ಅಬಕಾರಿ ಇಲಾಖೆ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲ : ಸಚಿವ ತಿಮ್ಮಾಪುರ
ಸುವರ್ಣಸೌಧ 19: ಅಬಕಾರಿ ಇಲಾಖೆಯ ವರ್ಗಾವಣೆಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಸ್ಪಷ್ಟಪಡಿಸಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ. ಎಸ್. ನವೀನ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಅಬಕಾರಿ ಇಲಾಖೆಯಲ್ಲಿ ಡಿಸೇಂಬರ್ 2023 ರಿಂದ ನವೆಂಬರ್ 2024 ರ ವರೆಗೆ ಗ್ರೂಪ್ ಎ, ಬಿ ಮತ್ತು ಸಿ ವೃಂದದಲ್ಲಿ 336 ವರ್ಗಾವಣೆಯಾಗಿದ್ದು ಇದರಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಸಚಿವರು ತಿಳಿಸಿದರು.
ಪ್ರಸಕ್ತ ಆರ್ಥಿಕ ಸಾಲಿನ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ಮಾಹೆಗಳಲ್ಲಿ ಜಟ ಠಿಡಿಜಟಣಟ ಮತ್ತು ಠಿಡಿಜಟಣಟ ಮದ್ಯದ ಸ್ಲಾಬ್‌ಗಳ ಮದ್ಯ ಮಾರಾಟದ ಪಾಲು ಶೇ.21.03 ರಷ್ಟಾಗಿರುತ್ತದೆ. ಅಂದರೆ, ಜಟ ಠಿಡಿಜಟಣಟ ಮತ್ತು ಠಿಡಿಜಟಣಟ ಮದ್ಯದ ಬ್ರಾಂಡ್‌ಗಳ ಮಾರಾಟದಲ್ಲಿ ಶೇ. 6.85 ರಷ್ಟು ಹೆಚ್ಚಳವಾಗಿರುತ್ತದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಜಟ ಠಿಡಿಜಟಣಟ ಮತ್ತು ಠಿಡಿಜಟಣಟ ಬ್ರಾಂಡ್‌ಗಳ ಬಳಕೆ ಹೆಚ್ಚಾಗುವ ಮೂಲಕ ಮಾರಾಟ ಹೆಚ್ಚಳದಿಂದ ರಾಜಸ್ವ ಸಂಗ್ರಹಣೆಯಲ್ಲಿ ಧನಾತ್ಮಕ ಬೆಳವಣಿಗೆ ಕಂಡು ಅಂದಾಜಿಸಲಾಗಿದೆ ಎಂದರು.
ಅಕ್ರಮ ಮದ್ಯ ಮಾರಾಟ ವಿರುದ್ಧ ಕಠಿಣ ಕ್ರಮ : ಸಚಿವ ತಿಮ್ಮಾಪುರ
ಬೆಳಗಾವಿ ಸುವರ್ಣಸೌಧ, ಡಿ.19. ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಸ್ಪಷ್ಟಪಡಿಸಿದರು.
ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಸುನಿಲ್ ಗೌಡ ಪಾಟೀಲ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ ಕಳೆದ ಮೂರು ವರ್ಷಗಳಲ್ಲಿ ಒಟ್ಟು 5751 ದಾಳಿಗಳನ್ನು ನಡೆಸಿ, 4437 ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಕರಣಗಳಲ್ಲಿ ಭಾಗಿಯಾದ 5021 ಆರೋಪಿತರನ್ನು ದಸ್ತಗಿರಿ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.