ಜಲ ಸ್ಥಾವರ ಕಾಮಗಾರಿ ಮೂರು ತಿಂಗಳೊಳಗೆ ಪೂರ್ಣ, ಹೊಸಪೇಟೆ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಶೀಘ್ರ ಕ್ರಮ : ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್‌.

ಜಲ ಸ್ಥಾವರ ಕಾಮಗಾರಿ ಮೂರು ತಿಂಗಳೊಳಗೆ ಪೂರ್ಣ, ಹೊಸಪೇಟೆ ಜನತೆಗೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಶೀಘ್ರ ಕ್ರಮ : ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್‌. 

ವಿಜಯನಗರ 05 : ಹೊಸಪೇಟೆ ಜನರ ಮನೆ ಮನೆಗೆ ನದಿಯ ನೀರನ್ನು ಪೂರೈಸುವ ನಿಟ್ಟಿನಲ್ಲಿ ನಗರದಲ್ಲಿ 20 ಲಕ್ಷ ಲೀಟರ್ ಸಾಮಾರ್ಥ್ಯದ ನೀರಿನ ಸ್ಥಾವರ ನಿರ್ಮಾಣ ಕಾಮಗಾರಿ ಮೂರು ತಿಂಗಳೊಳಗೆ ಪೂರ್ಣಗೊಳ್ಳಲಿದ್ದು ಶೀಘ್ರವೇ ನೀರು ಪೂರೈಸುವ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಸ್‌.ದಿವಾಕರ್ ಹೇಳಿದರು.  

ನಗರದ ಜಲ ಶುದ್ಧಿಕರಣ ಘಟಕಕ್ಕೆ ಮಂಗಳವಾರ ಭೇಟಿ ನೀಡಿ ಪರೀಶೀಲಿಸಿ ಅವರು ಮಾತನಾಡಿದರು. ಹೊಸಪೇಟೆ ನಗರದ ಶೇ.70 ರಷ್ಟು ಭಾಗಗಳಿಗೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಜಲ ಶುದ್ಧೀಕರಣ ಘಟಕದಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಈ ಘಟಕವು ಹಳೆಯದಾಗಿದೆ. ಇದರ ಜೊತೆಗೆ ನೂತನ ಶುದ್ಧ ಕುಡಿಯುವ ನೀರಿನ ಘಟಕ ಮತ್ತು 20 ಲಕ್ಷ ಲೀಟರ್ ಸಾಮಾರ್ಥ್ಯದ ನೀರಿನ ಟ್ಯಾಂಕ್ ನಿರ್ಮಿಸುತ್ತಿದ್ದು ಮುಂದಿನ ಮೂರು ತಿಂಗಳೊಳಗೆ ಸಂಪೂರ್ಣ ಕಾಮಗಾರಿ ಮುಕ್ತಾಯಗೊಳ್ಳುತ್ತದೆ. ಶೀಘ್ರವೇ ಹೊಸಪೇಟೆ ನಗರದ ಜನತೆಗೆ ಜಲಾಶಯದಿಂದ ನೀರು ಪೂರೈಸುವ ವ್ಯವಸ್ಥೆ ಸಾಧ್ಯವಾಗಲಿದೆ ಎಂದರು.  

 ಘಟಕದ ಕಾಮಗಾರಿಯನ್ನು ಪರೀಶೀಲನೆ ನಡೆಸಿ ಅಧಿಕಾರಿಗಳಿಗೆ ನಿಗಧಿತ ಸಮಯದಲ್ಲಿ ಕಾಮಗಾರಿ ಮುಕ್ತಾಯಗೊಳಿಸಿ ಹಸ್ತಾಂತರಿಸಲು ಸೂಚಿಸಿದರು. ಈ ವೇಳೆ ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ವಿ.ಮನೋಹರ, ನಗರಸಭೆ ಆಯುಕ್ತರಾದ ಸಿ.ಚಂದ್ರ​‍್ಪ, ನಗರಸಭೆ ಎಇಇ ಭಾರತಿ, ಜೆಇ ತೇಜಸ್ವಿನಿ ಇತರರಿದ್ದರು. 

ಪೋಟೋ ಸಂಖ್ಯೆ : 1,2,3,4