ದೇಶದ ಏಕತೆಗೆ ಧಕ್ಕೆ: ನಾಗೇಶ ಹೆಗಡ್ಯಾಳ
Threat to the unity of the country: Nagesh Hegdyal
ಲೋಕದರ್ಶನ ವರದಿ
ಇಂಡಿ 28 : ಹಿಂದಿ ವಿಷಯದಲ್ಲಿ ಶಾಲಾ ಶಿಕ್ಷಣ ಇಲಾಖೆ ತೆಗೆದುಕೊಂಡ ಹೊಸ ನಿಯಮವನ್ನು ದೇಶದ ಏಕತೆ ಹಾಗೂ ದೇಶೀಯ ಭಾಷೆಗಳ ಹಿತರಕ್ಷಣೆಯ ದೃಷ್ಟಿಯಿಂದ ಈ ನಿರ್ಧಾರವನ್ನು ಮರು ಪರೀಶೀಲಿಸಬೇಕು ಎಂದು ಬಿಜೆಪಿ ಮುಖಂಡರಾದ ನಾಗೇಶ ಹೆಗಡ್ಯಾಳ ಒತ್ತಾಯಿಸಿದ್ದಾರೆ. ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳಿಗೆ 2026ರ ಪರೀಕ್ಷೆಯಿಂದಲೇ ಅನ್ವಯವಾಗುವಂತೆ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಅಂಕ ನೀಡುವ ಪದ್ಧತಿ ಕೈಬಿಟ್ಟು, ಗ್ರೇಡ್ ಎ,ಬಿ,ಸಿ,ಡಿ ಎಂದು ನಮೂದಿಸಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ.
ಹಿಂದಿ ಭಾಷೆಯ ಶಿಕ್ಷಕರ ಭವಿಷ್ಯದ ದೃಷ್ಟಿಯಿಂದ ಹಾಗೂ ಮಕ್ಕಳ ಸರ್ವಾಂಗಿಣ ವಿಕಸನದ ದೃಷ್ಟಿಯಿಂದ ಸರ್ಕಾರವು ಈ ನಿರ್ಧಾರವನ್ನು ಕೈಬಿಡಬೇಕು ಎಂದರು. ನಮ್ಮ ರಾಜ್ಯದ ಮಕ್ಕಳು ಮುಂದೆ ಐಎಎಸ್, ಐಪಿಎಲ್, ಐಎಫ್‌ಎಸ್ ನಂತಹ ದೊಡ್ಡ ಹುದ್ದೆಗಳಿಗೆ ಆಯ್ಕೆಯಾದ ನಂತರ ದೇಶದ ಯಾವುದೇ ಭಾಗದಲ್ಲಿ ಸೇವಿ ಸಲ್ಲಿಸಲು ಹೋದಾಗ ಹಿಂದಿ ಓದಲು, ಬರೆಯಲು, ಮಾತನಾಡಲು ಅಡಚಣೆಯಾಗುತ್ತದೆ ಎಂದು ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 