ಹುಬ್ಬಳ್ಳಿ ಬೆಂಗಳೂರು ವಿಶೇಷ ರೈಲನ್ನು ಚಲೋ ನಡೆಸುವವರು ಬಳಸಿಕೊಳ್ಳಿ: ಅಲ್ಲಮಪ್ರಭು
Those who run Chalo should use the Hubballi-Bengaluru special train: Allama Prabhu
ಕೊಪ್ಪಳ 20: ನಗರಸಭೆ ಆವರಣದಲ್ಲಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ ಕ್ರಿಯಾ ವೇದಿಕೆಯಿಂದ ಬಲ್ಡೋಟ ಹಟಾವೋ, 20 ಕಾರ್ಖಾನೆ ಬಾಧಿತ ಹಳ್ಳಿಯ 50 ಸಾವಿರ ಜನರ ಜೀವ, ಆರೋಗ್ಯ ಉಳಿಸಿ, ಬಸಾಪುರ ಕೆರೆ ಸಾರ್ವಜನಿಕರಿಗೆ ಮುಕ್ತಗೊಳಿಸಿ, ತುಂಗಭದ್ರಾ ನದಿ ನೀರು ವಿಷಗೊಳಿಸಿದ ಕಾರ್ಖಾನೆಗಳನ್ನು ಮುಚ್ಚಲು ಆಗ್ರಹಿಸಿ ನಡೆದ 140ನೇ ದಿನದ ಧರಣಿ ಪೂರ್ಣಗೊಳಿಸಿತು.
ವೇದಿಕೆಯ ಪ್ರಧಾನ ಸಂಚಾಲಕರಾದ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, ರವಿವಾರ ಹುಬ್ಬಳ್ಳಿಯಿಂದ ಕೊಪ್ಪಳ ಮಾರ್ಗವಾಗಿ ರಾತ್ರಿ 8 ಗಂಟೆಗೆ ವಿಶೇಷ ರೈಲು ಓಡುತ್ತಿದೆ. ಈ ರೈಲಿನಲ್ಲಿ ವಿಧಾನಸೌಧ ಚಲೋ ಹೋರಾಟಕ್ಕೆ ಬರುವವರು 8 ಗಂಟೆಗೆ ಮುಂಚೆ ಕೊಪ್ಪಳ ರೈಲ್ವೆ ನಿಲ್ದಾಣಕ್ಕೆ ಬರಬೇಕು. ಕೊಲ್ಲಿ ಯುದ್ಧದ ಕಾರಣ ಇಂಧನ ಕೊರತೆಯಾಗಿ, ಗ್ಯಾಸ್ ಸಿಲಿಂಡರ್ ಪೂರೈಕೆ ಇಲ್ಲದ್ದರಿಂದ ಬೆಂಗಳೂರು ಕೆಲವು ಹೊಟೇಲ್ ಗಳು ಬಂದ್ ಆಗಿವೆ. ಹೋರಾಟಕ್ಕೆ ಬರುವವರು ರೊಟ್ಟಿ ಬುತ್ತಿ ಕಟ್ಟಿಕೊಂಡು ಸತ್ಯಾಗ್ರಹಕ್ಕೆ ಬನ್ನಿ ಎಂದರು.ಧರಣಿಯಲ್ಲಿ ಮಹಿಳಾ ನಾಯಕಿ ಕಾವ್ಯ ಗಡಾದ,
ಸಂಚಾಲಕರಾದ ಮಲ್ಲಿಕಾರ್ಜುನ ಬಿ. ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಸಂತೋಷ ದೇಶಪಾಂಡೆ, ನಿವೃತ್ತ ಪ್ರಾಚಾರ್ಯರಾದ ಎಸ್.ಬಿ. ರಾಜೂರು, ಬಿ.ಜಿ. ಕರಿಗಾರ, ಡಾ. ಬಸವರಾಜ ಪೂಜಾರ, ನಿವೃತ್ತ ನ್ಯಾಯಾಂಗ ಅಧಿಕಾರಿ ಜಿ.ಬಿ.ಪಾಟೀಲ್, ನಿವೃತ್ತ ಉಪನ್ಯಾಸಕ ಶಂಭುಲಿಂಗಪ್ಪ ಹರಗೇರಿ, ರಾಜಶೇಖರ ಏಳುಬಾವಿ, ಮಹಾದೇವಪ್ಪ ಮಾವಿನಮಡು, ಮಖ್ಬುಲ್ ರಾಯಚೂರು, ವಿಜಯ ಮಹಾಂತೇಶ ಹಟ್ಟಿ, ಮಂಜುನಾಥ ಎಚ್. ಮ್ಯಾಗಳಮನಿ, ರವಿ ಸಾಯಿನಾಥ್, ರೇವಣಸಿದ್ದಯ್ಯ ಚಿತ್ರಗಾರ, ನಾಗರಾಜ ಕುಷ್ಟಗಿ, ಶಿವಾನಂದಯ್ಯ ಬೀಳಗಿಮಠ, ಶಿವಪ್ಪ ಜಲ್ಲಿ ಇತರರು ಪಾಲ್ಗೊಂಡಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 