ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಇಲ್ಲ-ಜಿಲ್ಲಾಧಿಕಾರಿ ಡಾ. ಆನಂದ ಕೆ. ಸ್ಪಷ್ಟನೆ
There is no drinking water problem in the entire district - District Magistrate Dr. Anand K. clarifi
ಲೋಕದರ್ಶನ ವರದಿ
ವಿಜಯಪುರ 9: ಜಿಲ್ಲೆಯಲ್ಲಿ ವಿಪತ್ತು ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ. ಅದರಂತೆ, ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಲ್ಬಣಿಸಬಹುದಾದ 11 ತಾಲೂಕುಗಳ 38 ಗ್ರಾಮ ಪಂಚಾಯತಿ ವ್ಯಾಪ್ತಿಯ 65 ಗ್ರಾಮಗಳನ್ನು ಗುರುತಿಸಲಾಗಿದೆ. ಅವುಗಳಲ್ಲಿ ನೀರಿನ ಯಾವುದೇ ಸಮಸ್ಯೆ ಉಂಟಾಗದಂತೆ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಏ.9ರ ಇದೇ ದಿನ ಆಲಮಟ್ಟಿ ಜಲಾಶಯದಲ್ಲಿ ಕಳೆದ ವರ್ಷ 29.712 ಟಿಎಂಸಿ ನೀರಿತ್ತು, ಪ್ರಸ್ತುತ 34.895 ಟಿಎಂಸಿ ಅಂದರೆ ಅಂದಾಜು 5.183 ಟಿಎಂಸಿ ನೀರು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ ತಿಳಿಸಿದರು. ನಾರಾಯಣಪುರ ಜಲಾಶಯದಲ್ಲಿ ಕಳೆದ ವರ್ಷ 19.595 ಟಿಎಂಸಿ, ಪ್ರಸ್ತುತ 21.269 ಟಿಎಂಸಿ ಅಂದರೆ ಅಂದಾಜು 1.674 ಟಿಎಂಸಿ ನೀರು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಿದೆ. ಜಿಲ್ಲೆಯ ಬೇಡಿಕೆಯಂತೆ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಇಂಡಿ ತಾಲೂಕಿನ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಲುವಾಗಿ ಇಂಡಿ ಶಾಖಾ ಕಾಲುವೆಯಿಂದ 1.00 ಟಿಎಂಸಿ ನೀರನ್ನು ಏ. 11 ರಿಂದ ಏ. 23 ರವರೆಗೆ (12 ದಿನಗಳು) ನಿತ್ಯ ಒಂದು ಸಾವಿರ ಕ್ಯೂಸೆಕ್ ನಂತೆ ಹರಿಸಲು ಆದೇಶಿಸಲಾಗಿದೆ ಎಂದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 