ಇದು ನೀರಲ್ಲ, ವಿಷ
This is not water, it's poison
ಇಂದೋರ್: ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದ ಕಲುಷಿತ ನೀರು ಸೇವನೆ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದಿದೆ. ಐದು ತಿಂಗಳ ಶಿಶು ಸೇರಿದಂತೆ ಕನಿಷ್ಠ ಹತ್ತು ಜನರು ಕಲುಷಿತ ಕುಡಿಯುವ ನೀರಿನಿಂದ ಉಂಟಾದ ಅತಿಸಾರದಿಂದ ಸಾವನ್ನಪ್ಪಿದ್ದಾರೆ. ಬಿಜೆಪಿ ನೇತೃತ್ವದ ಆಡಳಿತವಿರುವ ರಾಜ್ಯದಲ್ಲಿ ನಡೆದ ಘಟನೆಯ ಬಳಿಕ ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕೆ ಮಾಡಿದೆ. ಬಿಜೆಪಿ ಸರ್ಕಾರವು ರಾಜ್ಯದ ಮನೆಗಳಿಗೆ "ವಿಷ" ಪೂರೈಕೆಗೆ ಅವಕಾಶ ನೀಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
"ಇಂದೋರ್ನಲ್ಲಿ ನೀರನ್ನು ವಿತರಿಸಲಾಗಿಲ್ಲ, ಬದಲಾಗಿ ವಿಷವನ್ನು ವಿತರಿಸಲಾಗಿದೆ, ಆದರೆ ಆಡಳಿತವು ಗಾಢ ನಿದ್ರೆಯಲ್ಲಿದೆ" ಎಂದು ರಾಹುಲ್ ಗಾಂಧಿ ಎಕ್ಸ್ ಪೋಸ್ಟ್ ನಲ್ಲಿ ಬರೆದಿದ್ದಾರೆ. ದುರ್ವಾಸನೆ ಮತ್ತು ಕೊಳಕು ನೀರಿನ ಬಗ್ಗೆ ನಿವಾಸಿಗಳಿಂದ ಪದೇ ಪದೇ ದೂರುಗಳು ಬಂದಿದ್ದರೂ ಗಂಭೀರ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಕುಡಿಯುವ ನೀರಿನ ಪೈಪ್ ನೊಳಗೆ ಚರಂಡಿ ನೀರು ಹೇಗೆ ಸೇರಿತು ಮತ್ತು ಇದನ್ನು ಸಮಯಕ್ಕೆ ಸರಿಯಾಗಿ ಯಾಕೆ ತಡೆದಿಲ್ಲ ಎಂದು ಕಾಂಗ್ರೆಸ್ ಸಂಸದ ಪ್ರಶ್ನಿಸಿದರು. "ಇವು ಉಚಿತ ಪ್ರಶ್ನೆಗಳಲ್ಲ. ಇದು ಹೊಣೆಗಾರಿಕೆಯ ಬೇಡಿಕೆ. ಶುದ್ಧ ನೀರು ಒಂದು ಔದಾರ್ಯವಲ್ಲ, ಅದು ಬದುಕುವ ಹಕ್ಕು" ಎಂದು ರಾಹುಲ್ ಹೇಳಿದರು. ಆ ಹಕ್ಕನ್ನು ಕೊಂದಿದ್ದಕ್ಕೆ ಬಿಜೆಪಿಯ "ಡಬಲ್ ಎಂಜಿನ್" ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿದರು.
ರಾಹುಲ್ ಗಾಂಧಿ ಅವರು ಇಂದೋರ್ ಸಾವುಗಳನ್ನು ಮಧ್ಯಪ್ರದೇಶದಲ್ಲಿ ವ್ಯಾಪಕ ಆಡಳಿತ ಕುಸಿತ ಎಂದು ಬಣ್ಣಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿನ ಕೆಮ್ಮು ಸಿರಪ್ ಮತ್ತು ನಿರ್ಲಕ್ಷ್ಯಕ್ಕೆ ಸಂಬಂಧಿಸಿದ ಸಾವುಗಳು ಸೇರಿದಂತೆ ಹಿಂದಿನ ಘಟನೆಗಳನ್ನು ಉಲ್ಲೇಖಿಸಿದ್ದಾರೆ. "ಬಡವರು ಸತ್ತಾಗ ಮೋದಿ ಜಿ ಯಾವಾಗಲೂ ಮೌನವಾಗಿರುತ್ತಾರೆ" ಎಂದು ಅವರು ಹೇಳಿದರು.
ಭಾಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರಿನಿಂದ ಉಂಟಾದ ಅತಿಸಾರದಿಂದ ಹತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಇಂದೋರ್ ಮೇಯರ್ ಪುಷ್ಯಮಿತ್ರ ಭಾರ್ಗವ ಹೇಳಿದ್ದಾರೆ. ಆದರೆ, ಆರು ತಿಂಗಳ ಶಿಶು ಸೇರಿದಂತೆ 14 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ಆರೋಗ್ಯ ಇಲಾಖೆ ಈ ಹೆಚ್ಚಿನ ಸಂಖ್ಯೆಯನ್ನು ದೃಢಪಡಿಸಿಲ್ಲ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 