ಪ್ರಕೃತಿ ವಿಕೋಪದಲ್ಲಿ ಜೀವ ಹಾನಿಯಾಗುವಂತಿಲ್ಲ ತುರ್ತು ಸಂದರ್ಭದಲ್ಲಿ ಅಧಿಕಾರಿಗಳು ಕೇಂದ್ರ ಸ್ಥಾನಬೇಕು: ಡಾ. ಆನಂದ ಕೆ.
There should be no loss of life in natural disasters, officials should be at the center of the emerg
ಲೋಕದರ್ಶನ ವರದಿ
ವಿಜಯಪುರ 22: ಮುಂಗಾರು ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದ್ದು, ಮಳೆಗಾಲದಲ್ಲಿ ಪ್ರಕೃತಿ ವಿಕೋಪ, ಪ್ರವಾಹದಲ್ಲಿ ಜೀವ ಹಾನಿಯಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಅಧಿಕಾರಿಗಳು ಮೊದಲ ಆದ್ಯತೆ ನೀಡುವುದರೊಂದಿಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಶುಕ್ರವಾರ 2026-27 ನೇ ಸಾಲಿನ ಮುಂಗಾರು ಮಳೆ ಅವಧಿಯ ಪೂರ್ವಸಿದ್ಧತೆ ಕುರಿತ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತುರ್ತು ಪರಿಸ್ಥಿತಿಯ ನಿರ್ವಹಣೆಗಾಗಿ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರಸ್ಥಾನದಲ್ಲೇ ಇರಬೇಕು ಎಂದು ಕಟ್ಟುನಿಟ್ಟಾಗಿ ಸೂಚನೆ ನೀಡಿದರು.
ಹೆಲ್ಪ್ ಲೈನ್ ಸ್ಥಾಪಿಸಿ: ತಾಲೂಕಾ ಹಂತದಲ್ಲಿ ಸಂಭವಿಸುವ ಪ್ರಕೃತಿ ವಿಕೋಪ ಸಂದರ್ಭದಲ್ಲಿ ತಹಶೀಲ್ದಾರರು ಸ್ಥಳದಲ್ಲಿರಬೇಕು. ಅತ್ಯಂತ ಜವಾಬ್ದಾರಿಯಿಂದ ಹಾಗೂ ಅಚ್ಚುಕಟ್ಟಾಗಿ ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಪರಿಹರಿಸಬೇಕು ಎಂದರು.
ಎಲ್ಲ ತಾಲೂಕಿನಲ್ಲಿ ದಿನದ ಇಪ್ಪತ್ಬಾಲ್ಕು ಗಂಟೆ ಹೆಲ್ಪಲೈನ್ ಸ್ಥಾಪಿಸಬೇಕು: ಯಾವುದೇ ಘಟನೆ ಸಂಭವಿಸಿದ ತಕ್ಷಣ ಸ್ಪಂದಿಸಿ, ಸ್ಥಳಕ್ಕೆ ಧಾವಿಸಬೇಕು, ಪ್ರವಾಹ, ಕಲುಷಿತ ನೀರು, ಕೊಠಡಿ ಸ್ಥಳಾಂತರ ಇತ್ಯಾದಿ ಸಂದರ್ಭದಲ್ಲಿ ತಕ್ಷಣ ಸ್ಪಂದಿಸಬೇಕು. ಕಂಟ್ರೊಲ್ ರೂಂ ವ್ಯವಸ್ಥಿತವಾಗಿ ನಿರ್ವಹಿಸಬೇಕು. ಕಂಟ್ರೋಲ್ ರೂಂನಲ್ಲಿದ್ದವರು ಎಲ್ಲ ಇಲಾಖೆಯ ಸಂಪರ್ಕ ಸಂಖ್ಯೆ ಹೊಂದಿರಬೇಕು. ಅವರು ತಕ್ಷಣ ಸಂಬಂಧಿಸಿದವರಿಗೆ ತಿಳಿಸಬೇಕು ಎಂದರು.
ಪ್ರವಾಹ ಪರಿಸ್ಥಿತಿ: ಮಳೆಗಾಲ ಆರಂಭವಾಗುತ್ತಿದ್ದಂತೆಯೇ ಜಿಲ್ಲೆಯ ಕೃಷ್ಣಾ, ಭೀಮಾ ಮತ್ತು ದೋಣಿ ನದಿಗಳಿಗೆ ಯಾವುದೇ ಸಂದರ್ಭದಲ್ಲಿ ಪ್ರವಾಹ ಬರಬಹುದು. ಹಾಗಾಗಿ ನದಿ ಪಾತ್ರದಲ್ಲಿ ನಿರಂತರ ನಿಗಾ ಮತ್ತು ಪ್ರವಾಹ ಮುನ್ನೆಚ್ಚರಿಕೆ ವಹಿಸಬೇಕು. ಮಳೆ ಹಾಗೂ ಜಲಾಶಯಗಳಲ್ಲಿನ ನೀರಿನ ಲಭ್ಯತೆಯ ಮಾಹಿತಿಯನ್ನು ಪ್ರತಿದಿನ ಸಂಗ್ರಹಿಸಿ, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಪ್ರಕೃತಿ ವಿಕೋಪದಿಂದ ಉಂಟಾಗುವ ಹಾನಿಗಳಿಗೆ ನಿಯಮಾನುಸಾರ ತಕ್ಷಣವೇ ಪರಿಹಾರ ವಿತರಿಸಲು ಕ್ರಮ ವಹಿಸಬೇಕು ಎಂದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 