ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ
ಸಂಸತ್
ನವದೆಹಲಿ
25: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ
ಆರಂಭವಾಗಲಿದ್ದು, ವಕ್ಫ್ ಕಾಯ್ದೆ (ತಿದ್ದುಪಡಿ)
ಮಸೂದೆ ಸೇರಿದಂತೆ ಹಲವು ಮಹತ್ವದ ಮಸೂದೆಗಳ
ಚರ್ಚೆಗೆ ದಿನಾಂಕ ನಿಗದಿಯಾಗಿದೆ.
ಸಂಸತ್ತಿನ
ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗುತ್ತಿದ್ದು,
ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿರೋಧ
ಪಕ್ಷಗಳಿಗೆ ಪ್ರಧಾನಿ ಮೋದಿ ಮನವಿ
ಮಾಡಿಕೊಂಡಿದ್ದಾರೆ.
ಅಧಿವೇಶನ
ಕಲಾಪದಲ್ಲಿ ಭಾಗವಹಿಸುವ ಮುನ್ನ ಸಂಸತ್ತಿನ ಹೊರಗೆ
ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಪ್ರಧಾನಿ ಮೋದಿ ಅವರು
ಮಾತನಾಡಿ 2024 ವರ್ಷದ ಕೊನೆಯ ದಿನಗಳು
ನಡೆಯುತ್ತಿದ್ದು, ದೇಶವು 2025ರ ನೂತನ ವರ್ಷಕ್ಕೆ
ತಯಾರಿ ನಡೆಸುತ್ತಿದೆ. ಸಂಸತ್ತಿನ ಈ ಅಧಿವೇಶನವು ಹಲವಾರು
ವಿಧಗಳಲ್ಲಿ ವಿಶೇಷವಾಗಿದೆ. ಅತ್ಯಂತ ಮುಖ್ಯ ವಿಷಯವೆಂದರೆ
ಸಂವಿಧಾನದ 75 ನೇ ವರ್ಷದ ಆರಂಭ.
ನಾಳೆ, ಸಂವಿಧಾನ ದಿನ. ಎಲ್ಲರೂ
ನಮ್ಮ ಸಂವಿಧಾನದ 75 ನೇ ವರ್ಷವನ್ನು ಆಚರಿಸುತ್ತಾರೆ.
75ನೇ ವರ್ಷದ ಸಂವಿಧಾನದ ದಿನದ
ಸಂದರ್ಭದಲ್ಲಿ ಅಧಿವೇಶನ ನಡೆಯುತ್ತಿದ್ದು, ಈ
ಅಧಿವೇಶನದ ಕಲಾಪ ಸುಗಮವಾಗಿ ಸಾಗಲು
ವಿರೋಧ ಪಕ್ಷಗಳು ಅನುವು ಮಾಡಿಕೊಡಬೇಕೆಂದು
ಮನವಿ ಮಾಡಿದರು.
ಅಧಿವೇಶನದಲ್ಲಿ
ಎಲ್ಲಾ ವಿಚಾರಗಳ ಕುರಿತು ಚರ್ಚೆಗೆ
ಅವಕಾಶ ಮಾಡಿಕೊಡಲಾಗುತ್ತದೆ. ಜನರ ಸಮಸ್ಯೆಗಳ ಪ್ರಾಮಾಣಿಕ
ಚರ್ಚೆ ನಡೆಸಬೇಕಿದೆ. ಹೀಗಾಗಿ, ಎಲ್ಲರೂ ಕಲಾಪದಲ್ಲಿ
ಭಾಗಿಯಾಗಬೇಕು, ಸುಗಮ ಕಲಾಪಕ್ಕೆ ಅವಕಾಶ
ಮಾಡಿಕೊಡಬೇಕೆಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಎಂದಿಗೂ ಜನರ ಸಮಸ್ಯೆಗಳ ಮಾತನಾಡುವುದು ಕಡಿಮೆ. ಕೇವಲ ಅಧಿಕಾರದ ದಾಹ ಇರುವವರನ್ನು ಜನರು ತಿರಸ್ಕರಿಸಿದ್ದಾರೆ. ದೇಶದ ಜನ ಎಲ್ಲವನ್ನೂ ಅರ್ಥ ಮಾಡಿಕೊಂಡಿದ್ದಾರೆ. ವಿಪಕ್ಷಗಳಿಂದ ಕಲಾಪ ಸಮಯ ವ್ಯರ್ಥ ಮಾಡುವ ಪ್ರಯತ್ನವಾಗುತ್ತಿದೆ. ಜನರ ನಿರೀಕ್ಷೆಯದಂತೆ ನಡೆದುಕೊಳ್ಳುತ್ತಿಲ್ಲ ಎಂದು ಕಿಡಿಕಾರಿದರು.
ನಾವು ಪ್ರತಿ ವಿಷಯದ ವಿವಿಧ
ಅಂಶಗಳನ್ನು ಸದನದಲ್ಲಿ ಅತ್ಯಂತ ಆರೋಗ್ಯಕರ ರೀತಿಯಲ್ಲಿ
ಎತ್ತಿ ತೋರಿಸಬೇಕು. ಈ ಅಧಿವೇಶನವನ್ನು ಉತ್ಸಾಹದಿಂದ
ಮುನ್ನಡೆಸಲು ಎಲ್ಲಾ ಗೌರವಾನ್ವಿತ ಸಂಸದರನ್ನು
ಆಹ್ವಾನಿಸುತ್ತೇನೆಂದು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 