ಯುವ ಸಮೂಹ ದುಶ್ಚಟಗಳಿಗೆ ದಾಸರಾಗದೇ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು: ನ್ಯಾ. ಶೈಲಜಾ ಎಚ್.ವಿ.
The youth should not become slaves to bad habits and should develop good habits: Justice Shailaja H.
ಅಂತರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗಿ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ಪಾಕ್ಷಿಕ ದಿನ
ಹಾವೇರಿ.ಜೂ.30: ಯುವ ಸಮೂಹ ಮಾದಕ ವಸ್ತುಗಳ ದುಶ್ಚಟಗಳಿಗೆ ದಾಸರಾಗದೇ ಒಳ್ಳೆಯ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. “ನಶಾ ಮುಕ್ತ ಭಾರತ”ದ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಶೈಲಜಾ ಎಚ್.ವಿ. ಅವರು ಹೇಳಿದರು.
ಹಾವೇರಿ ನಗರದ ಹೊಸಮಠದ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಬಕಾರಿ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ “ಅಂತರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ಪಾಕ್ಷಿಕ ದಿನ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಿಂದ ಮಾದಕ ವಸ್ತುಗಳ ವ್ಯಸನ ತೊಡೆದುಹಾಕಲು ಈ ಆಚರಣೆ ಮಾಡಲಾಗುತ್ತಿದೆ. ನಶಾ ಮುಕ್ತ ಭಾರತ ಒಬ್ಬರಿಂದ ಸಾಧ್ಯವಿಲ್ಲ, ವಿವಿಧ ಇಲಾಖೆಗಳು ಹಾಗೂ ಸಮಾಜದ ಸಹಭಾಗಿತ್ವ ಅಗತ್ಯವಾಗಿದೆ. ನಮ್ಮ ನಮ್ಮ ಕುಟುಂಬದಲ್ಲಿ ಇರುವ ಮಾದಕ ವ್ಯಸನಿಗಳಿಗೆ ರಿಹ್ಯಾಬ್ಲೇಷನ್ ಸೆಂಟರ್‌ಗಳಲ್ಲಿ ಸೂಕ್ತ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆ ಕೊಡಿಸುವ ಮೂಲಕ ನಶಾ ಮುಕ್ತ ಭಾರತಕ್ಕೆ ಎಲ್ಲರೂ ಮುಂದಾಗಬೇಕು ಎಂದರು.
ಮಾದಕ ವಸ್ತುಗಳ ಸೇವೆನೆಯಿಂದ ಆರೋಗ್ಯದ ಮೇಲೆ ಅನೇಕ ದುಷ್ಪರಿಣಾಮಗಳು ಉಂಟಾಗುತ್ತವೆ. ಮನುಷ್ಯ ತನ್ನ ಮಾನಸಿಕ ಸಮತೋಲನ ಕಳೆದುಕೊಳ್ಳುತ್ತಾನೆ, ಅನೇಕ ಅಪರಾಧಗಳಲ್ಲಿ ಭಾಗಿಯಾಗುತ್ತಾನೆ. ಹಾಗಾಗಿ ಮಾದಕ ವಸ್ತುಗಳಿಂದ ದೂರವಿರಬೇಕು. ನಿಮ್ಮ ಸುತ್ತಮುತ್ತ ಅನಧಿಕೃತವಾಗಿ ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆ ಕಂಡುಬಂದರೆ ಕೂಡಲೇ ಹತ್ತಿರದ ಪೊಲೀಸ್ ಠಾಣೆ ಅಥವಾ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಮಾಹಿತಿ ನೀಡಬೇಕು. ಒಟ್ಟಾರೆ ಹಾವೇರಿ ಜಿಲ್ಲೆ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ ಮಾತನಾಡಿ, ಮಾದಕ ವಸ್ತುಗಳ ಸೇವನೆ ಅತ್ಯಂತ ಅಪಾಯಕಾರಿಯಾಗಿದೆ. ಕ್ಷಣಿಕ ಸಂತೋಷಕ್ಕೆ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗುತ್ತಿರುವುದು ಹೆಚ್ಚಾಗಿದೆ. ಸ್ನೇಹಿತರ ಒತ್ತಾಯ, ದೈಹಿಕ ಹಾಗೂ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಲು ಹೀಗೆ ಅನೇಕ ಕಾರಣಗಳಿಗಾಗಿ ಜನರು ಮಾದಕಗಳ ಮೊರೆ ಹೋಗುತ್ತಿದ್ದಾರೆ. ನಂತರ ಈ ವ್ಯಸನದಿಂದ ಹೊರಬರಲಾರದ ಸ್ಥಿತಿಯಲ್ಲಿ ಬಳಲುತ್ತಿದ್ದಾರೆ. ಯುವ ಸಮೂಹ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತರಾಗಿರಬೇಕು ಹಾಗೂ ದುಶ್ಚಟಗಳಿಂದ ದೂರ ಉಳಿಯಬೇಕು ಎಂದು ಸಲಹೆ ನೀಡಿದರು.
