ಯುವ ಜನತೆ ದೇಶದ ಅಮೂಲ್ಯ ಸಂಪತ್ತು
The youth are the country's invaluable asset
ತಾಳಿಕೋಟಿ 26: ಯುವಜನತೆ ಈ ದೇಶದ ಅಮೂಲ್ಯ ಸಂಪತ್ತಾಗಿದ್ದಾರೆ ಅವರು ಅಮಲು ಪದಾರ್ಥಗಳಿಗೆ ಬಲಿಯಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಂಡರೆ ಸಮಾಜ ಭಾರಿ ನಷ್ಟವನ್ನು ಅನುಭವಿಸಬೇಕಾಗುತ್ತದೆ ಎಂದು ಶಾಸಕ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾದ ಅಪ್ಪಾಜಿ ನಾಡಗೌಡರು ಹೇಳಿದರು. ಶುಕ್ರವಾರ ಪಟ್ಟಣದ ಸಂಗಮೇಶ್ವರ ಸಭಾಭವನದಲ್ಲಿ ಬಸವನ ಬಾಗೇವಾಡಿ ವಿಭಾಗದ ತಾಳಿಕೋಟಿ ಪೊಲೀಸ್ ಠಾಣೆ ವತಿಯಿಂದ ಕರ್ನಾಟಕ ಸರ್ಕಾರ ನಡೆಸುತ್ತಿರುವ ರೈಸ್ ಬೇಡ ಡ್ರಗ್ಸ್ ಮುಕ್ತ ಅಭಿಯಾನದ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳ ಸೇವನೆಯಿಂದಾಗಿ ಪ್ರತಿದಿನ ಸಾವಿರಾರು ಜೀವಗಳು ಬಲಿಯಾಗುತ್ತಿವೆ. ವರದಿಗಳ ಪ್ರಕಾರ ನಮ್ಮ ದೇಶದಲ್ಲಿ ಸುಮಾರು 13ರಿಂದ 14 ಕೋಟಿ ಜನರು ಮದ್ಯಪಾನ ವ್ಯಸನಗಳಾಗಿದ್ದಾರೆ. ಇದರಲ್ಲಿ ಯುವಕರ ಸಂಖ್ಯೆಯೇ ಹೆಚ್ಚಾಗಿರುವುದು ಇನ್ನಷ್ಟು ಆತಂಕದ ವಿಷಯವಾಗಿದೆ. ನಮ್ಮ ಸಮಾಜದಲ್ಲಿ ಕೆಲವು ಡ್ರಗ್ಸ್ ಮಾಪಿಯಾಗಳು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿವೆ ಯುವಕರು ಇದರ ಕುರಿತು ಎಚ್ಚೆತ್ತುಕೊಳ್ಳಬೇಕು. ವಿದ್ಯಾರ್ಥಿ ಯುವಕರು ತಮ್ಮ ಉಜ್ವಲ ಭವಿಷ್ಯವನ್ನು ನಿರ್ಮಾಣ ಮಾಡಿಕೊಳ್ಳಲು ಎಲ್ಲ ರೀತಿಯ ವ್ಯಸನ ಹಾಗೂ ಕೆಡುಕುಗಳಿಂದ ಮುಕ್ತರಾಗಬೇಕು.
ನಮ್ಮ ಸರ್ಕಾರ ಕರ್ನಾಟಕವನ್ನು ಅಮಲು ಮುಕ್ತ ರಾಜ್ಯವನ್ನಾಗಿ ಮಾಡುವ ಉದ್ದೇಶದಿಂದ ಈ ಅಭಿಯಾನವನ್ನು ಹಮ್ಮಿಕೊಂಡಿದೆ ಇದರ ಯಶಸ್ವಿಗೆ ತಾವೆಲ್ಲರೂ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದರು. ವೈಧ್ಯಾಧಿಕಾರಿ ಡಾ.ಶ್ರೀಶೈಲ ಹುಕ್ಕೇರಿ ಹಾಗೂ ಮುದ್ದೇಬಿಹಾಳ ಸಿಪಿಐ ಮೊಹಮ್ಮದ್ ಫಸಿಯುದ್ದೀನ ಮಾತನಾಡಿದರು. ಇದೇ ಸಂದರ್ಭದಲ್ಲಿ ಅಮಲ ಪದಾರ್ಥಗಳ ಸೇವನೆ ವಿರೋಧಿಸುವ ಪ್ರತಿಜ್ಞಾ ವಿಧಿಯನ್ನು ಪಿಎಸ್ಐ ಜ್ಯೋತಿ ಕೋತ್ ಬೋಧಿಸಿದರು.
ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಡಾ.ವಿನಯಾ ಹೂಗಾರ, ತಾಲೂಕ ಪಂಚಾಯತ ಕಾರ್ಯ ನಿರ್ವಹಣಾಧಿಕಾರಿ ಅನಸೂಯಾ ಚಲವಾದಿ, ಪುರಸಭೆ ಮುಖ್ಯಾಧಿಕಾರಿ ವಸಂತ ಪವಾರ, ಪಿಎಸ್ಐ ಜ್ಯೋತಿ ಕೋತ್, ಸಂಗಮೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸಚಿನ ಎಚ್.ಪಾಟೀಲ, ಸಂಗನಗೌಡ ಅಸ್ಕಿ,ಪಟ್ಟಣದ ಪಿಯು ಕಾಲೇಜಿನ ಪ್ರಾಚಾರ್ಯರು ಉಪನ್ಯಾಸಕರು ವಿದ್ಯಾರ್ಥಿಗಳು ಹಾಗೂ ಪೋಲಿಸ್ ಸಿಬ್ಬಂದಿಗಳು ಇದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 