ರಾಜ್ಯದಲ್ಲಿ ಆರ್ಥಿಕ ಸಂಕಷ್ಟವಿಲ್ಲ: ಸಿಎಂ
There is no financial crisis in the state: CM
ಹುಬ್ಬಳ್ಳಿ 08 : ರಾಜ್ಯದಲ್ಲಿ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ಪ್ರತಿಪಕ್ಷ ಬಿಜೆಪಿ ಸುಳ್ಳು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಭಾನುವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈವರೆಗೆ ಸರ್ಕಾರ ಘೋಷಿಸಿರುವ ಯಾವುದೇ ಯೋಜನೆಗಳು ನಿಂತಿಲ್ಲ. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿವೆ. ಒಂದೆಡೆ ಬಿಜೆಪಿ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದರೆ, ಇನ್ನೊಂದೆಡೆ ಬೇರೆ ರಾಜ್ಯಗಳಲ್ಲಿ ತಾವೇ ಗ್ಯಾರಂಟಿ ಯೋಜನೆಗಳನ್ನು ಘೋಷಿಸುತ್ತಿದೆ ಎಂದು ಲೇವಡಿ ಮಾಡಿದರು.
ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ಆರಂಭವಾಗಲಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗುವುದು. ಹಾಗೆಯೇ, ಸರ್ಕಾರ ಅಧಿವೇಶನದಲ್ಲಿ ಪ್ರತಿಪಕ್ಷವನ್ನು ಎದುರಿಸಲು ಸರ್ವಸನ್ನದ್ಧವಾಗಿದೆ ಎಂದು ಹೇಳಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 