ಬೆಂಗಳೂರು 20: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಅವಾಚ್ಯ ಶಬ್ದ ಬಳಸಿರುವ ಆರೋಪದ ಸುತ್ತಲಿನ ವಿವಾದದಲ್ಲಿ ಮಹತ್ವದ ತಿರುವು ಎಂಬಂತೆ ಯಾವುದೇ ಅವಾಚ್ಯ ಶಬ್ದಗಳನ್ನು ಬಳಸಿರುವುದಕ್ಕೆ ದಾಖಲೆ ಇಲ್ಲ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಅವರು ಸಿ.ಟಿ.ರವಿ ಅವರು ಬಳಸಿದ್ದಾರೆ ಎನ್ನಲಾದ ಪದ ಪರಿಷತ್ತಿನಲ್ಲಿ ದಾಖಲಾಗಿಲ್ಲ, ಸಿ.ಟಿ.ರವಿ ಮತ್ತು ಸಚಿವೆ ಲಕ್ಷ್ಮಿ ಇಬ್ಬರೂ ದೂರು ನೀಡಿದ್ದು, ನಾನು ಅವರೊಂದಿಗೆ ಮಾತನಾಡಿದ್ದೇನೆ, ನಂತರ ಈ ಬೆಳವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ದೂರು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.