ಯಡಿಯೂರಪ್ಪ ಅವರನ್ನು ಕಟ್ಟಿಹಾಕಲು ಮೂರು ಡಿಸಿಎಂ ಹುದ್ದೆ: ಸಿದ್ದರಾಮಯ್ಯ
ಬೆಂಗಳೂರು, ಆ 27 ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ವರಿಷ್ಠರಿಗೆ ಇಷ್ಟವಿರಲಿಲ್ಲ, ಯಡಿಯೂರಪ್ಪ ಅವರನ್ನು ಕಟ್ಟಿಹಾಕಲು ಸರ್ಕಾರದಲ್ಲಿ ಮೂರು ಉಪ ಮುಖ್ಯಮಂತ್ರಿ ಸ್ಥಾನ ಸೃಷ್ಟಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬಾಗಲಕೋಟೆಯ ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರನ್ನೂ ಸಮಾಧಾನಪಡಿಸಲು ಡಿಸಿಎಂ ಹುದ್ದೆ ಸೃಷ್ಟಿ ಮಾಡಲಾಗಿದೆ. ಉಪ ಮುಖ್ಯಮಂತ್ರಿ ಹುದ್ದೆ ಸಂವಿಧಾನಬದ್ಧ ಹುದ್ದೆಯಲ್ಲ. ಅದಕ್ಕೆ ಯಾವುದೇ ಮಹತ್ವವಿಲ್ಲ ಹಾಗೂ ಯಾವುದೇ ಅಧಿಕಾರ ಕೂಡ ಇಲ್ಲ ಎಂದು ಹೇಳಿದರು. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಹೈಕಮಾಂಡ್ಗೆ ಇಷ್ಟವಿರಲಿಲ್ಲ. ಚುನಾವಣೆಗೆ ಹೋಗಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದರು. ಆದರೆ ಯಡಿಯೂರಪ್ಪ ಅವರು ಬಿಜೆಪಿ ವರಿಷ್ಠರನ್ನು ಗೋಗರೆದು ಮುಖ್ಯಮಂತ್ರಿಯಾಗಿದ್ದಾರೆ ಎಂದು ಹೇಳಿದ ಅವರು, ಸರ್ಕಾರ ಹೆಚ್ಚು ದಿನ ಇರುವುದಿಲ್ಲ, ನಮಗೆ ಸರ್ಕಾರದಲ್ಲಿ ಹಸ್ತಕ್ಷೇಪ ಮಾಡಲು ಇಷ್ಟವಿಲ್ಲ, ಈ ಬಗ್ಗೆ ಹೇಳಿಕೆ ಕೂಡ ಕೊಡಲು ಇಷ್ಟವಿಲ್ಲ, ಅಸಮಾಧಾನ ಸ್ಫೋಟಗೊಂಡು ಸರ್ಕಾರ ಸಂಕಷ್ಟಕ್ಕೆ ಸಿಲುಕಲಿದೆ ಎಂದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 