ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ :ಸಂತೋಷ ಲಾಡ್
There is no drinking water problem in the district: Santosha Lad
ಹುಬ್ಬಳ್ಳಿ 28: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಕೆಡಿಪಿ ಸಭೆಯಲ್ಲಿ ಚರ್ಚಿಸಲಾಗಿದೆ. ಸುಮಾರು 18 ರಿಂದ 19 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಲಿದೆ. ಅಲ್ಲದೇ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು.
ಇಂದು ಕುಂದಗೋಳದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗುವುದಿಲ್ಲ. ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಕಾಲಿಕ ಮಳೆ ಆಗಿರುವ ಕುರಿತು ಸರ್ಕಾರಕ್ಕೆ ಮಾಹಿತಿ ಒದಗಿಸಲಾಗಿದೆ. ಮಳೆಯಿಂದ ಹಾನಿಯಾದವರಿಗೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಹೆಸರು ಬೆಳೆ ಖರೀದಿ ಸಮಸ್ಯೆಗಳ ಮಾಹಿತಿ ಬಂದಿದೆ. ಸಮಸ್ಯೆ ಬಗೆಹರಿಸುವ ಹಿನ್ನೆಲೆಯಲ್ಲಿ ಇಸಿಆರ್ ಸಮಿತಿ ರಚನೆ ಮಾಡಲಾಗಿದೆ. ಮುಂದಿನ 4-5 ದಿನಗಳಲ್ಲಿ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.
ಹುಬ್ಬಳ್ಳಿ ಮೇಲ್ಸೇತುವೆ ಕಾಮಗಾರಿ ವಿಳಂಬದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಕಾಮಗಾರಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮೇ ತಿಂಗಳಲ್ಲಿ ಕಾಮಗಾರಿ ಮುಕ್ತಾಯವಾಗಲಿದೆ. ಹುಬ್ಬಳ್ಳಿ ಧಾರವಾಡ ಎಲ್.ಆರ್.ಟಿ ಸಾರಿಗೆ ವ್ಯವಸ್ಥೆ ಜಾರಿಗೆ ತರಲು ಮೊದಲ ಹಂತದಲ್ಲಿ ಸುಮಾರು 6,500 ಕೋಟಿ ಪ್ರಸ್ತಾವನೆ ಬಂದಿತ್ತು. ಮುಂದಿನ ಒಂದು ತಿಂಗಳಲ್ಲಿ ಎರಡನೇ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಎಂ.ಆರ್. ಪಾಟೀಲ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಪ್ರಾಧಿಕಾರಿದ ಅಧ್ಯಕ್ಷ ಎಸ್.ಆರ್.ಪಾಟೀಲ, ಜಿಲ್ಲಾಧಿಕಾರಿ ಸ್ನೇಹಲ್ ಆರ್. ಇತರರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 