ಉಡಿ ತುಂಬವ ಕಾರ್ಯ ಶ್ಲಾಘನೀಯ: ಗುಳೇದಗುಡ್ಡ ಕಾಶೀನಾಥ ಮಹಾಸ್ವಾಮಿಗಳು
The work of filling the Udi is commendable: Guledagudda Kashinath Mahaswamy
ತಾಳಿಕೋಟಿ 24 : ಪುರಾಣ ಮಂಗಲೋತ್ಸವದಲ್ಲಿ ಮುತ್ತೈದೆಯರಿಗೆ ಉಡಿ ತುಂಬುವುದು ಅತ್ಯಂತ ಪುಣ್ಯದಾಯಕವಾದ ಕಾರ್ಯ ಇದು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಗುಳೇದಗುಡ್ಡ ಗಚ್ಚಿನಮಠದ ಪೂಜ್ಯ ಕಾಶೀನಾಥ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ ರಾಜವಾಡೆ ಆವರಣದಲ್ಲಿ ವೀರರಾಣಿ ಕಿತ್ತೂರು ಚೆನ್ನಮ್ಮ ಪುತ್ತಳಿ ಸ್ಥಾಪನೆಯ ದ್ವಿತೀಯ ವಾರ್ಷಿಕೋತ್ಸವದ ಅಂಗವಾಗಿ ರವಿವಾರ ಹಮ್ಮಿಕೊಂಡ "ಕಿತ್ತೂರು ಚೆನ್ನಮ್ಮ ಜೀವನ ಚರಿತ್ರೆ" ಪ್ರವಚನ ಮಂಗಲೋತ್ಸವ ಹಾಗೂ ಉಡಿ ತುಂಬುವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಶ್ರದ್ಧೆ ಭಕ್ತಿಯಿಂದ ಭಾಗವಹಿಸಿ ಚೆನ್ನಮ್ಮಾಜೀಯ ಪ್ರೀತಿಗೆ ಪಾತ್ರರಾಗಿದ್ದಾರೆ. ಇಂತಹ ಅಪರೂಪದ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದು ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದರು.
ಪ್ರವಚನಕಾರ ಪೂಜ್ಯ ಪ್ರಭುಲಿಂಗ ಶರಣರು ಕಾರ್ಯಕ್ರಮದ ಸಮ್ಮುಖ ವಹಿಸಿ ಆಶೀರ್ವಚನ ನೀಡಿದರು. ಉಡಿ ತುಂಬುವ ಕಾರ್ಯಕ್ರಮಕ್ಕೆ ಸಿಂದಗಿ ಶಾಸಕ ಅಶೋಕ ಮನಗೂಳಿ ಧರ್ಮಪತ್ನಿ ನಾಗರತ್ನಮ್ಮ ಅಶೋಕ ಮನಗೂಳಿ ಹಾಗೂ ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ 201 ಮುತ್ತೈದೆಯರಿಗೆ ಉಡಿ ತುಂಬಲಾಯಿತು. ಈ ವೇಳೆ ವೀರರಾಣಿ ಕಿತ್ತೂರು ಚೆನ್ನಮ್ಮ ಮೂರ್ತಿ ನಿರ್ಮಾಣ ಸಮಿತಿ ಗೌರವಾಧ್ಯಕ್ಷ ಚಂದ್ರಶೇಖರ ಪಾಟೀಲ, ಅಧ್ಯಕ್ಷೆ ನೀಲಮ್ಮಗೌಡತಿ ಎಸ್. ಪಾಟೀಲ,ಉಪಾಧ್ಯಕ್ಷ ಕಲ್ಲಪ್ಪ ಪಾಟೀಲ, ಪ್ರಧಾನ ಕಾರ್ಯದರ್ಶಿ ಎಮ್.ಬಿ.ಕೋಟಿ, ಕಾರ್ಯದರ್ಶಿ ಬಿ.ಕೆ. ಪಾಟೀಲ, ವಿಶ್ವನಾಥ ಪಾಟೀಲ, ಅಂಬಿಕಾ ಪಾಟೀಲ, ಅಶ್ವಿನಿ ಪಾಟೀಲ, ಸಮಾಜದ ಗಣ್ಯರು ಹಿರಿಯರು ಹಾಗೂ ಮಹಿಳೆಯರು ಇದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 