ಎನ್.ಸಿ.ಸಿ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಉದ್ಯೋಗ ಅವಕಾಶಗಳಿವೆ: ದೇವರ್ಶಿ
There are plenty of job opportunities for NCC students in various fields: Devarshi
ಮುಧೋಳ 20: ಎನ್.ಸಿ.ಸಿ ಪ್ರವೇಶ ಪಡೆದುಕೊಂಡಿರುವ ವಿದ್ಯಾರ್ಥಿಗಳಿಗೆ ಕೇವಲ ಅಗ್ನಿವೀರ ಹುದ್ದೆಗಳಲ್ಲದೆ ಇನ್ನೂ ಬೇರೆ ಬೇರೆ ಕ್ಷೇತ್ರಗಳ ಉದ್ಯೋಗಗಳಲ್ಲಿ ಸಾಕಷ್ಟು ಅವಕಾಶಗಳಿವೆ, ಎನ್.ಸಿ.ಸಿ ಪಡೆದ ವಿದ್ಯಾರ್ಥಿ ಗಳು ವಿಜ್ಞಾನ ಮತ್ತು ತಂತ್ರಜ್ಞಾನ, ಸಂಶೋಧನೆಯ ವಿಷಯಗಳ ಕಡೆಗೆ ಹೆಚ್ಚಿನ ಗಮನಹರಿಸಿ, ಹೊಸ ಹೊಸ ಅವಿಷ್ಕಾರಗಳನ್ನು ಮಾಡಲುನ ಎನ್.ಸಿ.ಸಿ ಯಿಂದ ಹಲವಾರು ಅನುಕೂಲತೆಗಳು ಇರುವದನ್ನು ಹಾಗೂ ಅದರ ಸದುಪಯೋಗ ಪಡೆದುಕೊಂಡು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬಹುದೆಂದು ಬಾಗಲಕೋಟೆಯ 37 ಎನ್.ಸಿ.ಸಿ ಬಟಾಲಿಯನ್ ಆಡಳಿತಾಧಿಕಾರಿ ಕರ್ನಲ್ ದೇವರ್ಶಿ ದೆ ಅವರು ಹೇಳಿದರು.
ನಗರದ ಶ್ರೀ ಎಸ್.ಆರ್.ಕಂಠಿ ಮಹಾವಿದ್ಯಾಲಯಕ್ಕೆ ಮಂಗಳವಾರ ಭೇಟಿ ನೀಡಿ ಎನ್.ಸಿ.ಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉದ್ಯಮಿದಾರರಾಗಿ ಹೊರಹೊಮ್ಮಲು ಸ್ಟಾರ್ಟಪ್ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಳ್ಳವ ಕುರಿತು, ಪ್ರವಾಹ ಹಾಗೂ ವಿಪತ್ತು ನಿರ್ವಹಣೆಯಲ್ಲಿ ಎನ್.ಸಿ.ಸಿ ವಿದ್ಯಾರ್ಥಿಗಳ ಪಾತ್ರದ ಕುರಿತು ಮಾಹಿತಿ ನೀಡಿದರು.
ಪ್ರಾಚಾರ್ಯ ಡಾ.ಎಮ್.ಆರ್.ಜರಕುಂಟಿ ಅಧ್ಯಕ್ಷತೆವಹಿಸಿ ಮಾತನಾಡಿ ನಮ್ಮ ಮಹಾವಿದ್ಯಾಲಯದ ಎನ್.ಸಿ.ಸಿ ವಿದ್ಯಾರ್ಥಿಗಳು ಕ್ರೀಯಾಶೀಲರಾಗಿದ್ದಾರೆ ಹಾಗೂ ಎನ್.ಸಿ.ಸಿ ಪ್ರವೇಶಾತಿ ಪಡೆದು ಕೊಂಡಿರುವ ವಿದ್ಯಾರ್ಥಿಗಳು ಎಲ್ಲ ರೀತಿಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಮತ್ತು ಮಹಾವಿದ್ಯಾಲಯ ಮತ್ತು ಆಡಳಿತ ಮಂಡಳಿಯು ಆ ವಿದ್ಯಾರ್ಥಿಗಳ ಪ್ರಗತಿಗಾಗಿ ಯಾವಾಗಲೂ ಪೂರಕವಾಗಿರುತ್ತದೆ ಎಂದರು.
ಐಕ್ಯೂಎಸಿ ಸಂಯೋಜಕ ಪ್ರೊ.ಅಜ್ಜಪ್ಪ ಕಡೂರ, ಎನ್.ಸಿ.ಸಿ ಲೆಪ್ಟನೆಂಟ್ ಪ್ರೊ.ಅನೀಲಕುಮಾರ ಮುನ್ನೊಳ್ಳಿ, ಎನ್.ಸಿ.ಸಿ ಬಟಾಲಿನ್ ಸಿಬ್ಬಂದಿ ಸುಬೇಧಾರ ಹನಮಂತ ಜಮಾದಾರ, ಭೂತಾಲಿ ವೇದಿಕೆ ಮೇಲೆ ಇದ್ದರು. ಹಿಂದಿ ವಿಭಾಗದ ಮುಖ್ಯಸ್ಥ ಡಾ.ಮಂಜುನಾಥ ಬಾಳನಾಯ್ಕ ನಿರೂಪಿಸಿ, ವಂದಿಸಿದರು, ಎನ್.ಸಿ.ಸಿ ವಿದ್ಯಾರ್ಥಿಗಳು ಗಾಡ್ ಆಫ್ ಆರ್ನರ್ ಮಾಡಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 