ಕೊಪ್ಪಳದಲ್ಲಿ ಕರೋನಾ ವೈರಸ್ ಇಲ್ಲ: ಆತಂಕಬೇಡ, ಜಾಗ್ರತೆ ಇರಲಿ
ಕೊಪ್ಪಳ 07: ಹೊಸಳ್ಳಿ ಗ್ರಾಮವಲ್ಲದೇ, ಜಿಲ್ಲೆಯಲ್ಲಿ ಯಾವುದೇ ಕರೋನಾ ವೈರಸ್ ಪ್ರಕರಣಗಳು ಇದುವರೆಗೂ ಪತ್ತೆಯಾಗಿರುವುದಿಲ್ಲ, ಜನರು ಆತಂಕ, ಭಯ ಪಡದೆ ನಿರ್ಭಯವಾಗಿ ಇರಬೇಕೆಂದು ತಾಲ್ಲೂಕಾ ವೈದ್ಯಾಧಿಕಾರಿ ಡಾ. ರಾಮಾಂಜನೇಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸವರ್ೇಕ್ಷಣಾಧಿಕಾರಿಗಳ ಘಟಕ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಇಂದರಗಿ, ಗ್ರಾಮ ಪಂಚಾಯತ್ ಕಾಯರ್ಾಲಯ ಹೊಸಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಹೊಸಳ್ಳಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕರೋನಾ ವೈರಸ್ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹೊಸಳ್ಳಿ ಗ್ರಾಮಕ್ಕೆ ವಿದೇಶಿದಿಂದ ಬಂದ ಕುಟುಂಬದ ಸದಸ್ಯರಿಗೆ ಕರೋನಾ ವೈರಸ್ ಇರುವುದಿಲ್ಲ. ಈ ರೋಗವು ವಿದೇಶ ಮತ್ತು ಬೇರೆ ರಾಜ್ಯಗಳಿಂದ ಬರುವ ನಿರೀಕ್ಷೆಯಿರುವುದರಿಂದ, ಸೋಂಕಿತ ವ್ಯಕ್ತಿಯು ಕೆಮ್ಮಿದಾಗ, ಸೀನಿದಾಗ, ರೋಗಿಯ ಜೊತೆ ನಿಕಟ ಸಂಪರ್ಕವಿದ್ದಾಗ, ವ್ಯಕ್ತಿಯ ಜೊತೆ ಹಸ್ತಲಾಘವ ಮಾಡುವುದರಿಂದ, ಸೋಂಕಿತ ವ್ಯಕ್ತಿ ಬಳಸಿದ ವಸ್ತುಗಳನ್ನು ಬಳಸುವುದರಿಂದ, ಸುರಕ್ಷಿತವಲ್ಲದ ಕೈಗಳಿಂದ ಕಣ್ಣು, ಮೂಗು, ಬಾಯಿ ಮುಟ್ಟುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ ಆದ್ದರಿಂದ ಜನರು ಜಾಗೃತೆವಹಿಸಬೇಕು. ಜ್ವರ, ನೆಗಡಿ, ತಲೆನೋವು, ಕೆಮ್ಮು, ಉಸಿರಾಟದಲ್ಲಿ ತೊಂದರೆ, ಭೇದಿಯಾಗುವುದು, ಕರೋನಾ ವೈರಸ್ ರೋಗದ ಲಕ್ಷಣಗಳಾಗಿದ್ದು ಈ ಲಕ್ಷಣಗಳು ಕಾಣಿಸಿಕೊಂಡಲ್ಲಿ ರೋಗಿಯು ಸಮೀಪದ ಸರಕಾರಿ ಆಸ್ಪತ್ರೆಗೆ ಭೇಟಿನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ಸೋಂಕು ಪೀಡಿತರ ಸಂಪರ್ಕದಿಂದ ದೂರವಿರುವುದು, ಶಂಕಿತ ರೋಗಿಯು ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು ಮತ್ತು ಟ್ರಿಪಲ್ ಲಿಯರ್ ಮಾಸ್ಕ್ ಬಳಸುವುದು, ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು, ವಿಶೇಷವಾಗಿ ಆಗಾಗ್ಗೆ ಸಾಬೂನ್ನಿಂದ ಕೈ ತೊಳೆದುಕೊಳ್ಳುವುದು, ಕೆಮ್ಮುವಾಗ, ಸೀನುವಾಗ ಮಾಸ್ಕ್ ಅಥವಾ ಕೈ ವಸ್ತ್ರ ಉಪಯೋಗಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗಳದಿರುವುದು, ಉಸಿರಾಟ ತೊಂದರೆಯಾದಲ್ಲಿ ತಕ್ಷಣ ವೈದ್ಯರ ಸಲಹೆ ಪಡೆಯುದು, ಮಾಂಸ, ಮೊಟ್ಟೆ ಇತ್ಯಾದಿಗಳನ್ನು ಚನ್ನಾಗಿ ಬೇಯಿಸಿ ಉಪಯೋಗಿಸುವುದು, ಅಸುರಕ್ಷಿತವಲ್ಲದ ಕಾಡು ಪ್ರಾಣಿ ಅಥವಾ ಸಾಕು ಪ್ರಾಣಿಗಳನ್ನು ಮುಟ್ಟದಿರುವುದು ಇತ್ಯಾದಿ ಸುರಕ್ಷಿತ ಮುಂಜಾಗೃತ ಕ್ರಮಗಳನ್ನು ಜನರು ಅನುಸರಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಆಶಾ ಕಾರ್ಯಕತರ್ೆಯರು, ಆರೋಗ್ಯ ಸಹಾಯಕರು, ಕ್ಷೇತ್ರ ಶಿಕ್ಷಣ ಅಧಿಕಾರಿಕಾಗಳು ತಂಡಗಳನ್ನು ರಚಿಸಿಕೊಂಡು ವಾಡರ್್ಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕರೋನಾ ವೈರಸ್ ಬಗ್ಗೆ ಕರಪತ್ರ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ ಯಾರೂ ಭಯ, ಆತಂಕ ಪಡದೆ ಸಕರಾತ್ಮಕವಾಗಿ ಮಾಹಿತಿಗಳನ್ನು ಪಡೆದುಕೊಂಡು ಮುಂಜಾಗೃತ ಕ್ರಮಗಳನ್ನು ಅನುಸರಿಸಬೇಕು ಎಂದರು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 