ಬೆಂಗಳೂರಿನ ಇತರ ಪ್ರದೇಶಗಳನ್ನು ಸೀಲ್ ಡೌನ್ ಮಾಡುವ ಯೋಜನೆಯಿಲ್ಲ; ಬಿಬಿಎಂಪಿ ಆಯುಕ್ತ

ಬೆಂಗಳೂರು, ಏ 11,ಬೆಂಗಳೂರಿನ ಎರಡು ವಾರ್ಡ್ ಗಳನ್ನು ಹೊರತುಪಡಿಸಿ ಇತರ ಪ್ರದೇಶಗಳನ್ನು ಸೀಲ್ ಡೌನ್ ಮಾಡುವ ಯಾವುದೇ ಯೋಜನೆಯಿಲ್ಲ. ಜನರು ಆತಂಕಪಡುವ ಅಗತ್ಯವಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸ್ಪಷ್ಟಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ , ಕೋವಿಡ್-19 ಪ್ರಕರಣಗಳು ಹೆಚ್ಚಿದ್ದರಿಂದ ಶುಕ್ರವಾರ ಪಾದರಾಯಪುರ ಮತ್ತು ಬಾಪೂಜಿನಗರ ವಾರ್ಡ್ ಗಳನ್ನು ಸೀಲ್ ಡೌನ್ ಮಾಡಲಾಗಿದೆ. ಆದರೆ, ಅದನ್ನು ಉಳಿದ ಪ್ರದೇಶಗಳಿಗೆ ವಿಸ್ತರಿಸುವ ಯೋಜನೆಯಿಲ್ಲ. ಜನರು ವದಂತಿಗಳಿಗೆ ಕಿವಿಗೊಟ್ಟು ಭೀತಿಗೊಳಗಾಗಬಾರದು ಎಂದು ಸ್ಪಷ್ಟಪಡಿಸಿದ್ದಾರೆ.  ಬೆಂಗಳೂರು ನಗರದಲ್ಲಿ ಪೊಲೀಸರು ಕಠಿಣವಾಗಿ ಲಾಕ್ ಡೌನ್ ಜಾರಿಗೊಳಿಸುತ್ತಿದ್ದಾರೆ. ಕೊಡಿಗೆಹಳ್ಳಿ, ವಿದ್ಯಾರಣ್ಯಪುರ ಮತ್ತು ಹೊರಮಾವಿನಲ್ಲಿ ಜನರು ವಾಹನಗಳಲ್ಲಿ ಸಂಚರಿಸುವುದನ್ನು ತಡೆಯಲು ಬ್ಯಾರಿಕೇಡ್ ಗಳನ್ನು ಹಾಕಲಾಗಿದೆ ಎಂದು ವಿವರಿಸಿದ್ದಾರೆ.