ಬಾಣಂತಿಯರು ನವಜಾತ ಶಿಶುಗಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ: ಸಚಿವೆ ಹೆಬ್ಬಾಳಕರ

There is no question of concealment cases of newborn and nursing mothers deaths: Minister Hebbalkar

ಬೆಳಗಾವಿ 09: ಜಿಲ್ಲಾಸ್ಪತ್ರೆ ಹಾಗೂ ಜಿಲ್ಲೆಯಲ್ಲಿ ಸಂಭವಿಸಿರುವ ಬಾಣಂತಿಯರು, ನವಜಾತ ಶಿಶುಗಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

ಬೆಳಗಾವಿಯಲ್ಲಿ ಸೋಮವಾರ ಮಾತನಾಡಿದ ಅವರು, ಪ್ರಕರಣ ಕುರಿತು ಈಗಾಗಲೇ ನಾನು ಅಧಿಕಾರಿಗಳ ಜೊತೆ ಮಾತನಾಡಿರುವೆ. ಎಲ್ಲವನ್ನೂ ಕೂಡ ಚರ್ಚೆ ಮಾಡಿದ್ದೇನೆ. ಯಾವ ಕಾರಣಕ್ಕೆ ಸಾವಿನ ಪ್ರಕರಣಗಳು ಸಂಭವಿಸಿವೆ, ಸಾವು ತಡೆಯಲು ಯಾವ ಕ್ರಮ ಕೈಗೊಳ್ಳಬೇಕು. ಏನೆಲ್ಲಾ ಮಾಡಬೇಕು ಅದನ್ನು ಮಾಡುತ್ತಿದ್ದೇವೆ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ 54 ಲಕ್ಷಕ್ಕೂ‌ ಹೆಚ್ಚು ಜನಸಂಖ್ಯೆ ಇದೆ. ಹೀಗಾಗಿ ಸಾವಿನ ಅಂಕಿ ಅಂಶ ಹೆಚ್ಚಾಗಿ ಕಾಣುತ್ತಿದೆ. ಉತ್ತರಕನ್ನಡವೂ ಸೇರಿದಂತೆ ಅನೇಕ ಕಡೆಗಳಿಂದ ಆಸ್ಪತ್ರೆಗೆ ಬೆಳಗಾವಿಗೆ ಬರುತ್ತಾರೆ ಎಂದು ತಿಳಿಸಿದರು.

ಬಾಣಂತಿರು, ಹಸಿಗೂಸುಗಳ ಸಾವಿಗೆ ಬಹಳಷ್ಟು ಕಾರಣಗಳಿವೆ.  ಬಳ್ಳಾರಿ ಪ್ರಕರಣಗಳಿಗೂ, ಬ್ರಿಮ್ಸ್ ಗೂ ಸಂಬಂಧ ಇಲ್ಲ. ಕಬ್ಬಿನಾಂಶ ಕೊರತೆ, ಪ್ರೀ ಮೆಚ್ಯುರ್‌ ಬೇಬಿ ಹೀಗೆ ಅನೇಕ ಕಾರಣಗಳಿವೆ. ಒಂದು ಲಕ್ಷ ಮಕ್ಕಳು ಹುಟ್ಟಿದರೆ 28 ಮಕ್ಕಳು ಅದರಲ್ಲಿ ತೀರಿಕೊಳ್ಳುತ್ತಿದ್ದಾರೆ. ಇಡೀ ದೇಶಕ್ಕೆ 6ನೇ ಅತ್ಯುತ್ತಮ ಆಸ್ಪತ್ರೆ ಎಂದು ಬಿಮ್ಸ್‌ ಪಾತ್ರವಾಗಿದೆ. ಬಾಣಂತಿಯರು, ಹಸಿಗೂಸುಗಳ ಸಾವಿಗೆ ಇಂಥದ್ದೇ ಕಾರಣ ಎಂದು ಈ ಹಂತದಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.