀಮಾ ಪವಾರ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ರುದ್ರೇಶ ಘಾಳಿ, ಉಪಪೊಲೀಸ್ ಆಯುಕ್ತ ಮಹಾನಿಂಗ ನಂದಗಾವಿ ಅವರು ವೇದಿಕೆಯ ಮೇಲೆ ಇದ್ದರು.   

ವಿವಿಧ ಸಮಿತಿಗಳ ಪರವಾಗಿ ಡಾ. ಶಶೀಧರ ನರೇಂದ್ರ, ಪ್ರಕಾಶ ಮಲ್ಲಿಗವಾಡ, ನಾಗರತ್ನಾ ಹಡಗಲಿ, ಡಾ. ಜೀನದತ್ತ ಹಡಗಲಿ, ಡಾ. ರಾಮು ಮೂಲಗಿ, ಡಾ.ಡಿ.ಎಚ್‌. ಹೂಗಾರ ಸೇರಿದಂತೆ ಇತರರು ಸಮಿತಿಗಳ ಕಾರ್ಯವೈಖರಿಗಳ ಕುರಿತು ಮಾತನಾಡಿದರು.  

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೇಕ್ಕೆರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.  

ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಸಂತೋಷ ಬಿರಾದಾರ ಸೇರಿದಂತೆ ವಿವಿಧ ಸಮಿತಿಗಳ ಸದಸ್ಯರು ಭಾಗವಹಿಸಿದ್ದರು.