ಕಲಬುರಗಿ, ಫೆ.8,ರಾಜ್ಯದ 13 ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಪ್ರಾಧಾನ್ಯತೆ ಸಿಕ್ಕಿಲ್ಲ. ಪ್ರಾದೇಶಿಕ ಮತ್ತು ಸಾಮಾಜಿಕ ನ್ಯಾಯವೂ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.ಇಲ್ಲಿನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪಗೆ ಬಿಜೆಪಿ ವರಿಷ್ಠರು ಯಾವುದೇ ಅಧಿಕಾರ ನೀಡಿಲ್ಲ, ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರಿಗೆ ಸ್ವಾತಂತ್ರ್ಯ ನೀಡಿಲ್ಲ. ಖಾತೆ ಹಂಚಿಕೆಯೂ ಮಾಡದಷ್ಟು ಇಕ್ಕಟ್ಟಿನ ಸ್ಥಿತಿಯಲ್ಲಿ ಯಡಿಯೂರಪ್ಪ ಇದ್ದಾರೆ. ಇದರಿಂದ ಬಿಜೆಪಿಯಲ್ಲಿ ಅಸಮಾಧಾನ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದರು.ದೆಹಲಿ ಚುನಾವಣೆಯಿಂದಾಗಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಳಂಬವಾಗಿದ್ದು, ಸದ್ಯದಲ್ಲಿಯೇ ಪ್ರಕ್ರಿಯೆ ಮುಂದುವರೆಯಲಿದೆ ಎಂದರು.ಬಡ್ತಿ ಮೀಸಲಾತಿ ವಿಧೇಯಕ ಜಾರಿ ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದ್ದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ ಎಲ್ಲಿಯೂ ನಮ್ಮ ಕಾನೂನು ರದ್ದುಪಡಿಸಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.