ಯಡಿಯೂರ್ಪ ಅವರ ಅಭಿಮಾನೋತ್ಸವದಲ್ಲಿ ಭಾಗವಹಿಸಲು ಮೂರು ಉಚಿತ ಬಸ್ ವ್ಯವಸ್ಥೆ.ಅಧ್ಯಕ್ಷ.ಎಸ್.ಎಂ.ನಾಗರಾಜಸ್ವಾಮಿ
Three free buses to participate in Yediyurappa's fanfare. President S.M. Nagarajaswamy
ಲೋಕದರ್ಶನ ವರದಿ
ಕಂಪ್ಲಿ : ಮಾಜಿ ಮುಖ್ಯಮಂತ್ರಿ ಯಡಿಯೂರ್ಪ ಅವರು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಚಿತ್ರದುರ್ಗದಲ್ಲಿ ಮೇ.9ರಂದು ಅಭಿಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಂಪ್ಲಿ ತಾಲೂಕು ಸೇರಿದಂತೆ ಜಿಲ್ಲೆಯ ವೀರಶೈವ ಲಿಂಗಾಯತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ವೀರಶೈವ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಎಂ. ನಾಗರಾಜಸ್ವಾಮಿ ಮನವಿ ಮಾಡಿದರು.ಅವರು ಪಟ್ಟಣದ ಶಾರದಾ ಶಾಲೆಯ ವೀರಶೈವ ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ರಾಜ್ಯದ ಅಭಿವೃದ್ದಿಗಾಗಿ ಹಗಲು ಇರಳು ಶ್ರಮಿಸಿದ ಜೊತೆಗೆ ಸಾರ್ವಜನಿಕರ ಸೇವೆಗಾಗಿ ಯಡಿಯೂರ್ಪರವರು ಇಡೀ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ.
ಆದ್ದರಿಂದ ಇವರ ಜನ್ಮದಿನದ ಅಂಗವಾಗಿ ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ನಡೆಯಲಿದ್ದು, ಆ ಕಾರ್ಯಕ್ರಮಕ್ಕೆ ತೆರಳಲು ಕಂಪ್ಲಿ ಪಟ್ಟಣದ ಶಾರದಾ ಶಾಲೆ ಆವರಣದಿಂದ ಮೇ.9ರ ಬೆಳಿಗ್ಗೆ 7ಕ್ಕೆ ಚಿತ್ರದುರ್ಗಕ್ಕೆ ಮೂರು ಉಚಿತ ಬಸ್ ವ್ಯವಸ್ಥೆ ಜೊತೆಗೆ ಉಪಹಾರ ವ್ಯವಸ್ಥೆ ಮಾಡಲಾಗಿದೆ. ಎಂದರು ಅಭಿಮಾನೊತ್ಸವದಲ್ಲಿ ಪಾಲ್ಗೊಳ್ಳುವ ಆಸಕ್ತ ವೀರಶೈವ ಲಿಂಗಾಯತರು ಮೊ-ಎಲಿಗಾರ ವೆಂಕಟ ರೆಡ್ಡಿ ನಂ-98801 02196), ಎಚ್.ಎಸ್. ವೀರೇಶ್(ಮೊ.ನಂ+70193 53636) ಇವರನ್ನು ಸಂಪರ್ಕಿಸಿ ಹೆಸರು ನೋಂದಾಯಿಸುವಂತೆ ತಿಳಿಸಿದ್ದಾರೆ.ಈ ಸಭೆಯಲ್ಲಿ ಮುಖಂಡರಾದ ಕೆ.ಎಂ. ಹೇಮಯ್ಯಸ್ವಾಮಿ, ಶಿವಪುತ್ರ್ಪ ಹೊನ್ನಳ್ಳಿ, ಇಟಗಿ ಬಸವ ರಾಜಗೌಡ, ಅಳ್ಳಳ್ಳಿ ವೀರೇಶ, ವಾಗೀಶ ಪಂಡಿತಾರಾಧ್ಯ, ಪುಟ್ಟಿ ಸಚಿನ್, ರೇಣುಕ ಯ್ಯಸ್ವಾಮಿ, ಸಂಘದ ಪದಾಧಿಕಾರಿಗಳು, ಸಮುದಾಯದವರು ಉಪಸ್ಥಿತರಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 