ನೆರೆ ನಿರ್ವಹಣೆಗೆ ಹಣಕಾಸಿನ ಕೊರತೆ ಇಲ್ಲ: ಆರ್ ಅಶೋಕ್
ಮಂಡ್ಯ, ಅ 4: ನೆರೆ ಪರಿಹಾರಕ್ಕೆ ಅನುದಾನ ನೀಡಲು ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೊ ಗೊತ್ತಿಲ್ಲ. ಆದರೆ, ನನ್ನ ಪ್ರಕಾರ ನೆರೆ ನಿರ್ವಹಣೆಗೆ ಹಣಕಾಸಿನ ಕೊರತೆ ಇಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ನಿರ್ವಹಣೆ ಕಂದಾಯ ಇಲಾಖೆಯ ನಿರ್ವಹಣೆಯಲ್ಲೇ ಬರುತ್ತದೆ. ನನ್ನ ಪ್ರಕಾರ ನೆರೆ ನಿರ್ವಹಣೆಗೆ ಹಣಕಾಸಿನ ಕೊರತೆ ಇಲ್ಲ. ಈಗಾಗಲೇ ಹಣ ಬಿಡುಗಡೆ ಮಾಡಲಾಗಿದೆ ಎಂದರು.
ರಾಜ್ಯ ಸರ್ಕಾರದ ನೆರೆ ಪರಿಹಾರ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ. ಅದರ ಬದಲಾಗಿ ಕೆಲವು ಬದಲಾವಣೆ ಬಯಸಿದ್ದು, ರಾಜ್ಯ ಸರ್ಕಾರದ ವರದಿ ಮತ್ತು ಕೇಂದ್ರ ಸರ್ಕಾರದ ವರದಿಗಳಲ್ಲಿ ಸಾಮ್ಯತೆ ಇದೆ ಎಂದು ತಿಳಿಸಿದರು.
ನಮ್ಮ ರಾಜ್ಯಕ್ಕೆ ಪರಿಹಾರ ನೀಡಿದರೆ ಬೇರೆ ರಾಜ್ಯಗಳು ಕೇಳುತ್ತಾರೆ. ಬೇರೆ ರಾಜ್ಯಗಳಲ್ಲೂ ನೆರೆ ಉಂಟಾಗಿರುವುದರಿಂದ ಎಲ್ಲಾ ರಾಜ್ಯಗಳಿಗೂ ಒಟ್ಟಿಗೆ ಅನುದಾನ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದಂತೆ ಕಾಣುತ್ತದೆ. ಮೂನರ್ಾಲ್ಕು ದಿನಗಳಲ್ಲಿ ನೆರೆ ಪರಿಹಾರ ನೀಡುವ ನಿರೀಕ್ಷೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 