ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯವಾಗಿ ಪಿತೂರಿ ನಡೆಯುತ್ತಿದೆ: ಡಿ.ಕೆ.ಶಿವಕುಮಾರ್‌

There is a political conspiracy against Chief Minister Siddaramaiah: DK Shivakumar

ಬೆಳಗಾವಿ 18: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯವಾಗಿ ಪಿತೂರಿ ನಡೆಯುತ್ತಿದೆ. ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಮತ್ತು ಅವರ ಪತ್ನಿ ಭಾಗಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. 

ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಇ.ಡಿ ತನಿಖೆ ಮಾಡುತ್ತಿರುವ ವಿಚಾರವಾಗಿ ಅವರು ಮಾತನಾಡಿ, ಒಂದು ಪ್ರಕರಣದ ತನಿಖೆ ಸುಧೀರ್ಘವಾಗಿ ನಡೆಯುತ್ತದೆ. ಹೀಗಿರುವಾಗ, ಈ ಪ್ರಕರಣದಲ್ಲಿ ಅಕ್ರಮ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ನ್ಯಾಯಾಲಯ ವಿಚಾರಣೆ ಮಾಡಬೇಕೇ ಹೊರತು, ನಾವು–ನೀವು ಅಲ್ಲ. ಇ.ಡಿ ತನಿಖೆಯನ್ನು ನಾನು ಕಂಡಿದ್ದೇನೆ. ಇದರ ಕುರಿತಾಗಿ ಹೆಚ್ಚು ಮಾತನಾಡುವುದಿಲ್ಲ ಎಂದರು.