ಅನರ್ಹರನ್ನು ಬಚಾವ್ ಮಾಡಲು ಯಡಿಯೂರಪ್ಪ ಬಳಿ ಸಮಯವಿದೆ : ಎಚ್ ಡಿ ಕುಮಾರಸ್ವಾಮಿ ಲೇವಡಿ

ಬೆಂಗಳೂರು, ಸೆ 22  ರಾಜ್ಯದ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಬಗ್ಗೆ ದೆಹಲಿ ನಾಯಕರ ಜೊತೆ ಮಾತನಾಡಲು ಯಡಿಯೂರಪ್ಪ ಅವರಿಗೆ ಸಮಯವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.       

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಅನರ್ಹ ಶಾಸಕರ ಜೊತೆ ರಹಸ್ಯ ಸಭೆ ನಡೆಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿದ್ದು ಸಂತ್ರಸ್ತರಿಗೆ ಬದುಕು ಕಟ್ಟಿಕೊಡುವ ಬಗ್ಗೆಕೇಂದ್ರದ ಮೇಲೆ ಒತ್ತಡ ಹೇರಲು ಅವರ ಬಳಿ ಸಮಯಾವಕಾಶವೇ ಇಲ್ಲ ಎಂದು ಲೇವಡಿ ಮಾಡಿದ್ದಾರೆ.    

ಆದರೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಪ್ರಭಾವ ಬಳಸಿ ಪ್ರಜಾಪ್ರಭುತ್ವ ವಿರೋಧಿ ಆಪರೇಷನ್ ಕಮಲದ ಸಂತ್ರಸ್ತ ಅನರ್ಹರನ್ನು ಬಚಾವ್ ಮಾಡಿಸಲು ದೆಹಲಿಗೆ ತೆರಳಲು ಯಡಿಯೂರಪ್ಪನವರಿಗೆ ಸಾಕಷ್ಟು ಸಮಯವಿದೆ ಎಂದು ಕುಮರಸ್ವಾಮಿ ಟ್ವೀಟ್ ಮೂಲಕ ಯಡಿಯೂರಪ್ಪ ಅವರ ಕಾಲೆಳೆದಿದ್ದಾರೆ.