ದೇಶದ ಮೂಲ ನಿವಾಸಿಗಳ ಸಂವಿಧಾನಬದ್ದ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ-ವೆಂಕಟೇಶಯ್ಯ

ದೇಶದ ಮೂಲ ನಿವಾಸಿಗಳ ಸಂವಿಧಾನಬದ್ದ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ ನಡೆಯುತ್ತಿದೆ-ವೆಂಕಟೇಶಯ್ಯ There is a plan to take away the constitutional right to vote of the country's indigenous people - V

         ಗದಗ-9 : ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ತಮ್ಮ ಕೈಗೊಂಬೆಯಾಗಿ ಉಪಯೋಗಿಸಿ ದೇಶದಲ್ಲಿ ಎಸ್‌.ಐ.ಆರ್ ಮೂಲಕ ವಿಶೇಷ ತೀವ್ರ ಪರಿಷ್ಕರಣೆ ನಡೆಸುತ್ತಿರುವ ಆಯೋಗವು ನಮ್ಮ ದೇಶದ ಮೂಲ ನಿವಾಸಿಗಳಾದ ದಲಿತ, ಹಿಂದುಳಿದ, ಅಲ್ಪಸಂಖ್ಯಾತರ ಹಾಗೂ ಮಹಿಳೆಯರ ಸಂವಿಧಾನ ಬದ್ದ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿದ್ದಾರೆ ಎಂದು ದಲಿತ ಸಂಘರ್ಸ ಸಮಿತಿಯ ಸಂಚಾಲಕರಾದ ವೆಂಕಟೇಶಯ್ಯ ಆಕ್ರೋಶ ವ್ಯಕ್ತ ಪಡಿಸಿದರು. ಅವರು ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ಎಸ್‌.ಐ.ಆರ್ ವಿರೋಧಿಸಿ 11 ರಂದು ಹಮ್ಮಿಕೊಂಡಿರುವ ಹೋರಾಟದ ಪೋಷ್ಟರ್‌ನ್ನು ಬಿಡುಗಡೆಗೊಳಿಸಿ ಮಾತನಾಡಿ ವಿಶೇಷ ಮತಪಟ್ಟಿ ಪರಿಷ್ಕರಣೆ ಹಿಂದೆ ಕೇಂದ್ರದ ಬಿಜೆಪಿ ಸರ್ಕಾರದ ಕುತಂತ್ರವಿದೆ.

         ಚುನಾವಣಾ ಆಯೋಗವನ್ನು ದುರಪಯೋಗ ಪಡಿಸಿಕೊಂಡು ಅರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿರಿಸಿ ಚುನಾವಣೆ ಗೆಲ್ಲಲು ಬಿಜೆಪಿ ಈ ಪರಿಷ್ಕರಣೆ ನಡೆಸುತ್ತಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಿಂದ ಮೈಕ್ರೋ ಅಬ್ಸರ್ವರಗಳು ಸ್ಥಳೀಯ ಸಿಬ್ಬಂದಿಗಳನ್ನು ಬದಿಗೊತ್ತಿ ಮನಬಂದಂತೆ ಮತದಾರರ ಪಟ್ಟಿಯಲ್ಲಿ ಹೆಸೆರಗಳನ್ನು ಅಳಿಸುತ್ತಿದ್ದಾರೆ ಎಂದು ಆರೋಪಿಸಿದರು, ಸ್ಲಂ ಸಮಿತಿ ಅಧ್ಯಕ್ಷರಾದ ಇಮ್ತಿಯಾಜ.ಆರ್‌.ಮಾನ್ವಿ ಮಾತನಾಡಿ ಕೇಂದ್ರ ಸರ್ಕಾರದ ಸೊಚನೆಯಂತೆ ಅವೈಜ್ಞಾನಿಕವಾಗಿ ಅತುರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ನಡೆಸುತ್ತಿರುವ ಚುನಾವಣಾ ಆಯೋಗವು ಮೂಲ ನಿವಾಸಿಗಳ ಲಕ್ಷಾಂತರ ಮತದಾರರ ಹಕ್ಕನ್ನು ಕಸಿದುಕೊಳ್ಳುತ್ತಿರುವುದು ನಾವು ಖಂಡಿಸುತ್ತೇವೆ.

         ಇದನ್ನು ವಿರೋಧಿಸಿ ಸ್ಲಂ ಜನಾಂದೋಲನ-ಕರ್ನಾಟಕ ರಾಜ್ಯ ಸಮಿತಿಯ ಕರೆಯ ಮೇರೆಗೆ ಇದೇ ದಿನಾಂಕ: 11-02-2026 ರಂದು ರಾಜ್ಯಾದಂತ ಏಕಕಾಲಕ್ಕೆ ಹೋರಾಟ ಹಮ್ಮಿಕೊಂಡಿದ್ದು ಮೂಲ ನಿವಾಸಿಗಳು ಎಲ್ಲರೂ ಭಾಗವಹಿಸಿ ಜನವಿರೋಧಿ ಕೇಂದ್ರ ಸರ್ಕಾರ  ಮತ್ತು ಚುನಾವಣಾ ಆಯೋಗಕ್ಕೆ ಎಚ್ಚರಿಕ್ಕೆ ನೀಡಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಮುಸ್ಲಿಂ ಸಮಾಜದ ಮುಖಂಡರಾದ ಬಾಬಾಜಾನ ಬಳಗಾನೂರ, ಮಹ್ಮದಯುಸುಫ ನಮಾಜಿ, ಗದಗ ಜಿಲ್ಲಾ ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಅಧ್ಯಕ್ಷರಾದ ಪರವೀನಬಾನು ಹವಾಲ್ದಾರ, ಮುಖಂಡರಾದ ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಶರಣಪ್ಪ ಸೂಡಿ, ವೆಂಕಟೇಶ ಬಿಂದಕಟ್ಟಿ, ಮೆಹಬೂಬಸಾಬ ಬಳ್ಳಾರಿ, ಸಲೀಂ ಹರಿಹರ, ಖಾಜಾಸಾಬ ಇಸ್ಮಾಯಿಲನವರ, ಶಂಕ್ರ​‍್ಪ ರೋಣದ, ಗೌಸಸಾಬ ಅಕ್ಕಿ, ಮಕ್ತುಮಸಾಬ ಮುಲ್ಲಾನವರ ಹಾಗೂ ಮುಂತಾದ ಪದಾಧಿಕಾರಿಗಳು ಉಪಸ್ಥಿತರಿದ್ದರು.