ಸಮುದ್ರವಿಲ್ಲದೇ ಜೀವನವಿಲ್ಲ, ಸಮುದ್ರವನ್ನು ಉಳಿಸಿ : ಎಸ್ಪಿ ದೀಪನ್
There is no life without the sea, save the sea: SP Deepan
ಕಾರವಾರ 20: ಸಮುದ್ರ ಮಾನವ ಜೀವನದ ಅವಿಭಾಜ್ಯ ಅಂಗ, ಸಮುದ್ರವಿಲ್ಲದೆ ಜೀವನವಿಲ್ಲ, ಜಗತ್ತಿನಲ್ಲಿ ಜೀವಿಗಳ ಉಗಮ ಆರಂಭವಾಗಿದ್ದೇ ಸಮುದ್ರದಿಂದ. ಜಗತ್ತಿನ ಹವಾಮಾನದಲ್ಲಿ ನಡೆಯುವ ಪ್ರತಿಯೊಂದು ಬದಲಾವಣೆಗೂ ಸಮುದ್ರ ಪ್ರಮುಖ ಕಾರಣವಾಗಿದ್ದು, ಅದನ್ನು ಉಳಿಸಿ, ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್ ಹೇಳಿದರು.
ಅವರು ಶನಿವಾರ, ರವೀಂದ್ರನಾಥ್ ಠಾಗೂರ್ ಬೀಚ್ ಬಳಿಯ ತಿಮ್ಮಕ್ಕ ಟ್ರೀ ಪಾರ್ಕ್‌ನಲ್ಲಿ, ಪ್ರಾದೇಶಿಕ ನಿರ್ದೇಶಕರು (ಪರಿಸರ), ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಕಾರವಾರ ಮತ್ತು ಕಾರವಾರ ಅರಣ್ಯ ವಿಭಾಗದ ವತಿಯಿಂದ ಸೇವಾ ಪರ್ವ 2025 ಅಂತಾರಾಷ್ಟ್ರೀಯ ಕಡಲತೀರ ಸ್ವಚ್ಛತಾ ದಿನದ ಅಂಗವಾಗಿ ನಡೆದ ಬೀಚ್ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಗತ್ತಿನಲ್ಲಿ ಸಂಭವಿಸುವ ಪ್ರತಿಯೊಂದು ಹವಾಮಾನ ಬದಲಾವಣೆ, ವೈಪರೀತ್ಯಗಳು, ಮಳೆ ಇದೆಲ್ಲದಕ್ಕೂ ಸಮುದ್ರವೇ ಮುಖ್ಯ ಕಾರಣವಾಗಿದ್ದು, ಸಮುದ್ರ ಸ್ವಚ್ಛವಾಗಿದ್ದರೆ ಜಗತ್ತಿನಲ್ಲಿ ಉತ್ತಮ ಪರಿಸರ ನಿರ್ಮಾಣವಾಗಲಿದೆ ಇದೇ ಕಾರಣದಿಂದ ಸಿ.ಆರ್.ಝಡ್ ನಿಯಮಗಳನ್ನು ರೂಪಿಸಿ ಕಡಲತೀರವನ್ನು ರಕ್ಷಿಸುವ ಕೆಲಸ ನಡೆಯುತ್ತಿದೆ, ಸಮುದ್ರತೀರ ಚೆನ್ನಾಗಿದ್ದರೆ ನಾವೆಲ್ಲರೂ ಚೆನ್ನಾಗಿರುತ್ತೇವೆ ಆದ್ದರಿಂದ ನಾವೆಲ್ಲರೂ ಸೇರಿ ಇದನ್ನು ರಕ್ಷಿಸೋಣ ಎಂದರು.
