ಯುವನಿಧಿ ಯೋಜನೆಯ ಸೌಲಭ್ಯ ಅರ್ಹರು ಪಡೆದುಕೊಳ್ಳಬೇಕು : ಬಿ.ಬಿ.ಅಸೂಟಿ
Those eligible should avail the benefits of the Youth Fund Scheme: B.B. Asuti
ಗದಗ 14 : ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಯುವ ನಿಧಿ ಯೋಜನೆಯ ಸೌಲಭ್ಯವನ್ನು ಅರ್ಹರು ಪಡೆದುಕೊಳ್ಳಬೇಕು. ಯುವಕರು ಉದ್ಯೋಗ ತರಬೇತಿ ಜೊತೆಗೆ ಕೌಶಲ್ಯಾಭಿವೃದ್ಧಿ ಬೆಳೆಸಿಕೊಳ್ಳಲು ಈ ಕಾರ್ಯಾಗಾರ ಸಹಕಾರಿಯಾಗಲಿದೆ ಎಂದು ಗದಗ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ ತಿಳಿಸಿದರು.
ನಗರದ ಆದರ್ಶ ಶಿಕ್ಷಣ ಸಮಿತಿಯ ವಾಣಿಜ್ಯ ಮಹಾವಿದ್ಯಾಲಯದ ಎಸ್. ಜೆ. ಹಾಲ್ ದಲ್ಲಿ ಮಂಗಳವಾರ ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆ, ಆದರ್ಶ ಶಿಕ್ಷಣ ಸಮಿತಿಯ ವಾಣಿಜ್ಯ ಮಹಾವಿದ್ಯಾಲಯ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಸಮಾಲೋಚನೆ ಮತ್ತು ಉದ್ಯೋಗಕೋಶ ಆಯೋಜಿಸಲಾದ ವೃತ್ತಿ ಮಾರ್ಗದರ್ಶನ , ಯುವ ನಿಧಿ ಮತ್ತು ಸಂಚಾರಿ ನೋಂದಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪದವಿ ಅಥವಾ ಡಿಪ್ಲೋಮಾ ಮುಗಿಸಿದ ಯುವಕರಿಗೆ ಉದ್ಯೋಗ ತರಬೇತಿಯ ಜೊತೆಗೆ ಕೌಶಲ್ಯ ಅಭಿವೃದ್ಧಿ ತರಬೇತಿ ಕೊಡುವುದು ಈ ಕಾರ್ಯಾಗಾರದ ಉದ್ದೇಶವಾಗಿದೆ. ರಾಜ್ಯ ಸರ್ಕಾರ 2023 ಚುನಾವಣೆ ಪೂರ್ವದಲ್ಲಿಯೇ 5 ಗ್ಯಾರಂಟಿಗಳನ್ನು ಉಚಿತವಾಗಿ ಕೊಡುವ ಕುರಿತು ಭರವಸೆ ನೀಡಿತ್ತು. ಅದರಂತೆಯೇ ಅನ್ನಭಾಗ್ಯ, ಗೃಹಲಕ್ಷ್ಮೀ, ಶಕ್ತಿ, ಗೃಹಜ್ಯೋತಿ, ಯುವನಿಧಿ ಈ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಬಡಜನರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಿ ಅವರ ಬದುಕನ್ನು ಹಸನಾಗಿಸಿದೆ.
ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿದೆ. ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3000 ಮತ್ತು ಡಿಪ್ಲೋಮಾ ಹೊಂದಿರುವವರಿಗೆ 1,500 ಮಾಸಿಕ ಭತ್ಯೆಯನ್ನು ಗರಿಷ್ಟ 2 ವರ್ಷಗಳವರಗೆ ಅಥವಾ ಉದ್ಯೋಗ ಸಿಗುವವರೆಗೆ ಒದಗಿಸುತ್ತದೆ. ಯುವನಿಧಿ ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು. ಉದ್ಯೋಗಕ್ಕೆ ಸಹಾಯಕವಾಗುವ ಕೌಶಲ್ಯತೆಯನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಅವರು ಮಾತನಾಡಿ ಯುವನಿಧಿ ಯೋಜನೆಯು ಯುವಕರಿಗೆ ಡಿಗ್ರಿ ಮುಗಿದ ನಂತರ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಯುವಕರು ಯೋಜನೆಯ ಈ ಹಣವನ್ನು ಪಾಕೆಟ್ ಮನಿ ಎಂದು ಬಳಸಿಕೊಳ್ಳದೇ ಉದ್ಯೋಗಕ್ಕೆ ಸಹಾಯವಾಗುವ ಕೌಶಲ್ಯತೆಯನ್ನು ಬೆಳೆಸಿಕೊಳ್ಳಲು ಉಪಯೋಗಿಸಬೇಕು ಎಂದು ತಿಳಿಸಿದರು. ಆನಂದ ಹೊಂಬಳ ಅವರು ರಾಜ್ಯ ಸರ್ಕಾರದ ಯುವನಿಧಿ ಯೋಜನೆ ವೃತ್ತಿ ಮಾರ್ಗದರ್ಶನ ಕುರಿತು ಹಾಗೂ ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತು ವಿವರಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 