ದಶ ದಿಕ್ಕುಗಳಲ್ಲೂ ವೀರಭದ್ರಸ್ವಾಮಿ ದೇವಾಲಯಗಳಿವೆ: ಈರಯ್ಯ ಹಿರೇಮಠ
There are Veerabhadra Swamy temples in all ten directions: Irayya Hiremath
ಬೆಟಗೇರಿ, 26 : ಅಧರ್ಮದ ನಾಶಕ್ಕಾಗಿ ಹಾಗೂ ಜಗದ ಉದ್ಧಾರಕ್ಕೆ ಉಗ್ರಸ್ವರೂಪಿ ವೀರಭದ್ರೇಶ್ವರರು ಅವತರಿಸಿದರು ಎಂದು ಬೆಟಗೇರಿ ಗ್ರಾಮದ ವೇದಮೂರ್ತಿ ಈರಯ್ಯ ಹಿರೇಮಠ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಆ.26ರಂದು ನಡೆದ ವೀರಭದ್ರೇಶ್ವರ ಜಯಂತ್ಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿ, ಎಲ್ಲ ಜಾತಿಜನಾಂಗದವರು ವೀರಭದ್ರನನ್ನು ಪೂಜಿಸಿದ ಇತಿಹಾಸವಿದೆ. ದೇಶದ ದಶ ದಿಕ್ಕುಗಳಲ್ಲೂ ವೀರಭದ್ರಸ್ವಾಮಿ ದೇವಾಲಯಗಳು ಕಾಣುತ್ತವೆ. ಶಿವನು ಸೃಷ್ಟಿಸಿದ ಗಣಾಧೀಶ್ವರರಲ್ಲಿ ವೀರಭದ್ರೇಶ್ವರನೂ ಓರ್ವನಾಗಿದ್ದಾನೆ ಎಂದರು.
ಸ್ಥಳೀಯ ವೀರಭದ್ರೇಶ್ವರ ದೇವಸ್ಥಾನದ ಅರ್ಚಕ ಸಂಗಯ್ಯ ಹಿರೇಮಠ ಸಮ್ಮುಖ ವಹಿಸಿದ್ದರು. ಇಲ್ಲಿಯ ವೀರಭದ್ರೇಶ್ವರ ದೇವಸ್ಥಾನದಲ್ಲಿರುವ ವೀರಭದ್ರೇಶ್ವರರ ಗದ್ಗುಗೆಗೆ ರುದ್ರಾಭಿಷೇಕ ಮತ್ತು ಭಾವಚಿತ್ರಕ್ಕೆ ಮಹಾಪೂಜೆ, ಸುಮಂಗಲೆಯರಿಂದ ನೈವೇದ್ಯ ಸಮರೆ್ನ, ದೀಪೋತ್ಸವ, ಪುರವಂತರಿಂದ ಒಡಪು ಹೇಳುವದು, ಮಹಾಮಂಗಲ, ಮಹಾಪ್ರಸಾದ ನಡೆಯಿತು.
ಹರ, ಗುರು, ಚರಮೂರ್ತಿಗಳು, ಗಣ್ಯರು, ವೀರಭದ್ರಸ್ವಾಮಿ ಪುರವಂತರು, ಭಕ್ತರು, ಮಹಿಳೆಯರು, ವೀರಭದ್ರೇಶ್ವರ ಜಯಂತ್ಯೋತ್ಸವ ಸೇವಾ ಸಮಿತಿ, ಗಜಾನನ ಯುವಕ ಮಂಡಳಿ ಅಧ್ಯಕ್ಷರು, ಸದಸ್ಯರು, ಎಲ್ಲ ಸಮುದಾಯದ ಹಿರಿಯ ನಾಗರಿಕರು, ಗ್ರಾಮಸ್ಥರು ಇದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 