ಅಬಕಾರಿ ಇಲಾಖೆ ಇನ್ಸಪೆಕ್ಟರ್ ಸಿದ್ದಪ್ಪ ಮೇಟಿ ಮಾತನಾಡಿ, ಪಾಕ್ತಿಸ್ತಾನ, ಅಪಘಾನಿಸ್ತಾನ್ ಹಾಗೂ ಇರಾನ್ ದೇಶಗಳಲ್ಲಿ ಗಾಂಜಾ ಹಾಗೂ ಹೆರಾಯಿನ್ ನಂತಹ ಮಾದಕ ವಸ್ತುಗಳನ್ನು ಬೆಳೆಯುತ್ತಾರೆ. ಯುವ ಸಮೂಹವನ್ನು ಗರಿಯಾಗಿಟ್ಟುಕೊಂಡು ದೇಶದ ಗಡಿ ಭಾಗದ ಪಂಜಾಬ್ ಹಾಗೂ ರಾಜಸ್ತಾನ್ ರಾಜ್ಯಗಳಿಗೆ ಅಕ್ರಮವಾಗಿ ಮಾದಕ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದಾರೆ. ಯಾವುದೇ ಒಂದು ದೇಶದ ಯುವಶಕ್ತಿಯನ್ನು ಹಾಳು ಮಾಡಲು ಮಾದಕ ವಸ್ತುಗಳ ಬಳಕೆ ಒಂದೇ ಸಾಕು. ಯುವ ಸಮೂಹ ಮಾದಕ ವಸ್ತುಗಳ ದುಶ್ಚಟಗಳಿಗೆ ಬಲಿಯಾಗುವುದರಿಂದ ದೇಶದ ಆರ್ಥಿಕ ಬೆಳವಣಿಗೆ ಕುಂಟಿತವಾಗುತ್ತದೆ. ಹಾಗಾಗಿ ಯುವ ಸಮೂಹ ದುಶ್ಚಟಗಳಿಂದ ದೂರವಿಬೇಕು, ಮನಸ್ಸನ್ನು ಹತೋಟಿಯಲ್ಲಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ಮನೋವೈದ್ಯ ಡಾ.ವಿಜಯಕುಮಾರ ಬಿ ಅವರು ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ಮಾನಸಿಕ ರೋಗದ ಲಕ್ಷಣಗಳ ಕುರಿತು ಉಪನ್ಯಾಸ ನೀಡಿದರು.
ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಮಂಜುನಾಥ ವಡ್ಡರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಚನಬಸಯ್ಯ ವಿರಕ್ತಮಠ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಪಿ.ಎಸ್.ಹೆಬ್ಬಾಳ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಚನ್ನಪ್ಪ ಲಮಾಣಿ, ಜಿಲ್ಲಾ ತಂಬಾಕು ನಿಂತ್ರಣ ಸಲಹೆಗಾರ ಡಾ.ಸಂತೋಷ ದಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಆಚಿಜನೇಯ ಹುಲ್ಲಾಳ ಇತರರು ಉಪಸ್ಥಿತರಿದ್ದರು.
ಪ್ರ ಶಿಕ್ಷಣಾರ್ಥಿಗಳಾದ ವಾಣಿ ಚನ್ನವೀರ್ಪನವರ ಸ್ವಾಗತಿಸಿದರು. ಸುಪರ್ಣಾ ಯಡಹಳ್ಳಿ ಕಾರ್ಯಕ್ರಮ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 