ಟೊಕಿಯೋ : ಭಾರಿ ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದರೆ, ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಡ್ಯಾಂಗಳಿಂದ ನೀರು ಹರಿ ಬಿಟ್ಟಿರುವುದರಿಂದ ನದಿ ಅಕ್ಕಪಕ್ಕದ ಕುಟುಂಬಗಳು ನಿರಾಶ್ರಿತವಾಗಿವೆ. 250ಕ್ಕೂ ಹೆಚ್ಚು ಕುಟುಂಬಂಗಳು ಮನೆಗಳನ್ನು ತೊರೆದು ಸುರಕ್ಷಿತ ಪ್ರದೇಶಗಳಿಗೆ ತೆರಳಿವೆ.
ಈ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪರಿಣಾಮ ಅಲ್ಲಿನ ಆಡಳಿತಾಧಿಕಾರಿಗಳು ಜನರನ್ನ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಿದ್ದಾರೆ. ಭಾರಿ ಮಳೆಯಿಂದ ರಸ್ತೆ ಸಂಚಾರ ಬಂದ್ ಆಗಿದೆ. ಕೆಲವೆಡೆ ಭೂ ಕುಸಿತ ಸಂಭವಿಸಬಹುದಾದ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ನೀಡಲಾಗಿದೆ.