ಮುಂಬೈ, ಜೂನ್ 30; ಪಾಕಿಸ್ತಾನದಿಂದ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ವಾಣಿಜ್ಯನಗರಿಯ ತಾಜ್ ಹೋಟೆಲ್ ಮತ್ತು ಗೇಟ್ ವೇ ಆಫ್ ಇಂಡಿಯಾದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ. ಸೋಮವಾರ ಮಧ್ಯರಾತ್ರಿಯ ನಂತರ ಹೋಟೆಲ್ ಅನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ನಂತರ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಹದ್ದಿನ ಕಣ್ಣಿಡಲಾಗಿದ್ದು, ವಾಹನಗಳ ತಪಾಸಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.