ನ್ಯೂಜಿಲ್ಯಾಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯ: ಬೌಲಿಂಗ್ ವಿಭಾಗದಲ್ಲಿ ಬದಲಾವಣೆ
ಮುಂಬೈ 29: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧ ಸತತ ಎರಡು ಟೆಸ್ಟ್ ಪಂದ್ಯಗಳಲ್ಲಿ ಸೋಲು ಕಂಡಿರುವ ಭಾರತ ತಂಡವು ಮೂರನೇ ಪಂದ್ಯಕ್ಕಾಗಿ ತಂಡದಲ್ಲಿ ಕೆಲ ಬದಲಾವಣೆ ಮಾಡಿಕೊಂಡಿದೆ. ವೈಟ್ ವಾಶ್ ತಪ್ಪಿಸಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿರುವ ರೋಹಿತ್ ಬಳಗವು ಮೂರನೇ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಮುಂಬೈನ ವಾಂಖೆಡೆ ಮೈದಾನದಲ್ಲಿ ನವೆಂಬರ್ 1ರಿಂದ ಮೂರನೇ ಮತ್ತು ಸರಣಿಯ ಅಂತಿಮ ಪಂದ್ಯ ನಡೆಯಲಿದೆ. ಹೀಗಾಗಿ ತನ್ನ ಬೌಲಿಂಗ್ ವಿಭಾಗದಲ್ಲಿ ಒಂದು ಬದಲಾವಣೆ ಮಾಡಿದೆ.
ಡೆಲ್ಲಿಯ ವೇಗಿ ಹಷರ್ಿತ್ ರಾಣಾ ಅವರನ್ನು ಕಿವೀಸ್ ವಿರುದ್ಧದ ಮೂರನೇ ಪಂದ್ಯಕ್ಕಾಗಿ ಸ್ಕ್ವಾಡ್ಗೆ ಸೇರಿಸಲಾಗಿದೆ