ಬೆಂಗಳೂರು, ಏ. 27, ಕೋವಿಡ್ - 19 ರಾಜ್ಯದಲ್ಲಿ ನಿಯಂತ್ರಣದಲ್ಲಿದ್ದು, ಲಾಕ್‌ಡೌನ್ ಮುಂದುವರಿಯುವ ಕುರಿತು ಸದ್ಯಕ್ಕೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಪ್ರಧಾನಿಗಳ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿಗಳ ಸಲಹೆ ಸೂಚನೆ ಆಧರಿಸಿ ಲಾಕ್‌ಡೌನ್ ಕುರಿತು ನಿರ್ಧಾರ ಮಾಡುತ್ತೇವೆ. ರಾಜ್ಯದಲ್ಲಿನ ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತರಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ ಎಂದರು. ಕೊರೋನಾ ಪರಿಸ್ಥಿತಿಯಿಂದ ಸಂತ್ರಸ್ತರಾದ ಜನರಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ. ರಾಜ್ಯವನ್ನು ಕೋವಿಡ್ ಮುಕ್ತ ಮಾಡಲು ಸರ್ಕಾರ ಪಣ ತೊಟ್ಟಿದೆ. ರಾಜ್ಯಾದ್ಯಂತ ವೈರಸ್ ನಿಯಂತ್ರಣಕ್ಕೆ ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಸಹಕಾರದಿಂದ ವೈರಸ್ ಮುಕ್ತಗೊಳಿಸುವಲ್ಲಿ ಯಶಸ್ವಿಯಾಗುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.