ನರೇಗಾ ಯೋಜನೆಯಡಿ ತಡೆಗೋಡೆ ನಿರ್ಮಾಣಕ್ಕೆ ನಿರ್ಬಂಧವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ
There is no restriction on construction of barrier wall under NAREGA scheme: Minister Priyank Kharge
ಬೆಳಗಾವಿ ಸುವರ್ಣ ವಿಧಾನಸೌಧ ಡಿ.10: -ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗಖಾತ್ರಿ (ನರೇಗಾ) ಯೋಜನೆಯಡಿ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಯಾವುದೇ ನಿಬಂರ್ಧ ಇರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಅವರು ಮಾತನಾಡಿದರು.ಚಿಕ್ಕಮಗಳೂರು ಶಾಸಕ ಹೆಚ್.ಡಿ. ತಮ್ಮಯ್ಯ ಅವರು, ನರೇಗಾ ಯೋಜನೆಯಡಿ ಕ್ರಿಯಾ ಯೋಜನೆಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಅವಕಾಶವಿಲ್ಲ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದು, ಈ ಕುರಿತಂತೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಕೋರಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಉತ್ತರಿಸಿ, ನರೇಗಾ ಯೋಜನೆಯಡಿ ಅನುಮತಿಸಿದ ಕಾಮಗಾರಿಗಳಲ್ಲಿ ಸಮುದಾಯ ಆಧಾರಿತ ಉದ್ದೇಶಕ್ಕಾಗಿ ತಡೆಗೋಡೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಯಾವುದೇ ನಿರ್ಬಂಧ ವಿಧಿಸಿಲ್ಲ. ಈ ರೀತಿಯ ಕಾಮಗಾರಿಗಳನ್ನು ನಿಯಮಾನುಸಾರ ಗ್ರಾಮ ಪಂಚಾಯತಿಯ ಕ್ರಿಯಾ ಯೋಜನೆಯಲ್ಲಿ ಅಳವಡಿಸಿಕೊಂಡು ಅನುಷ್ಠಾನಗೊಳಿಸಬಹುದಾಗಿದೆ. ಒಂದು ವೇಳೆ ಸ್ಥಳೀಯ ಅಧಿಕಾರಿಗಳು ಆ ರೀತಿ ತಪ್ಪು ಮಾಹಿತಿ ನೀಡಿದ್ದರೆ, ಅದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು. ನರೇಗಾದಡಿ ಸಾಮಗ್ರಿ ವೆಚ್ಚಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಅನುದಾನ ಬಂದಿಲ್ಲ, ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಸಲ್ಲಿಸಲಾಗಿದೆ.
ಅದೇ ರೀತಿ 15 ನೇ ಹಣಕಾಸು ಆಯೋಗದಲ್ಲಿಯೂ ರಾಜ್ಯಕ್ಕೆ ಸುಮಾರು 2,500 ಕೋಟಿ ರೂ. ಅನುದಾನ ಬರಬೇಕಿದೆ, ಈ ಕುರಿತೂ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು. ಅನುದಾನ ಬಂದ ಬಳಿಕ ಗ್ರಾಮ ಪಂಚಾಯತಿಗಳಿಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 