ಸಮುದ್ರವು ಪ್ರಕೃತಿ ಮಾನವನಿಗೆ ನೀಡಿರುವ ಸುಂದರವಾದ ವರವಾಗಿದ್ದು, ಇದನ್ನು ನಿರ್ಲಕ್ಷಿಸದೇ ಕಾಪಾಡುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ. ನಾವು ಸಮುದ್ರವನ್ನು ಕಲುಷಿತಗೊಳಿಸಿದರೆ ಅದರ ಹಲವು ಪಟ್ಟು ದುಷ್ಪರಿಣಾಮಗಳನ್ನು ನಾವೇ ಎದುರಿಸಬೇಕಾಗುತ್ತದೆ. ಕಡಲತೀರದ ಸ್ವಚ್ಛತೆಯ ಕಾರ್ಯಕ್ರಮ ಒಂದು ದಿನಕ್ಕೆ ಮಾತ್ರ ಸೀಮಿತವಾಗಿದೇ ವರ್ಷಪೂರ್ತಿ ನಿರಂತರವಾಗಿ ನಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರವಾರ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಮಾತನಾಡಿ, ಇಡೀ ಜಗತ್ತಿನಲ್ಲಿ ಎಲ್ಲಾ ಜೀವಿ ಸಂಕುಲಕ್ಕೆ ಅತೀ ಹೆಚ್ಚಿನ ಆಮ್ಲಜನಕ ಸಮುದ್ರದಿಂದ ದೊರೆಯುತ್ತಿದೆ. ಆದರೆ ಪ್ರತಿ ನಿಮಿಷಕ್ಕೆ 1 ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಮುದ್ರಕ್ಕೆ ಸೇರುತ್ತಿದೆ. ಒಂದು ವರದಿಯ ಪ್ರಕಾರ ಪ್ರತೀ ವರ್ಷ ಸಮುದ್ರವನ್ನು ಅವಲಂಬಿಸಿರುವ 10 ಲಕ್ಷ ಪಕ್ಷಿಗಳು ಮತ್ತು 1 ಲಕ್ಷ ಸಮುದ್ರ ಜೀವಿಗಳು ಮಾಲಿನ್ಯದಿಂದ ಸಾವನ್ನಪ್ಪುತ್ತಿದ್ದು ಅವುಗಳ ಮರಣೋತ್ತರ ಪರೀಕ್ಷೆಯಲ್ಲಿ ಪ್ಲಾಸ್ಟಿಕ್ ಕಂಡು ಬರುತ್ತಿದೆ. ಏಕ ಬಳಕೆಯ ಪ್ಲಾಸ್ಟಿಕ್‌ನ್ನು ಸಂಪೂರ್ಣ ನಿಷೇಧಿಸುವುದರ ಜೊತೆಗೆ ಪ್ಲಾಸ್ಟಿಕ್ ಬಳಕೆಯ ಕಡಿಮೆ ಮಾಡಬೇಕು, ಈ ನಿಟ್ಟಿನಲ್ಲಿ ಸಮುದ್ರ ಮತ್ತು ಕಡಲತೀರವನ್ನು ಮಾಲಿನ್ಯದಿಂದ ರಕ್ಷಿಸುವಲ್ಲಿ ಯುವ ಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದೀಲೀಷ್ ಶಶಿ, ಸೇವಾ ಪರ್ವ 2025 ಕಾರ್ಯಕ್ರಮದ ನೋಡಲ್ ಅಧಿಕಾರಿ ರಾಜೇಶ್ ಕುಮಾರ್, ಸಾಮಾಜಿಕ ಅರಣ್ಯ ವಿಭಾಗದ ಡಿ.ಎಫ್.ಓ ಮಂಜುನಾಥ್ ನಾವಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಆಶಾ ಉಪಸ್ಥಿತರಿದ್ದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಸಿ.ಆರ್.ಝಡ್ ನ ಪ್ರಾದೇಶಿಕ ನಿರ್ದೇಶಕ ಪ್ರವೀಣ್ ಕುಮಾರ್ ಬಸ್ರೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ವಲಯ ಅರಣ್ಯಾಧಿಕಾರಿ ಕಿರಣ್ ಮಾನವಚಾರಿ ಸ್ವಾಗತಿಸಿದರು, ವಲಯ ಅರಣ್ಯಾಧಿಕಾರಿ ಗಜಾನನ ನಾಯ್ಕ ವಂದಿಸಿದರು.
ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರಿಂದ ನಡೆದ ಕಡಲ ತೀರದ ಸ್ವಚ್ಛತಾ ಕಾರ್ಯದಲ್ಲಿ 1,500 ಕೆ.ಜಿ ಗೂ ಅಧಿಕ ತ್ಯಾಜ್ಯವನ್ನು ಸಂಗ್ರಹ ಮಾಡಲಾಯಿತು. ಅಂತಾರಾಷ್ಟ್ರೀಯ ಬೀಚ್ ಸ್ವಚ್ಛತಾ ದಿನದ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮತ್ತು ಕಡಲ ತೀರ ರಕ್ಷಣೆ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 