ಚೀನಾದ ಹುಬೈ ಪ್ರಾಂತ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಿಲ್ಲ

ವುಹಾನ್, ಏ 11, ಚೀನಾದ ಹುಬೈ ಪ್ರಾಂತ್ಯದಲ್ಲಿ ಶುಕ್ರವಾರದಂದು ಯಾವುದೇ ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿಲ್ಲ ಎಂದು ಅಲ್ಲಿನ ಆರೋಗ್ಯ ಪ್ರಾಧಿಕಾರ ಶನಿವಾರ ತಿಳಿಸಿದೆ.
ಶುಕ್ರವಾರ ಈ ಪ್ರಾಂತ್ಯದಲ್ಲಿ ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದು ಈ ಪೈಕಿ ಇಬ್ಬರು ವುಹಾನ್ ಗೆ ಸೇರಿದವರಾಗಿದ್ದಾರೆ.