ಬೆಂಗಳೂರು 09: ಕರ್ನಾಟಕದಲ್ಲಿ ನಕ್ಸಲಿಸಂ 'ಹೆಚ್ಚು ಕಡಿಮೆ' ಅಂತ್ಯಗೊಂಡಿದೆ. ಮುಖ್ಯಮಂತ್ರಿ ಕಚೇರಿಯಲ್ಲಿ ಮಾವೋವಾದಿಗಳು ಶರಣಾಗುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಅವರು ಗುರುವಾರ ಹೇಳಿದ್ದಾರೆ.
ಬಂದೂಕಿನ ಮೊರೆತ ಕೇಳಿಸಿದ ನಕ್ಸಲರನ್ನು ಕ್ಷಮಿಸಿ ಅವರನ್ನು ನಗರ ನಕ್ಸಲರನ್ನಾಗಿಸುತ್ತಿದೆ. ಕಾಡುಗಳಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಮಾವೋವಾದಿಗಳನ್ನು ನಗರ ನಕ್ಸಲರನ್ನಾಗಿಸುವ ಪ್ರಯತ್ನ ಇದಾಗಿದೆ. ಹಲವು ವರ್ಷಗಳಿಂದ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್) ನಕ್ಸಲರ ವಿರುದ್ಧ ಹಗಲಿರುಳು ಕಾರ್ಯಾಚರಣೆ ನಡೆಸಿದ್ದು, ಈ ಬೆಳವಣಿಗೆ ಅವರ ನೈತಿಕ ಸ್ಥೈರ್ಯವನ್ನು ಕುಗ್ಗಿಸುತ್ತದೆ ಎಂದು ಎಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ವಿ ಸುನೀಲ್ ಕುಮಾರ್ ಟೀಕಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಅವರು, ಯಾರೊಬ್ಬರೂ ನಕ್ಸಲ್ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಾರದು ಎಂಬ ಸಂದೇಶವನ್ನು ಸಮಾಜಕ್ಕೆ ರವಾನಿಸಬೇಕು. ನಕ್ಸಲರು ಮುಖ್ಯಮಂತ್ರಿಗಳ ಮುಂದೆ ಶರಣಾದಾಗ ಅದು ರಾಜ್ಯದ ಎಲ್ಲರಿಗೂ ಗೊತ್ತಾಗುತ್ತದೆ. ನಕ್ಸಲಿಸಂನಲ್ಲಿ ನಂಬಿಕೆ ಇರುವವರು ಮರುಚಿಂತನೆ ಮಾಡಿಕೊಳ್ಳಬಹುದು... ನಕ್ಸಲರ ಪರಿವರ್ತನೆಗೆ ಸರ್ಕಾರ ಅವಕಾಶ ಕಲ್ಪಿಸಿದೆ. ಅದರಲ್ಲಿ ತಪ್ಪೇನು? ಎಂದು ಪ್ರಶ್ನಿಸಿದರು.
ನಕ್ಸಲ್ ಚಟುವಟಿಕೆಗೆ ನಮ್ಮಲ್ಲಿ ಅವಕಾಶವಿಲ್ಲ ಎಂಬ ಸಂದೇಶವನ್ನು ಸಮಾಜಕ್ಕೆ ನೀಡಲು ಬಯಸಿದ್ದೇವೆ. ಮುಖ್ಯಮಂತ್ರಿ ಮುಂದೆ ನಕ್ಸಲರು ಶರಣಾದಾಗ, ಇಡೀ ರಾಜ್ಯ ಜಾಗೃತಗೊಳ್ಳುತ್ತದೆ ಮತ್ತು ಪ್ರತಿಕ್ರಿಯಿಸಿದರು.